Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ರಸ್ತೆ ಸುರಕ್ಷತೆಗೆ ಜನಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿ- ಜಿಲ್ಲಾಧಿಕಾರಿ ನಲಿನ್ ಅತುಲ್

ಕೊಪ್ಪಳ ಮಾರ್ಚ್ 10 : ಪ್ರಾದೇಶಿಕ ಸಾರಿಗೆ ಇಲಾಖೆ, ಪೊಲೀಸ್ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ರಸ್ತೆ ಸುರಕ್ಷತೆ ಕುರಿತು ಶಾಲಾ-ಕಾಲೇಜು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ರಸ್ತೆ ಸುರಕ್ಷತೆ ನಿಯಮ ಮತ್ತು ಕಾನೂನುಗಳ ಬಗ್ಗೆ ಜನಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದರು.

ಅವರು ಸೋಮವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.

ರಸ್ತೆ ಸುರಕ್ಷತೆ ಕುರಿತು ಜಾಗೃತಿ ಮೂಡಿಸಿದಾಗ ಅಪಘಾತಗಳ ಸಂಖ್ಯೆ ಕಡಿಮೆಯಾಗುತ್ತವೆ. ಹೆಲ್ಮೆಟ್ ಇಲ್ಲದೆ ದ್ವೀಚಕ್ರ ವಾಹನಗಳನ್ನು ಚಲಾಯಿಸುವ ಜನರ ಮೇಲೆ ಇಲ್ಲಿಯವರೆಗೆ ಏನು ಕ್ರಮ ತೆಗೆದುಕೊಂಡಿದ್ದಿರಾ ಎಂದು ಪ್ರಾದೇಶಿಕ ಸಾರಿಗೆ ಇಲಾಖೆ ಅಧಿಕಾರಿ ದಾಮೋದರ ಅವರಿಗೆ ಪ್ರಶ್ನಿಸಿದ ಜಿಲ್ಲಾಧಿಕಾರಿಗಳು ಸಾರ್ವಜನಿಕರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿಕೊಂಡು ದ್ವಿಚಕ್ರ ವಾಹನಗಳನ್ನು ಚಲಾಯಿಸಬೇಕು ಅಪಘಾತಳಾದ ಸಂದರ್ಭದಲ್ಲಿ ಹೆಲ್ಮೆಟ್ ತಮ್ಮ ಜೀವ ಉಳಿಸುತ್ತದೆ ಎಂದು ಜನರಿಗೆ ತಿಳಿಸಿ ಹೇಳಬೇಕು ಎಂದು ಹೇಳಿದರು.

ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅವಶ್ಯಕತೆ ಇರುವಲ್ಲಿ ಸೈನ್ ಬೋರ್ಡ್, ಲೈಟಿಂಗ್ ವ್ಯವಸ್ಥೆಗಳನ್ನು ಮಾಡಬೇಕು. ಸಂಬಂಧಿಸಿದ ರಸ್ತೆ ಅಭಿವೃದ್ಧಿ ಪ್ರಾಧಿಕಾರದವರು ಈ ಕೆಲಸ ಮಾಡದೆ ಮತ್ತ್ಯಾರು ಮಾಡುತ್ತಾರೆ. ಇವುಗಳಿಗೆ ಅನುದಾನ ಬೇಕಾದರೆ ಸಂಬಂಧಿಸಿದ ಇಲಾಖೆಯವರು ತಮ್ಮ ಮೇಲಾಧಿಕಾರಿಗಳಿಗೆ ಪ್ರಪೋಸಲ್ ಕಳಿಸಿ ಮಾಡಿಸಬೇಕು. ಸೈನಬೋರ್ಡಗಳು ಇರುವಲ್ಲಿ ಲೈಟಿಂಗ್ ವ್ಯವಸ್ಥೆ ಇರಬೇಕು ಎಂದು ಹೇಳಿದರು.

ಬ್ಲ್ಯಾಕ್ ಸ್ಪಾಟಗಳು ಇರುವಲ್ಲಿ ಕ್ಯಾಮರಾಗಳನ್ನು ಅಳವಡಿಸುವದರ ಜೊತೆಗೆ ಲೈಟಿಂಗ್ ವ್ಯವಸ್ಥೆ ಹಾಗೂ ಸೈನ್ ಬೋರ್ಡಗಳಿದ್ದರೆ ಜನರು ಅಂತಹ ಸ್ಥಳಗಳಲ್ಲಿ ಸಂಚರಿಸುವಾಗ ಮುಂಜಾಗ್ರತೆ ವಹಿಸುವದರಿಂದ ಅಪಘಾತಗಳಾಗದಂತೆ ತಡೆಯಬಹುದು. ಈಗಾಗಲೇ ರಸ್ತೆಗಳಲ್ಲಿ ಬ್ಯಾರಿಕೇಡ್ ಇರುವಲ್ಲಿ ರೋಡಹಮ್ಸಗಳನ್ನು ಮಾಡಿದ ನಂತರ ಅವುಗಳನ್ನು ತೆರವುಗೊಳಿಸಿ ಎಷ್ಟು ಸ್ಥಳಗಳಲ್ಲಿ ಇವುಗಳನ್ನು ಮಾಡಬೇಕು ಎಂಬುದನ್ನು ಗುರುತಿಸಿ ಎಂದು ಹೇಳಿದರು.

ಹೆದ್ದಾರಿಗಳಲ್ಲಿ ಒಳ್ಳೆಯ ಗುಣಮಟ್ಟದ ಕ್ಯಾಮರಾಗಳನ್ನು ಅಳವಡಿಸಬೇಕು. ವಾಹನಗಳ ನಂಬರ ಪ್ಲೇಟ್ ಮಾತ್ರವಲ್ಲದೆ ಅವುಗಳ ವೇಗ ಹಾಗೂ ವಾಹನ ಸವಾರರು ಸೀಟಬೆಲ್ಟ್ ಧರಿಸಿದ್ದಾರೆ ಅಥವಾ ಇಲ್ಲಾ ಎನ್ನುವುದನ್ನು ಕುಳಿತಲ್ಲಿಂದಲೇ ನೋಡುವಷ್ಟು ಉತ್ತಮ ಕ್ಯಾಮರಾಗಳಿದ್ದು, ಅಂತಹುಗಳನ್ನು ಅಳವಡಿಸಿ. ಕೆ.ಕೆ.ಆರ್.ಟಿ.ಸಿ ಬಸ್ ನಿಲ್ದಾಣಗಳಿಗಾಗಿ ಒಳ್ಳೆಯ ಸ್ಥಳಾವಕಾಶ ಇರುವ ಜಾಗಗಳನ್ನು ಗುರುತಿಸಿ ಹಾಗೂ ಅವು ಸಾರ್ವಜನಿಕರಿಗೆ ಅನುಕೂಲವಾಗುವ ರೀತಿಯಲ್ಲಿ ಇರಬೇಕು. ಟ್ರಾಫಿಕ್ ಸಮಸ್ಯೆಗಳಾಗದಂತೆ ಇರಬೇಕು. ಕಳೆದ ಸಭೆಯಲ್ಲಿ ತಿಳಿಸಿದಂತೆ ಹುಲಗಿ ಬಸ್ ನಿಲ್ದಾಣದ ಪ್ರಪೋಸಲ್ ಕಳಿಸಿದ್ದಿರಾ ಎಂದು ಸಾರಿಗೆ ಇಲಾಖೆಯ ಅಧಿಕಾರಿಗೆ ಹೇಳಿದರು.

ಜಿಲ್ಲೆಯಲ್ಲಿ ಹಾದು ಹೋಗುವ ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿಗಳು ಮತ್ತು ಗ್ರಾಮೀಣ ರಸ್ತೆಗಳು ಉತ್ತಮ ಗುಣಮಟ್ಟದಲ್ಲಿ ನಿರ್ಮಿಸದಿದ್ದರೆ ಭಾರವಾದ ವಾಹನಗಳು ಸಂಚರಿಸಿದಲ್ಲಿ ರಸ್ತೆಗಳು ಹಾಳಾಗಿ ಹೋಗುತ್ತವೆ ಈ ಕುರಿತು ಸಂಬಂಧಿಸಿದ ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಬೇಕು. ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಗಳ ನಗರ ವ್ಯಾಪ್ತಿಯಲ್ಲಿ ಅಗತ್ಯ ಪ್ರಮಾಣದಲ್ಲಿ ವಿದ್ಯುತ್ ದೀಪಗಳನ್ನು ಅಳವಡಿಸಬೇಕು ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೆಶಕರಾದ ರೇಷ್ಮಾ ಹಾನಗಲ್, ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರಾದ ಪಿ.ಹೇಮಂತರಾಜ್, ಎನ್.ಎಚ್.67 ಧಾರವಾಡದ ಟಕ್ನಿಕಲ್ ಮ್ಯಾನೇಜರ್ ಅಜಿಂಕೆ ನವಲೆ, ಎನ್.ಎಚ್. 50 ಹೊಸಪೇಟೆ ಸೈಟ್ ಇಂಜಿನಿಯರ್ ದಾನೇಶ, ಪ್ರೊಜೆಕ್ಟ್ ಡೈರೆಕ್ಟರ್ ಗಂಗಾಧರ, ಕೊಪ್ಪಳ ನಗರಸಭೆ ಪೌರಾಯುಕ್ತರಾದ ಆಯುಕ್ತರು ಗಣಪತಿ ಪಾಟೀಲ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ