Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಜಿಲ್ಲಾ ಆಯುಷ್ ಇಲಾಖೆ ಅ.29 ರಂದು ರಾಷ್ಟ್ರೀಯ ಆಯುರ್ವೇದ ದಿನಾಚರಣೆ.


ಧಾರವಾಡ ಅಕ್ಟೋಬರ್ 24: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಜಿಲ್ಲಾ ಆಯು ಇಲಾಖೆ ಇವರ ಸಹಯೋಗದಲ್ಲಿ 9 ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆಯನ್ನು ಅಕ್ಟೋಬರ್ 29 ರಂದು ಬೆಳಿಗ್ಗೆ 9 ಗಂಟೆಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಸಭಾಭವನದಲ್ಲಿ ಆಯೋಜಿಸಲಾಗಿದೆ.



ಕೇಂದ್ರ ಗ್ರಾಹಕರ ವ್ಯವಹಾರಗಳ, ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ಹೊಸ ಹಾಗೂ ನವೀಕರಿಸಬಹುದಾದ ಇಂಧನ ಖಾತೆ ಸಚಿವ ಪ್ರಲ್ಹಾದ ಜೋಶಿ ಹಾಗೂ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರು ಕಾರ್ಯಕ್ರಮದಲ್ಲಿ ಘನ ಉಪಸ್ಥಿತಿ ವಹಿಸುವರು.

ಕಾರ್ಮಿಕ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್. ಲಾಡ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು.



ಕರ್ನಾಟಕ ವಿಧಾನ ಪರಿಷತ್‍ನ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ, ಶಾಸಕರು ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿಯ ಅಧ್ಯಕ್ಷ ವಿನಯ ಕುಲಕರ್ಣಿ, ಶಾಸಕ ಹಾಗೂ ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಬ್ಬಯ್ಯ ಪ್ರಸಾದ, ಶಾಸಕ ಹಾಗೂ ವಾಯವ್ಯ ಸಾರಿಗೆ ನಿಗಮದ ಅಧ್ಯಕ್ಷ ಭರಮಗೌಡ ಅಲಗೌಡ ಕಾಗೆ, ಶಾಸಕರು ಹಾಗೂ ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಜೆ.ಎನ್.ಗಣೇಶ ಅವರು ವಿಶೇಷ ಅತಿಥಿಗಳಾಗಿ ಭಾಗವಹಿಸುವರು.



ಶಾಸಕರಾದ ಅರವಿಂದ ಚಂದ್ರಕಾಂತ ಬೆಲ್ಲದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.



ಮುಖ್ಯ ಅತಿಥಿಗಳಾಗಿ ಶಾಸಕರಾದ ಎನ್.ಎಚ್ ಕೋನರಡ್ಡಿ, ಎಸ್.ವ್ಹಿ.ಸಂಕನೂರ, ಪ್ರದೀಪ ಶೆಟ್ಟರ, ಮಹೇಶ ಟೆಂಗಿನಕಾಯಿ, ಎಂ.ಆರ್.ಪಾಟೀಲ್, ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಅಪ್ಪಾಸಿ ಬಬಲೇಶ್ವರ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮಹಾಪೌರರಾದ ರಾಮಪ್ಪ ಕೃಷ್ಣಪ್ಪ ಬಡಿಗೇರ, ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕಿರ್ ಸನದಿ ಅವರು ಪಾಲ್ಗೋಳುವರು.



ಕಾರ್ಯಕ್ರಮದಲ್ಲಿ ಆಯುಷ್ ಇಲಾಖೆಯ ಆಯುಕ್ತ ಶ್ರೀನಿವಾಸುಲು, ಜಿಲ್ಲಾಧಿಕಾರಿ ದಿವ್ಯ ಪ್ರಭು, ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ ಟಿ.ಕೆ., ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಶಶಿ ಪಾಟೀಲ ಅವರು ಭಾಗವಹಿಸುವರೆಂದು ಜಿಲ್ಲಾ ಆಯುಷ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.



**

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ