Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಈಡಿಸ್ ಲಾರ್ವಾ ಉತ್ಪತ್ತಿ ತಾಣ ನಾಶ ಚಟುವಟಿಕೆ’ಗೆ ಡಿಎಚ್‍ಒ ಚಾಲನೆ

ಮಡಿಕೇರಿ ಜೂ.28ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳು ಕಳೆದ ಬಾರಿಗಿಂತ ಈ ಬಾರಿ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆ ಪ್ರತಿಯೊಬ್ಬರಿಗೂ ಆರೋಗ್ಯ ಶಿಕ್ಷಣ ನೀಡುವಂತಾಗಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಸತೀಶ್ ಕುಮಾರ್ ಅವರು ತಿಳಿಸಿದ್ದಾರೆ.

ಹಗಲು ಹೊತ್ತಿನಲ್ಲಿ ಕಚ್ಚುವ ಈಡಿಸ್ ಈಜಿಪ್ಟೈ ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶಮಾಡುವ ನಿಟ್ಟಿನಲ್ಲಿ ಆರೋಗ್ಯ ಮತ್ತು ಆಶಾ ಕಾರ್ಯಕರ್ತರು ವಿವಿಧ ಬಡಾವಣೆಗಳಿಗೆ ಭೇಟಿ ನೀಡಿ ಆರೋಗ್ಯ ಶಿಕ್ಷಣ ಬಗ್ಗೆ ಮಾಹಿತಿ ನೀಡಲಿದ್ದಾರೆ. ಆ ನಿಟ್ಟಿನಲ್ಲಿ ಸಹಕರಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅವರು ಕೋರಿದರು.

ಮನೆಯಲ್ಲಿನ ಸಿಮೆಂಟ್ ತೊಟ್ಟಿ, ಡ್ರಮ್, ಬ್ಯಾರಲ್, ಫಾಟ್, ತೆಂಗಿನ ಚಿಪ್ಪು ಸೇರಿದಂತೆ ಇತರೆ ಕಡೆಗಳಲ್ಲಿ ನೀರು ಶೇಖರಣೆಯಾಗದಂತೆ ಗಮನಹರಿಸಬೇಕು. ತೊಟ್ಟಿ, ಡ್ರಮ್, ಬಕೆಟ್‍ಗಳನ್ನು ವಾರಕ್ಕೊಮ್ಮೆ ಉಜ್ಜಿ ಸ್ವಚ್ಛಗೊಳಿಸಬೇಕು. ಸೊಳ್ಳೆಯ ಮೊಟ್ಟೆಗಳು ನೀರಿಲ್ಲದಿದ್ದರೂ ಒಂದು ವರ್ಷದವರೆಗೆ ಬದುಕಲಿವೆ. ಆದ್ದರಿಂದ ವಾರಕ್ಕೊಮ್ಮೆಯಾದರೂ ಸ್ವಚ್ಚಗೊಳಿಸಬೇಕು ಎಂದು ಸತೀಶ್ ಕುಮಾರ್ ಅವರು ಕರೆ ನೀಡಿದರು.

ಡೆಂಗ್ಯೂ ಜ್ವರವು ಹಗಲು ಹೊತ್ತಿನಲ್ಲಿ ಈಡಿಸ್ ಈಜಿಪ್ಟೈ ಸೊಳ್ಳೆ ಕಚ್ಚುವುದರಿಂದ ಬರಲಿದ್ದು, ಈ ಬಗ್ಗೆ ಹೆಚ್ಚಿನ ಎಚ್ಚರ ವಹಿಸಬೇಕಿದೆ ಎಂದರು.

ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕು ಮತ್ತು ಮಡಿಕೇರಿ ನಗರದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚು ಕಂಡುಬಂದಿದ್ದು, ಈ ಬಗ್ಗೆ ಹೆಚ್ಚಿನ ಎಚ್ಚರವಹಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅವರು ತಿಳಿಸಿದರು.

ಈ ವರ್ಷ ಡೆಂಗ್ಯೂ ಪ್ರಕರಣದಿಂದ ರಾಜ್ಯದಲ್ಲಿ 6 ಜನರು ಮೃತಪಟ್ಟಿದ್ದಾರೆ. ಆ ನಿಟ್ಟಿನಲ್ಲಿ ಪ್ರತೀ ಶುಕ್ರವಾರ ಡೆಂಗ್ಯೂ ಲಾರ್ವಾ ಸರ್ವೆ ಮಾಡಲಾಗುತ್ತದೆ. ಡೆಂಗ್ಯೂ ಬಗ್ಗೆ ಗಂಭೀರವಾಗಿ ಪರಿಗಣಿಸಬೇಕು ಎಂದರು.

ಕೊಡಗು ಜಿಲ್ಲೆಯಲ್ಲಿ ಜವರಿಯಿಂದ ಇಲ್ಲಿಯವರೆಗೆ 94 ಡೆಂಗ್ಯೂ ಪ್ರಕರಣಗಳು ಕಂಡು ಬಂದಿದೆ. ಮಡಿಕೇರಿ ತಾಲ್ಲೂಕಿನಲ್ಲಿ ಜನವರಿಯಿಂದ ಇಲ್ಲಿಯವರೆಗೆ 9 ಪ್ರಕರಣಗಳು, ಕುಶಾಲನಗರ ತಾಲ್ಲೂಕಿನಲ್ಲಿ 28 ಪ್ರಕರಣಗಳು, ಸೋಮವಾರಪೇಟೆ ತಾಲ್ಲೂಕಿನಲ್ಲಿ 1 ಪ್ರಕರಣ, ಪೊನ್ನಂಪೇಟೆ ತಾಲ್ಲೂಕಿನಲ್ಲಿ 38 ಪ್ರಕರಣಗಳು, ವಿರಾಜಪೇಟೆ ತಾಲ್ಲೂಕಿನಲ್ಲಿ 18 ಪ್ರಕರಣಗಳು ಕಂಡುಬಂದಿದೆ ಎಂದು ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದರು.

ಒಟ್ಟಾರೆ ಜನವರಿ ತಿಂಗಳಲ್ಲಿ 7, ಫೆಬ್ರವರಿ ತಿಂಗಳಲ್ಲಿ 11, ಮಾರ್ಚ್‍ನಲ್ಲಿ 9, ಏಪ್ರಿಲ್‍ನಲ್ಲಿ 8, ಮೇ ತಿಂಗಳಲ್ಲಿ 25, ಜೂನ್ ತಿಂಗಳಲ್ಲಿ 34 ಒಟ್ಟು 94 ಪ್ರಕರಣಗಳು ಕಂಡು ಬಂದಿದೆ ಎಂದು ಮಾಹಿತಿ ನೀಡಿದರು.

ಆರ್‍ಸಿಎಚ್. ಅಧಿಕಾರಿ ಡಾ.ಮಧುಸೂದನ್ ಅವರು ಮಾತನಾಡಿ ಪ್ರತಿ ಗುರುವಾರ ಲಸಿಕಾ ದಿನವಾಗಿರುವಂತೆ ಪ್ರತಿ ಶುಕ್ರವಾರ ಈಡಿಸ್ ಈಜಿಪ್ಟೈ ಸೊಳ್ಳೆ ನಿರ್ಮೂಲನಾ ದಿನವನ್ನಾಗಿ ಆಚರಿಸುವುದನ್ನು ಸಾರ್ವಜನಿಕರ ದಿನಚರಿಯ ದೈನಂದಿನ ಅಭ್ಯಾಸ/ ಪದ್ಧತಿಯನ್ನಾಗಿ ಮಾಡುವುದರ ಮೂಲಕ ಹೆಚ್ಚಿನ ಅರಿವು ಮೂಡಿಸಲು ಪ್ರಯತ್ನಿಸಲಾಗಿದೆ. ಆ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ‘ಈಡಿಸ್ ಲಾರ್ವಾ ಉತ್ಪತ್ತಿ ತಾಣ ನಾಶ ಚಟುವಟಿಕೆ’ಗೆ ಚಾಲನೆ ನೀಡಲಾಗಿದೆ ಎಂದರು.

ತಾಲ್ಲೂಕು ವೈದ್ಯಾಧಿಕಾರಿ ಡಾ.ಚೇತನ್, ಪೌರಾಯುಕ್ತರಾದ ವಿಜಯ್, ಪರಿಸರ ಎಂಜಿನಿಯರ್ ಸೌಮ್ಯ, ಆರೋಗ್ಯ ಶಿಕ್ಷಣಾಧಿಕಾರಿ ಪಾಲಾಕ್ಷ, ಶ್ರುಶ್ರೂಷಕರು, ಆರೋಗ್ಯ ಶಿಕ್ಷಕರು, ಆಶಾ ಕಾರ್ಯಕರ್ತರು, ಇತರರು ಇದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ