Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಗ್ಯಾರಂಟಿ ಯೋಜನೆ ಪ್ರಗತಿಗೆ ಧರ್ಮಜ ಉತ್ತಪ್ಪ ಸೂಚನೆ

ಮಡಿಕೇರಿ ಜು.22-ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳ ಪ್ರಗತಿ ಸಂಬಂಧಿಸಿದಂತೆ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಧರ್ಮಜ ಉತ್ತಪ್ಪ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ಸಭೆ ನಡೆಯಿತು.

ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಧರ್ಮಜ ಉತ್ತಪ್ಪ ಅವರು ಸರ್ಕಾರ ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ, ಯುವನಿಧಿ ಹಾಗೂ ಅನ್ನಭಾಗ್ಯ ಯೋಜನೆಯನ್ನು ಜಾರಿಗೊಳಿಸಿದ್ದು, ಈ ಯೋಜನೆಗಳನ್ನು ಅರ್ಹರಿಗೆ ತಲುಪಿಸಬೇಕು ಎಂದು ನಿರ್ದೇಶನ ನೀಡಿದರು.


ಗ್ಯಾರಂಟಿ ಯೋಜನೆಗಳಿಂದ ಅರ್ಹರು ವಂಚಿತರಾಗದಂತೆ ಗಮನಹರಿಸುವುದು ಅಧಿಕಾರಿಗಳ ಜವಾಬ್ದಾರಿ ಆಗಿದೆ. ಆ ನಿಟ್ಟಿನಲ್ಲಿ ಸರ್ಕಾರದ ಉದ್ದೇಶ ಮತ್ತು ಆಶಯದಂತೆ ಗ್ಯಾರಂಟಿ ಯೋಜನೆಗಳನ್ನು ತಲುಪಿಸುವಂತೆ ಸಲಹೆ ಮಾಡಿದರು.

ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ, ಯುವನಿಧಿ, ಅನ್ನಭಾಗ್ಯ ಹೀಗೆ ಪಂಚ ಯೋಜನೆಗಳು ತಲುಪಿದಾಗ ಸರ್ಕಾರಕ್ಕೆ ಹೆಸರು ಬರಲಿದೆ. ಆ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಎಂದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಸಮಸ್ಯೆಗಳು ಇದ್ದಲ್ಲಿ ಮಾಹಿತಿ ನೀಡುವಂತಾಗಬೇಕು ಎಂದು ಧರ್ಮಜ ಉತ್ತಪ್ಪ ಅವರು ಸಲಹೆ ಮಾಡಿದರು.

ಗ್ಯಾರಂಟಿ ಯೋಜನೆಗಳ ಕುಶಾಲನಗರ ತಾಲ್ಲೂಕು ಅನುಷ್ಠಾನ ಸಮಿತಿ ಅಧ್ಯಕ್ಷರಾದ ವಿ.ಪಿ.ಶಶಿಧರ ಅವರು ಮಾತನಾಡಿ ಯುವನಿಧಿ ಯೋಜನೆಯಡಿ ಸಲ್ಲಿಕೆ ಆಗಿರುವ ಬಾಕಿ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ ಸಲಹೆ ಮಾಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಮಾತನಾಡಿ ಗ್ಯಾರಂಟಿ ಯೋಜನೆ ಅನುಷ್ಠಾನದಲ್ಲಿ ವಿಳಂಭ ಮಾಡದೆ, ಕಾಲಮಿತಿಯಲ್ಲಿ ಅರ್ಹರಿಗೆ ಸೌಲಭ್ಯ ಕಲ್ಪಿಸಲು ಪ್ರಯತ್ನಿಸಬೇಕು ಎಂದರು.

ಆಹಾರ ಇಲಾಖೆಯ ಜಂಟಿ ನಿರ್ದೇಶಕರಾದ ಕುಮುದಾ ಶರತ್ ಅವರು ಮಾಹಿತಿ ನೀಡಿ ಜಿಲ್ಲೆಯಲ್ಲಿ 1.30 ಲಕ್ಷ ಗುರಿಯಲ್ಲಿ 97,570 ಜನರಿಗೆ ಅನ್ನಭಾಗ್ಯ ಯೋಜನೆಯಡಿ ಹಣ ಪಾವತಿಯಾಗುತ್ತಿದ್ದು, ಶೇ.98 ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಮಾಹಿತಿ ನೀಡಿದರು.

ಯುವನಿಧಿ ಯೋಜನೆಯು ಪ್ರತೀ ತಿಂಗಳು 3000 ಮತ್ತು 1500 ನಿರುದ್ಯೋಗಿ ಭತ್ಯೆ ನೀಡುವ ಯೋಜನೆಯಾಗಿದ್ದು, ಅರ್ಹರಿಗೆ ತಲುಪಿಸಲು ಪ್ರಯತ್ನಿಸಲಾಗಿದೆ. ಆ ನಿಟ್ಟಿನಲ್ಲಿ ಜಿಲ್ಲೆಯಲ್ಲಿ 562 ಮಂದಿಗೆ ಯೋಜನೆ ತಲುಪುತ್ತಿದೆ. ಒಟ್ಟಾರೆ ಇದುವರೆಗೆ 1030 ಮಂದಿ ಹೆಸರು ನೋಂದಾಯಿಸಿಕೊಂಡಿದ್ದಾರೆ ಎಂದು ರೇಖಾ ಗಣಪತಿ ಅವರು ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ನಟರಾಜು ಅವರು ಗೃಹಲಕ್ಷ್ಮಿ ಯೋಜನೆ ಸಂಬಂಧಿಸಿದಂತೆ ಮಾಹಿತಿ ನೀಡಿ ಜೂನ್‍ವರೆಗೆ ಹಣ ಪಾವತಿಯಾಗಿದ್ದು, ಜುಲೈ ತಿಂಗಳ ಹಣ ಪಾವತಿಗೆ ಬಾಕಿ ಇದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಯಡಿ 1,15,229 ಮಂದಿ ಹೆಸರು ನೋಂದಣಿಯಾಗಿದ್ದು, 1,14,056 ಮಂದಿ ಮಂಜೂರಾಗಿದ್ದು, ಶೇ.98.98 ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ನಟರಾಜು ಅವರು ತಿಳಿಸಿದರು.

ಸೆಸ್ಕ್ ಎಇಇ ವಿನಯ್ ಕುಮಾರ್ ಅವರು ಕೊಡಗು ಜಿಲ್ಲೆಯಲ್ಲಿ ಗೃಹಜ್ಯೋತಿ ಯೋಜನೆಯಡಿ 1,53,623 ಕುಟುಂಬಗಳಲ್ಲಿ 1,51,907 ಕುಟುಂಬಗಳು ನೋಂದಣಿಯಾಗಿದ್ದು, ಶೇ.98.88 ರಷ್ಟು ಪ್ರಗತಿ ಸಾಧಿಸಲಾಗಿದ್ದು, ಮೇ, ಅಂತ್ಯದವರೆಗೆ 5905.30 ಲಕ್ಷ ರೂ. ಸಹಾಯಧನ ಕಲ್ಪಿಸಲಾಗಿದೆ ಎಂದರು.

ಶಕ್ತಿ ಯೋಜನೆಯಡಿ ಆರಂಭದಿಂದ ಇದುವರೆಗೆ 62,04,618 ಮಂದಿ ಮಹಿಳೆಯರು ಪ್ರಯಾಣ ಮಾಡಿದ್ದು, 24.65 ಕೋಟಿ ರೂ. ಭರಿಸಲಾಗಿದೆ ಎಂದು ಕೆಎಸ್‍ಆರ್‍ಟಿಸಿ ಮಡಿಕೇರಿ ಘಟಕ ವ್ಯವಸ್ಥಾಪಕರಾದ ಮೆಹಬೂಬ್ ಅಲಿ ಅವರು ತಿಳಿಸಿದ್ದಾರೆ.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲ್ಲೂಕು ಘಟಕದ ಅಧ್ಯಕ್ಷರಾದ ಮೋಹನ್‍ದಾಸ್(ಮಡಿಕೇರಿ), ಜಾನ್ಸನ್(ವಿರಾಜಪೇಟೆ) ಇತರರು ಇದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ