Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಸ್ಥಳೀಯ ಸುದ್ದಿ

ಮತ ಎಣಿಕೆಗೆ ಜಿಲ್ಲಾಡಳಿತ ಸಕಲ ಸಜ್ಜು: ಡಿಸಿ ಮಿಶ್ರಾ

ಲೋಕಸಭೆ ಸಾರ್ವತ್ರಿಕ ಚುನಾವಣೆ ಸಂಬಂಧ ಬಳ್ಳಾರಿ (ವಿಜಯನಗರ ಜಿಲ್ಲೆ ಒಳಗೊಂಡಂತೆ) ಜಿಲ್ಲೆಯ ಲೋಕಸಭೆ ಕ್ಷೇತ್ರ ವ್ಯಾಪ್ತಿಯ 08 ಕ್ಷೇತ್ರಗಳ ಮತ ಎಣಿಕೆ ಕಾರ್ಯ ಜೂನ್ 04 ರಂದು ನಗರದ ರಾವ್ ಬಹದ್ದೂರ್ ವೈ.ಮಹಾಬಲೇಶ್ವರ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆಯಲಿದೆ. ಇದಕ್ಕೆ ಜಿಲ್ಲಾಡಳಿತವು ಅಗತ್ಯ ಸಿದ್ಧತೆ ಮಾಡಿಕೊಂಡಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೇಳಿದರು.

ಲೋಕಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ಕುರಿತಂತೆ ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ವಿಡಿಯೋ ಸಭಾಂಗಣದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.

ಜೂ.04 ರಂದು ಬೆಳಿಗ್ಗೆ 08 ಗಂಟೆಯಿಂದ ಮತಗಳ ಎಣಿಕೆ ಕಾರ್ಯ ಪ್ರಾರಂಭವಾಗಲಿದೆÉ. ಮತ ಎಣಿಕೆ ಕೇಂದ್ರದ ಕಟ್ಟಡದಲ್ಲಿ 20 ಇವಿಎಂ ಸ್ಟ್ರಾಂಗ್ ರೂಂ ಮತ್ತು 02 ಅಂಚೆ ಮತಗಳ ಸ್ಟ್ರಾಂಗ್ ರೂಂಗಳಿದ್ದು, ಮತ ಎಣಿಕೆ ಕಾರ್ಯ ಒಟ್ಟು 08 ಹಾಲ್‍ಗಳಲ್ಲಿ ನಡೆಯಲಿದೆ ಎಂದು ತಿಳಿಸಿದರು.

ಮತ ಎಣಿಕೆ ಕಾರ್ಯವನ್ನು ಸುಗಮವಾಗಿ ಕೈಗೊಳ್ಳಲು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ತಲಾ 14 ಟೇಬಲ್‍ಗಳನ್ನು ಸಜ್ಜುಗೊಳಿಸಲಾಗಿದೆ. ಪ್ರತಿ ಟೇಬಲ್‍ಗೆ ಒಬ್ಬರು ಎಣಿಕಾ ಮೇಲ್ವಿಚಾರಕರು, ಒಬ್ಬರು ಎಣಿಕಾ ಸಹಾಯಕರು, ಒಬ್ಬರು ಮೈಕ್ರೋ ಅಬ್ಸರ್ವರ್ಸ್‍ಗಳನ್ನು ನಿಯೋಜಿಸಲಾಗಿದೆ. ಬಳ್ಳಾರಿ ಜಿಲ್ಲೆಗೆ ಒಟ್ಟು 112 ಟೇಬಲ್‍ಗಳಂತೆ, 150 ಎಣಿಕಾ ಮೇಲ್ವಿಚಾರಕರು, 159 ಎಣಿಕಾ ಸಹಾಯಕರು ಮತ್ತು 146 ಎಣಿಕಾ ಮೈಕ್ರೋ ಅಬ್ಸರ್ವರ್ಸ್‍ಗಳನ್ನು ನೇಮಕ ಮಾಡಲಾಗಿದೆ. ಮತ ಎಣಿಕೆ ಅಧಿಕಾರಿಗಳು, ಸಹಾಯಕರಿಗೆ ಈಗಾಗಲೇ ಒಂದು ಹಂತದ ತರಬೇತಿ ನೀಡಲಾಗಿದ್ದು, ಎರಡನೆ ಹಂತದ ತರಬೇತಿಯನ್ನೂ ನೀಡಲಾಗುವುದು. 121 ಜನರಿಗೆ ಈಗಾಗಲೆ ಕೌಂಟಿಂಗ್ ಏಜೆಂಟ್ ಆಗಿ ವೀಕ್ಷಣೆಗೆ ಪಾಸ್ ನೀಡಲಾಗಿದೆ ಎಂದರು.

88-ಹಡಗಲಿ ಕ್ಷೇತ್ರದಲ್ಲಿ ಒಟ್ಟು 218 ಮತಗಟ್ಟೆಗಳಿದ್ದು, ಈ ಕ್ಷೇತ್ರಕ್ಕೆ ಸಂಬಂಧಿಸಿದಂತೆ 16 ಸುತ್ತು ಮತ ಎಣಿಕೆ ನಡೆಯಲಿದೆ. 89-ಹಗರಿಬೊಮ್ಮನಹಳ್ಳಿ ಕ್ಷೇತ್ರದಲ್ಲಿ ಒಟ್ಟು 254 ಮತಗಟ್ಟೆಗಳಿದ್ದು, 19 ಸುತ್ತು ಮತ ಎಣಿಕೆ ನಡೆಯಲಿದೆ. 90-ವಿಜಯನಗರ ಕ್ಷೇತ್ರದಲ್ಲಿ ಒಟ್ಟು 259 ಮತಗಟ್ಟೆಗಳಿದ್ದು, ಕ್ಷೇತ್ರಕ್ಕೆ ಸಂಬಂಧಿಸಿದಂತೆ 19 ಸುತ್ತು ಮತ ಎಣಿಕೆ ನಡೆಯಲಿದೆ.

91-ಕಂಪ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 242 ಮತಗಟ್ಟೆಗಳಿದ್ದು, ಈ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸುಮಾರು 18 ಸುತ್ತು ಮತ ಎಣಿಕೆ ನಡೆಯಲಿದೆ. 93-ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿ 235 ಮತಗಟ್ಟೆಗಳಿದ್ದು, 17 ಸುತ್ತು. 94-ಬಳ್ಳಾರಿ ನಗರ ಕ್ಷೇತ್ರದಲ್ಲಿ 261 ಮತಗಟ್ಟೆಗಳಿದ್ದು, 19 ಸುತ್ತು. 95-ಸಂಡೂರು ಕ್ಷೇತ್ರದಲ್ಲಿ ಒಟು 253 ಮತಗಟ್ಟೆಗಳಿದ್ದು, 19 ಸುತ್ತು ಹಾಗೂ 96-ಕೂಡ್ಲಿಗಿ ಕ್ಷೇತ್ರದಲ್ಲಿ 250 ಮತಗಟ್ಟೆಗಳಿದ್ದು, ಒಟ್ಟು 18 ಸುತ್ತುಗಳಲ್ಲಿ ಮತ ಎಣಿಕೆ ನಡೆಯಲಿದೆ.

ನಗರದ ರಾವ್ ಬಹದ್ದೂರ್ ವೈ.ಮಹಾಬಲೇಶ್ವರ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಮತ ಎಣಿಕೆಗೆ ಸಕಲ ವ್ಯವಸ್ಥೆ ಕೈಗೊಳ್ಳಲಾಗಿದೆ. ಪ್ರತಿ ಹಂತದ ಮತ ಎಣಿಕೆ ವಿವರವನ್ನು ಮಾಧ್ಯಮಗಳ ಮೂಲಕ ಪ್ರಚುರಪಡಿಸಲು ಅನುವಾಗುವಂತೆ ಮಾಧ್ಯಮದವರಿಗೆ ಮತ ಎಣಿಕೆ ಕೇಂದ್ರದಲ್ಲಿ ಮಾಧ್ಯಮ ಕೇಂದ್ರವನ್ನು ತೆರೆಯಲಾಗುವುದು ಎಂದರು.

ಮತ ಎಣಿಕೆ ಕೇಂದ್ರ ಸುತ್ತಲೂ 100 ಮೀಟರ್ ಪ್ರದೇಶ ಆವರಣದಲ್ಲಿ ವಾಹನಗಳ ಪ್ರವೇಶವಿರುವುದಿಲ್ಲ. ಮತ ಎಣಿಕೆ ಅಂಗವಾಗಿ ಬಳ್ಳಾರಿ ಜಿಲ್ಲಾ ವ್ಯಾಪ್ತಿಯಲ್ಲಿ ಮದ್ಯಮಾರಾಟ ನಿಧಿಸಲಾಗಿದೆ ಎಂದು ಹೇಳಿದರು.

*ಪೊಲೀಸ್ ಅಧಿಕಾರಿ, ಸಿಬ್ಬಂದಿ ನಿಯೋಜನೆ:*

ಜಿಲ್ಲೆಯ 8 ಕ್ಷೇತ್ರಗಳ ಮತ ಎಣಿಕೆ ಕೇಂದ್ರವಾದ ರಾವ್ ಬಹದ್ದೂರ್ ವೈ.ಮಹಾಬಲೇಶ್ವರ ತಾಂತ್ರಿಕ ಮಹಾವಿದ್ಯಾಲಯದ ಸುತ್ತ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ. ಅದರಲ್ಲಿ 01-ಎಸ್‍ಪಿ, 02-ಎಎಸ್ಪಿ, 05-ಡಿವೈಎಸ್ಪಿ, 15-ಸಿಪಿಐ, 25-ಪಿಎಸ್‍ಐ, 40-ಎಎಸ್‍ಐ, 250-ಪಿಸಿ, 04-ಕೆಎಸ್‍ಆರ್‍ಪಿ, 04 ಡಿ.ಆರ್ ತಂಡ ಸಹಿತ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಪಿ.ರವಿಕುಮಾರ್ ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯ ಸಿಬ್ಬಂದಿಗಳು ಹಾಗೂ ಇತರರು ಉಪಸ್ಥಿತರಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ