Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

"C-TARA"ಅಪ್ಲಿಕೇಶನ್ ಗೆ ಚಾಲನೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ”


ಬೆಳಗಾವಿಯ ಸುವರ್ಣ ಸೌಧದಲ್ಲಿ ಶುಕ್ರವಾರ (ಜು.12) ಜರುಗಿದ 2024-25ನೇ ಸಾಲಿನ ಪ್ರಥಮ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆ.ಡಿ.ಪಿ) ಪ್ರಗತಿ ಪರಿಶೀಲನಾ ಸಭೆಯಲ್ಲಿ "C-TARA"ಟಾಸ್ಕ ಅಸೈನಮೆಂಟ್ ಮತ್ತು ರಿವ್ಯೂವ್ ಅಪ್ಲಿಕೇಶನ್” ಗೆ ಲೋಕಪಯೋಗಿ ಸಚಿವರು ಕರ್ನಾಟಕ ಸರ್ಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಚಾಲನೆ ನೀಡಿದರು.



ಜಿಲ್ಲೆಯ ಪಂಚಾಯತ್ ರಾಜ್ ಇಲಾಖೆಯ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಜಿಲ್ಲಾ ಹಾಗೂ ತಾಲ್ಲೂಕು ಅಧಿಕಾರಿಗಳು ಕಾರ್ಯಕ್ಷೇತ್ರಕ್ಕೆ ತೆರಳಿ ಉದಾಹರಣೆಗೆ ಶಾಲೆ, ಅಂಗನವಾಡಿ, ಪಿ.ಎಚ್.ಸಿ, ಹಾಸ್ಟೆಲ್ ಹಾಗೂ ಸಾರ್ವಜನಿಕರ ಸಮಸ್ಯೆಗಳನ್ನು ಬಗೆ ಹರಿಸುವ ಉದ್ದೇಶದಿಂದ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಅವರು ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ವಿಶೇಷವಾಗಿ ಮಾನಿಟರಿಂಗ್ ಆಪ್ ಸಿದ್ಧಪಡಿಸಿರುತ್ತಾರೆ. ಇದು ಎಲ್ಲ ಮಟ್ಟದ ಅಧಿಕಾರಿಗಳು ಸಾರ್ವಜನಿಕರಿಗೆ ಸುಲಭವಾಗಿ ಕೈಗೆಟಕಿ ಅವರ ಸಮಸ್ಯೆಗಳನ್ನು ಬಗೆಹರಿಸಲು ಸಹಕಾರಿಯಾಗಿದೆ.



ಈ ಆಪ್ ನಲ್ಲಿ ವೆಬ್ ಪೊರ್ಟ ಮತ್ತು ಮೊಬೈಲ್ ಅಪ್ಲಿಕೇಶನ್ ಎರಡು ವಿಧವಿದ್ದು, ವೆಬ್ ಪೊರ್ಟನಲ್ಲಿ ಎಲ್ಲ ಅಧಿಕಾರಿಗಳ ಕಾರ್ಯ ವೈಖರಿಯನ್ನು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ವಿಕ್ಷೀಸಲು ಅವಕಾಶವಿದೆ ಹಾಗೂ ಮೊಬೈಲ್ ಆಪ್ ನಲ್ಲಿ ಸಾರ್ವಜನಿಕರ ದೂರುಗಳನ್ನು ಸಿ.ಇ.ಒ ರವರು ತಾಲ್ಲೂಕಾವಾರು ಹಾಗೂ ಇಲಾಖಾವಾರು ದೂರುಗಳನ್ನು ಹಂಚಿಕೆ ಮಾಡಲು ಅವಕಾಶ ಕಲ್ಪಿಸಲಾಗಿದೆ.



ಜೊತೆಗೆ ಸ್ವಯಂ ಪ್ರೇರಿತ ದೂರುಗಳನ್ನು ದಾಖಲಿಕೊಂಡು ಬಗೆಹರಿಸಲು ಈ ಒಂದು ಮಾನಿಟರಿಂಗ್ ಆಪ್ ನಲ್ಲಿ ಅವಕಾಶವಿರುತ್ತದೆ. ಸಮಸ್ಯೆಯ ಗಂಭಿರತೆಯನ್ನು ಅರಿತು ಆದ್ಯತೆ ಮೇಲೆ ಕೆಲಸವನ್ನು ನಿರ್ವಹಿಸಲು ಈ ಒಂದು ಆಪ್ ನಲ್ಲಿ ಅವಕಾಶವಿದ್ದು, ಕೆಲಸದ ಹಂಚಿಕೆ ಮಾಡಿದ ಅಧಿಕಾರಿಯೇ ಸ್ಥಳಕ್ಕೆ ಭೇಟಿ ನೀಡಿ ಜಿಯೋ ಟ್ಯಾಗ್ ಫೋಟೊ ವನ್ನು ಅಳವಡಿಸಲು ಅವಕಾಶವಿರುವದರಿಂದ ಅಧಿಕಾರಿಗಳು ಸ್ಥಳಿಯ ಮಟ್ಟದಲ್ಲಿ ಸಾರ್ವಜನಿಕರಿಗೆ ಹಾಗೂ ಸಾರ್ವಜನಿಕರ ದೂರುಗಳಿಗೆ ಯಾವ ಮಟ್ಟದಲ್ಲಿ ಸ್ಪಂದಿಸುತ್ತಾರೆ ಎಂಬುದನ್ನು ಸುಲಭವಾಗಿ ಮೇಲ್ಮಟ್ಟದಲ್ಲಿ ಮೇಲ್ವಿಚಾರಣೆ ಮಾಡಲು ಸಹಾಯಕವಾಗಿದೆ ಎಂದು ಜಿಲ್ಲಾ ಪಂಚಾಯತ ಸಿಇಒ ರಾಹುಲ್ ಶಿಂಧೆ ಸಭೆಗೆ ತಿಳಿಸಿದರು.



ಸಭೆಯಲ್ಲಿ ಸಂಸದರಾದ ಪ್ರಿಯಾಂಕಾ ಜಾರಕಿಹೊಳಿ, ರಾಜ್ಯ ಸಭಾ ಸದಸ್ಯರಾದ ಈರಣ್ಣ ಕಡಾಡಿ, ಜಿಲ್ಲಾಧಿಕಾರಿ ಮೊಹಮ್ಮದ ರೋಷನ್, ನಗರ ಪೊಲಿಸ್ ಆಯುಕ್ತ ಯಡಾ ಮಾರ್ಟಿನ ಮಾರ್ನಬ್ಯಾಂಗ್, ಜಿಲ್ಲಾ ಪೊಲಿಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ, ವಿಧಾನ ಸಭಾ, ವಿಧಾನ ಪರಿಷತ ಸದಸ್ಯರುಗಳು, ನಾಮ ನಿರ್ದೆಶನ ಸದಸ್ಯರುಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ