Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ನಿರ್ಗಮಿತ ಜಿಲ್ಲಾಧಿಕಾರಿ ಹಾಗೂ ಜಿ.ಪಂ ಸಿಇಓ ಅವರಿಗೆ ಆತ್ಮೀಯ ಬೀಳ್ಕೊಡುಗೆ



ಕೊಪ್ಪಳ ಜೂನ್ 21 : ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿಯಾಗಿ ವರ್ಗಾವಣೆಯಾಗಿರುವ ಕೊಪ್ಪಳ ನಿರ್ಗಮಿತ ಜಿಲ್ಲಾಧಿಕಾರಿ ನಲಿನ್ ಅತುಲ್ ಹಾಗೂ ಬೆಂಗಳೂರಿನ ಸೆಂಟರ್ ಫಾರ್ ಸ್ಮಾರ್ಟ್ ಗವರ್ನನ್ಸ್‌ನ ಕಾರ್ಯನಿರ್ವಾಹಕ ನಿರ್ದೇಶಕರಾಗಿ ವರ್ಗಾವಣೆಯಾಗಿರುವ ನಿರ್ಗಮಿತ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೇಯ ಅವರಿಗೆ ಕೊಪ್ಪಳ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ ಹಾಗೂ ವಿವಿಧ ಇಲಾಖೆಗಳ ವತಿಯಿಂದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಸಮಾರಂಭದಲ್ಲಿ ಆತ್ಮೀಯವಾಗಿ ಬೀಳ್ಕೊಡಲಾಯಿತು.

ನಿರ್ಗಮಿತ ಡಿಸಿ ಮತ್ತು ಜಿ.ಪಂ ಸಿಇಓ ಅವರ ಕಾರ್ಯವೈಖರಿ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಅಪರ ಜಿಲ್ಲಾಧಿಕಾರಿಗಳು, ಸಹಾಯಕ ಆಯುಕ್ತರು, ಜಿ.ಪಂ ಉಪಕಾರ್ಯದರ್ಶಿ, ಕೃಷಿ ಇಲಾಖೆ ಜಂಟಿ ನಿರ್ದೇಶಕರು, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು, ತೋಟಗಾರಿಕೆ ಇಲಾಖೆ ಉಪನಿರ್ದೇಶಕರು, ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು, ತಹಶಿಲ್ದಾರರು, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿ ಮತ್ತು ಸಿಬ್ಬಂದಿಗಳು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.

*ನೂತನ ಡಿಸಿ ಮತ್ತು ಸಿಇಓ ಅವರಿಗೆ ಸನ್ಮಾನ:* ಕೊಪ್ಪಳ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ಆಗಮಿಸಿರುವ ಸುರೇಶ ಬಿ. ಇಟ್ನಾಳ ಹಾಗೂ ನೂತನ ಜಿ.ಪಂ ಸಿಇಓ ಆಗಿ ಆಗಮಿಸಿರುವ ವರ್ಣಿತ್ ನೇಗಿ ಅವರಿಗೆ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

ಸಮಾರಂಭದ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ ಅವರು ವಹಿಸಿದ್ದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ, ಜಿ.ಪಂ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಯೋಜನಾ ನಿರ್ದೇಶಕ ಪ್ರಕಾಶ ವಿ., ಕೊಪ್ಪಳ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ರೇಷ್ಮಾ ಹಾನಗಲ್, ಐ.ಎಫ್.ಎಸ್ ಅಧಿಕಾರಿ ಕಾವ್ಯ ಚತುರ್ವೇದಿ ಹಾಗೂ ಜಿಲ್ಲಾಧಿಕಾರಿಗಳ ಶ್ರೀಮತಿಯವರು ಸೇರಿದಂತೆ ಮತ್ತಿತರರಿದ್ದರು.

ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಚಾರ್ಯರಾದ ಕೃಷ್ಣಮೂರ್ತಿ ದೇಸಾಯಿ ಅವರು ಕಾರ್ಯಕ್ರಮ ನಿರೂಪಿಸಿದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ