Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಸ್ಥಳೀಯ ಸುದ್ದಿ

ಕ್ಷಯ ಪ್ರಕರಣ ಶೂನ್ಯಕ್ಕೆ ತರಲು ಶ್ರಮಿಸಿ: ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ

 

ಬಳ್ಳಾರಿ,ಜ.30
ಜಿಲ್ಲೆಯಲ್ಲಿ ಕ್ಷಯರೋಗ ಪ್ರಕರಣಗಳನ್ನು ಶೂನ್ಯಕ್ಕೆ ತಂದು, ಜಿಲ್ಲೆಯನ್ನು ಕ್ಷಯರೋಗ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಅಧಿಕಾರಿಗಳು ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ, ತಾರಾನಾಥ ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಇವರ ಸಂಯುಕ್ತಾಶ್ರಯದಲ್ಲಿ ನೂತನ ಜಿಲ್ಲಾಡಳಿತ ಭವನದ ಆವರಣದಲ್ಲಿ ಗುರುವಾರ ಆಯೋಜಿಸಿದ್ದ ಕ್ಷಯರೋಗ ಜಾಗೃತಿ ಜಾಥಾಗೆ ಚಾಲನೆ ನೀಡಿ ಅವರು ಮಾತನಾಡಿದರು.
ಈಗಾಗಲೇ ರೋಗ ಪತ್ತೆಹಚ್ಚಲು ನಗರದ ವಿಮ್ಸ್, ಜಿಲ್ಲಾ ಆಸ್ಪತ್ರೆಗಳಲ್ಲಿ ಸಿಬಿನ್ಯಾಟ್ ಯಂತ್ರ ಹಾಗೂ ಟ್ರುನ್ಯಾಟ್ ಮಿಷನ್‌ಗಳಿದ್ದು, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿಯೂ ಅನುಷ್ಠಾನ ಮಾಡಲಾಗಿದೆ. ಇದರಿಂದ ಕ್ಷಯ ಪೀಡಿತರನ್ನು ಶೀಘ್ರವಾಗಿ ಪತ್ತೆ ಹಚ್ಚಿ ಚಿಕಿತ್ಸೆ ನೀಡಲು ಸಹಕಾರಿಯಾಗಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಕ್ಷಯರೋಗ ಪೀಡಿತರನ್ನು ಶೂನ್ಯಕ್ಕೆ ತರಬೇಕು ಹಾಗೂ ವಿವಿಧೆಡೆ ಸಮುದಾಯದಲ್ಲಿ ಗ್ರಾಮವಾರು ಸಮೀಕ್ಷೆ ಕಾರ್ಯ ನಡೆಸಬೇಕು. ಕ್ಷಯರೋಗಕ್ಕೆ ಸಂಬAಧಿಸಿದAತೆ ಆಯುರ್ವೇದದಲ್ಲಿ ಚಿಕ್ಸಿತೆ ನೀಡಬೇಕು. ಇದಕ್ಕೆ ಜಿಲ್ಲಾಡಳಿತದಿಂದ ಸಹಕಾರ ನೀಡಲಾಗುವುದು ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಮಾತನಾಡಿ, ಈ ವರ್ಷದ ಘೋಷವಾಕ್ಯ ‘ಟಿಬಿಯನ್ನು ಸೋಲಿಸಿ ದೇಶವನ್ನು ಗೆಲ್ಲಿಸಿ’ ಎಂಬುದಾಗಿದೆ ಎಂದು ತಿಳಿಸಿದರು.
ಜಾಥಾವು ನಗರದ ಅನಂತಪುರ ರಸ್ತೆಯ ನೂತನ ಜಿಲ್ಲಾಡಳಿತ ಭವನದ ಆವರಣದಿಂದ ಆರಂಭಗೊಂಡು ತಾರಾನಾಥ ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಆವರಣಕ್ಕೆ ತಲುಪಿತು.
ಜಾಥಾದಲ್ಲಿ ಆಯುಷ್ ಇಲಾಖೆಯ ಎಲ್ಲಾ ವೈದ್ಯಾಧಿಕಾರಿಗಳು, ಮಹಾವಿದ್ಯಾಲಯದ ಪ್ರಾಧ್ಯಾಪಕರು, ಸ್ನಾತಕೋತ್ತರ ವಿದ್ಯಾರ್ಥಿಗಳು, ಕಲಿಕೆಯ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ವರ್ಗದವರು ದಾರಿ ಉದ್ದಕ್ಕೂ ಘೋಷಣೆಗಳನ್ನು ಕೂಗುತ್ತಾ ಜನರಲ್ಲಿ ಕ್ಷಯ ರೋಗದ ಬಗ್ಗೆ ಜಾಗೃತಿ ಮೂಡಿಸುತ್ತಾ ಸಾಗಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆಯುಷ್ ಅಧಿಕಾರಿ ಡಾ.ಸರಳಾದೇವಿ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಇಂದ್ರಾಣಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ದಾಸಪ್ಪನವರ, ತಾರಾನಾಥ ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಚಾರ್ಯರಾದ ಡಾ.ಮಾಧವ ದಿಗ್ಗಾವಿ, ಸಹಾಯಕ ಆಡಳಿತಾಧಿಕಾರಿ ಶ್ರೀನಿವಾಸ್, ಎನ್‌ಎಸ್‌ಎಸ್ ಅಧಿಕಾರಿ ಡಾ.ದೊಡ್ಡಬಸಯ್ಯ, ಆಸ್ಪತ್ರೆಯ ಸ್ಥಾಯಿ ವೈದ್ಯಾಧಿಕಾರಿಗಳಾದ ಡಾ.ಕೊಟ್ರೇಶ್, ಡಾ.ರಾಜೇಶ್, ಡಾ.ರವಿ ಚವ್ಹಾಣ್, ಡಾ.ಶಿವು ಅರಕೇರಿ ಸೇರಿದಂತೆ ವಿದ್ಯಾಲಯದ ವಿದ್ಯಾರ್ಥಿಗಳು ಹಾಗೂ ಇತರರು ಭಾಗವಹಿಸಿದ್ದರು.
------------

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ