Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಸ್ಥಳೀಯ ಸುದ್ದಿ

ಕೃಷಿ ಪ್ರಶಸ್ತಿಯಡಿ ಬೆಳೆ ಸ್ಪರ್ಧೆಗೆ ಅರ್ಜಿ ಆಹ್ವಾನ



ಕೊಪ್ಪಳ ಜುಲೈ 07: 2025-26 ನೇ ಸಾಲಿನಲ್ಲಿ ಕೃಷಿ ಪ್ರಶಸ್ತಿಯಡಿ ಮುಂಗಾರು ಹಂಗಾಮಿನ ಬೆಳೆ ಸ್ಪರ್ಧೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಕೃಷಿ ಪ್ರಶಸ್ತಿ ಮಾರ್ಗಸೂಚಿಯ ಕೆಲವು ಮಾನದಂಡಗಳನ್ನು ಪರಿಷ್ಕರಿಸಿ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗುವುದು.

ಆಸಕ್ತ ರೈತ ಮತ್ತು ರೈತ ಮಹಿಳೆಯರು ಪ್ರತ್ಯೇಕವಾಗಿ ಅಗತ್ಯ ದಾಖಲಾತಿಗಳೊಂದಿಗೆ ರೈತರ ಎಫ್‌ಐಡಿಯನ್ನು ಬಳಸಿಕೊಂಡು K-Kisan Portal ರಡಿ Citizen Login ಅಥವಾ RSK Login ಮೂಲಕ ಹತ್ತಿರದ ರೈತ ಸಂಪರ್ಕ ಕೇಂದ್ರ /ನಾಗರಿಕ ಸೇವಾ ಕೇಂದ್ರ/ ಸ್ವತಃ ಆಗಸ್ಟ್ 30 ರೊಳಗೆ ಅರ್ಜಿ ಸಲ್ಲಿಸಬೇಕು.

ಈ ಹಿಂದೆ ಕೃಷಿ ಪ್ರಶಸ್ತಿ ಪಡೆದವರು ಮತ್ತೆ ಸ್ಪರ್ಧಿಸುವಂತಿಲ್ಲ. ಕೇಂದ್ರ ಅಥವಾ ರಾಜ್ಯ ಸರ್ಕಾರಿ ಸೇವೆಯಲ್ಲಿರುವ ಯಾವುದೇ ಇಲಾಖೆ/ವಿಶ್ವವಿದ್ಯಾಲಯ/ಸರ್ಕಾರಿ ಸ್ವಾಮ್ಯದ ಸಂಸ್ಥೆಗಳ ನೌಕರರು ಮತ್ತು ಅವರ ಕುಟುಂಬದ ಸದಸ್ಯರು ಸ್ಪರ್ಧೆಯಲ್ಲಿ ಭಾಗವಹಿಸುವಂತಿಲ್ಲ. ಆದರೆ ಕೃಷಿ ಮತ್ತು ಕೃಷಿ ಸಂಬAಧಿತವಾದ ಜಲಾನಯನ ಅಭಿವೃದ್ದಿ, ತೋಟಗಾರಿಕೆ, ರೇಷ್ಮೆ, ಮೀನುಗಾರಿಕೆ ಮತ್ತು ಪಶು ವೈದ್ಯಕೀಯ ಇಲಾಖೆ/ವಿಶ್ವವಿದ್ಯಾಲಯ/ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಲ್ಲಿ ತಾಂತ್ರಿಕ ಹುದ್ದೆಗಳಲ್ಲಿ ಕೆಲಸ ನಿರ್ವಹಿಸಿ, ನಿವೃತ್ತರಾದ ನೌಕರರು ಮತ್ತು ಅವರ ಕುಟುಂಬವರ್ಗದವರನ್ನು ಹೊರತುಪಡಿಸಿ ಈ ಇಲಾಖೆಗಳಲ್ಲಿನ ನಿವೃತ್ತ ತಾಂತ್ರಿಕೇತರ ನೌಕರರು ಮತ್ತು ಈ ಇಲಾಖೆಗಳನ್ನು ಹೊರತುಪಡಿಸಿ ಉಳಿದ ಇಲಾಖೆಗಳ ನಿವೃತ್ತ ನೌಕರರು ಮತ್ತು ಅವರ ಕುಟುಂಬದವರು ಭಾಗವಹಿಸಬಹುದಾಗಿದೆ.

ಕೃಷಿ ಪ್ರಶಸ್ತಿ ಮಾರ್ಗಸೂಚಿಯ ಮಾನದಂಡಗಳ ಪ್ರಕಾರ ರಾಜ್ಯ/ಜಿಲ್ಲಾ/ತಾಲ್ಲೂಕು ಮಟ್ಟದ ಬೆಳೆ ಸ್ಪರ್ಧೆಗೆ ಅರ್ಹರಾಗಲು ಪುರುಷರ ವಿಭಾಗದಲ್ಲಿ ಕನಿಷ್ಟ 15 ಮತ್ತು ಮಹಿಳೆಯರ ವಿಭಾಗದಲ್ಲಿ ಕನಿಷ್ಟ 07 ಅರ್ಜಿಗಳ ನೋಂದಣಿ ಕಡ್ಡಾಯವಾಗಿರುತ್ತದೆ.

ಜಿಲ್ಲೆಯ ಆಸಕ್ತ ರೈತ ಮತ್ತು ರೈತ ಮಹಿಳೆಯರು ಕಾರ್ಯಕ್ರಮದಡಿ ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಕೊಂಡು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು. ಕೃಷಿ ಪ್ರಶಸ್ತಿ ಯೋಜನೆಯಡಿ ರಾಜ್ಯ/ಜಿಲ್ಲಾ/ತಾಲ್ಲೂಕು ಮಟ್ಟದ ಬೆಳೆ ಸ್ಪರ್ಧೆಗೆ ಮಳೆಯಾಶ್ರಿತ ಬೆಳೆಗಳಾದ ಶೇಂಗಾ, ತೊಗರಿ ಪೂರ್ಣ ಬೆಳೆ, ಮುಸುಕಿನ ಜೋಳ, ನವಣೆ, ಸಜ್ಜೆ ಹಾಗೂ ನೀರಾವರಿ ಬೆಳೆಯಾದ ಭತ್ತದ ಬೆಳೆಯನ್ನು ಸ್ಪರ್ಧೆಗೆ ಆಯ್ಕೆಮಾಡಲಾಗಿದೆ. ಬಹುಮಾನದ ಮೊತ್ತ ಹಾಗೂ ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಗೆ ಭೇಟಿ ನೀಡಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ