Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೌಶಲ್ಯತೆ ಅಳವಡಿಸಿಕೊಂಡು ಯಶಸ್ವಿಯಾಗಿ: ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ

ಬಳ್ಳಾರಿ,ಜ.03

ಉತ್ತಮ ಅಂಕಗಳ ಜೊತೆಗೆ ಉದ್ಯೋಗಕ್ಕೆ ಬೇಕಾದ ಕೌಶಲ್ಯ ಗುಣಗಳನ್ನು ಅಳವಡಿಕೊಂಡು ಯಶಸ್ವಿಯಾಗಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೇಳಿದರು.
ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಜಿಲ್ಲಾ ಕೌಶಲ್ಯ ಮಿಷನ್ ಹಾಗೂ ಸರಳಾದೇವಿ ಕಾಲೇಜು ಇವರುಗಳ ಸಂಯುಕ್ತಾಶ್ರಯದಲ್ಲಿ ನಗರದ ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಶುಕ್ರವಾರ ಆಯೋಜಿಸಿದ್ದ ‘ಉದ್ಯೋಗ ಮೇಳ 2025’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಉದ್ಯೋಗ ಪಡೆದುಕೊಳ್ಳುವುದಷ್ಟೇ ಆಗದೆ ಈ ಭಾಗದಲ್ಲಿ ಉದ್ಯಮ ಸ್ಥಾಪನೆ ಮಾಡುವುದರ ಮೂಲಕ ಇತರರಿಗೂ ಉದ್ಯೋಗ ನೀಡುವಂತರಾಗಬೇಕು ಎಂದರು.
ಕ್ರಿಯಾಶೀಲ ಮನೋಭಾವ, ಸ್ಪರ್ಧಾತ್ಮಕ ಮನಸ್ಸು, ಸತತ ಪ್ರಯತ್ನದಿಂದ ಬದುಕು ರೂಪಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು ಮಾತನಾಡಿ, ಬದುಕಿನಲ್ಲಿ ಉತ್ತಮ ಸಾಧಕರಾಗಲು ಕಠಿಣ ಪರಿಶ್ರಮ, ಸಂವಹನ ಕಲೆ, ಭಾಷೆಯ ಮೇಲೆ ಉತ್ತಮ ಹಿಡಿತ, ಸಾಧಿಸುವ ಛಲದಂತಹ ಗುಣಗಳನ್ನು ಮೈಗೂಡಿಸಿಕೊಳ್ಳುವುದು ಅವಶ್ಯ ಎಂದರು.
ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ನ ಅಧ್ಯಕ್ಷ ಯಶವಂತ್ ರಾಜ್ ನಾಗಿರೆಡ್ಡಿ ಅವರು ಮಾತನಾಡಿ, ಇಂತಹ ಉದ್ಯೋಗ ಮೇಳಗಳು ಈ ಭಾಗದ ನಿರುದ್ಯೋಗ ಸಮಸ್ಯೆಯನ್ನು ನಿವಾರಿಸುವಲ್ಲಿ ಸಹಕಾರಿಯಾಗುತ್ತವೆ. ನಮ್ಮ ವಾಣಿಜ್ಯೋದ್ಯಮ ಮಂಡಳಿಯು ಇಂತಹ ಚಟುವಟಿಕೆಗಳಿಗೆ ಸದಾ ಸಹಕರಿಸುತ್ತದೆ ಎಂದರು.
ಉದ್ಯೋಗ ಮೇಳದ ಬಗೆಗೆ ಪ್ರಾಸ್ತವಿಕವಾಗಿ ಮಾತನಾಡಿದ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳಾದ ಪ್ರಾಣೇಶ್, ಈ ಮೇಳದಲ್ಲಿ 41 ಕಂಪನಿಗಳು ಭಾಗವಹಿಸಿವೆ. 1673 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಸಅ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಮೋನಿಕಾ ರಂಜನ್, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಹಟ್ಟಪ್ಪ, ಉದ್ಯೋಗ ಭರವಸೆ ಕೋಶದ ಸಂಚಾಲಕ ಕಲ್ಯಾಣ ಬಸವ, ಕೌಶಲ್ಯಾಭಿವೃದ್ದಿ ಇಲಾಖೆಯ ಸಹಾಯಕ ನಿರ್ದೇಶಕ ವಿಶ್ವನಾಥ್, ಜಿಲ್ಲಾ ಅಭಿಯಾನ ವ್ಯವಸ್ಥಾಪಕರಾದ ದೇವರಾಜ್, ಪ್ರಾಣೇಶ್, ಎಎಸ್‌ಒ ಚಂದ್ರಮ್ಮ ಹಾಗೂ ಕಾಲೇಜಿನ ಪ್ರಾಧ್ಯಾಪಕರಾದ ಡಾ.ಪ್ರಹ್ಲಾದ್ ಚೌದ್ರಿ, ಡಾ.ಹೊನ್ನೂರಾಲಿ, ಡಾ.ಸೋಮನಾಥ, ಡಾ.ದಸ್ತಗೀರಸಾಬ್ ದಿನ್ನಿ, ಡಾ.ಚನ್ನ ಬಸವಯ್ಯ, ಡಾ.ಶ್ರೀನಿವಾಸ ರೆಡ್ಡಿ, ಪಂಪನಗೌಡ, ಡಾ.ಪಂಚಾಕ್ಷರಿ, ಡಾ.ಗುರುಬಸಪ್ಪ, ಡಾ.ದುರ್ಗಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.
--------

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ