Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ವ್ಯಸನ ಮುಕ್ತ ದಿನಾಚರಣೆ ಮೂಲಕ ಜಾಗೃತಿ ಮೂಡಿಸಿ: ಅಪರ ಜಿಲ್ಲಾಧಿಕಾರಿ


ಕಾರವಾರ. ಜು.30 - ಮಾದಕ ವ್ಯಸನಗಳ ದುಷ್ಪರಿಣಾಮಗಳ ಕುರಿತಂತೆ ಸಾರ್ವಜನಿಕರಿಗೆ ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಪ್ರಯುಕ್ತ ಆಯೋಜಿಸುವ ವ್ಯಸನ ಮುಕ್ತ ದಿನಾಚರಣೆ ಮೂಲಕ ಜಿಲ್ಲೆಯಾದ್ಯಂತ ಜಾಗೃತಿ ಮೂಡಿಸಿ, ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸುವಂತೆ ಜಿಲ್ಲೆಯ ಎಲ್ಲಾ ತಹಶೀಲ್ದಾರ್ಗಳಿಗೆ ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್ ನಿರ್ದೇಶನ ನೀಡಿದರು.



ಅವರು ಮಂಗಳವಾರ ತಮ್ಮ ಕಚೇರಿ ಸಭಾಂಗಣದಲ್ಲಿ, ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮ ಆಯೋಜನೆ ಕುರಿತು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಆಗಸ್ಟ್ 1 ರಂದು ನಡೆಯುವ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮದಲ್ಲಿ ಕಾಲೇಜು ವಿದ್ಯಾರ್ಥಿಗಳಿಂದ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಜಾಥಾ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ತಿಳಿಸಿದ ಅವರು, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತಂತೆ ತಜ್ಞರಿಂದ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಿ, ಕಾರ್ಯಕ್ರಮದಲ್ಲಿ ಪ್ರತಿಜ್ಞಾ ವಿಧಿ ಬೋಧಿಸುವಂತೆ ತಿಳಿಸಿದರು.



ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆಗಳ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಆಯೋಜಿಸುವಂತೆ ತಿಳಿಸಿದ ಅವರು, ಕಾರ್ಯಕ್ರಮದಲ್ಲಿ ಮನೋವೈದ್ಯರಿಂದ ಉಪನ್ಯಾಸ ಹಾಗೂ ಮದ್ಯ ಮತ್ತು ಮಾದಕ ವ್ಯಸನಗಳಿಂದ ಮುಕ್ತರಾದವರನ್ನು ಅಭಿನಂದನೆ ಕಾರ್ಯಕ್ರಮ ಆಯೋಜಿಸುವಂತೆ ತಿಳಿಸಿದರು.



ಸಭೆಯಲ್ಲಿ ಜಿಲ್ಲಾ ವಾರ್ತಾಧಿಕಾರಿ ಬಿ.ಶಿವಕುಮಾರ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಉಮೇಶ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಸವರಾಜ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ವೀಡಿಯೋ ಕಾನ್ಪ್ರೆನ್ಸ್ ಮೂಲಕ ಎಲ್ಲಾ ತಹಶೀಲ್ದಾರ್ಗಳು ಉಪಸ್ಥಿತರಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ