Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸಬೇಕು: ವಿನಯ ನಾವಲಗಟ್ಟಿ





ಬೆಳಗಾವಿ, ಮಾ.28ಸರ್ಕಾರದ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮೀ, ಗೃಹ ಜ್ಯೋತಿ, ಶಕ್ತಿ, ಯುವನಿಧಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಶ್ರಮಿಸಬೇಕು. ಪಂಚ ಗ್ಯಾರಂಟಿ ಯೋಜನೆಗಳಿಗೆ ಸಂಬಂದಿಸಿದ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳ ಸಮನ್ವಯದೊಂದಿಗೆ ಗ್ಯಾರಂಟಿ ಯೋಜನೆಗಳ ಸಮಿತಿ ಸದಸ್ಯರು ಕಾರ್ಯನಿರ್ವಹಿಸಬೇಕು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ವಿನಯ ನಾವಲಗಟ್ಟಿ ತಿಳಿಸಿದರು.



ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ (ಮಾ.28) ನಡೆದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.



ಗ್ರಾಮೀಣ ಭಾಗದಲ್ಲಿ ಸಾರ್ವಜನಿಕರು ಹಾಗೂ ಫಲಾನುಭವಿಗಳೊಂದಿಗೆ ಮುಕ್ತ ಸಂವಾದ ನಡೆಸಬೇಕು. ಯೋಜನೆಗಳ ಪ್ರಯೋಜನ ಪಡೆಯುವಲ್ಲಿ ಫಲಾನುಭವಿಗಳು ಸಮಸ್ಯೆ ಎದುರಿಸುತ್ತಿದ್ದರೆ ತಕ್ಷಣ ಸ್ಪಂದಿಸಬೇಕು ಎಂದು ಹೇಳಿದರು.



ಯೋಜನೆಯಿಂದ ಹೊರಗುಳಿದಿರುವ ಅರ್ಹ ಫಲಾನುಭವಿಗಳನ್ನು ಗುರುತಿಸಿ, ಯೋಜನೆಯ ಲಾಭ ದೊರಕಿಸಿಕೊಡುವ ನಿಟ್ಟಿನಲ್ಲಿ ಅಧಿಕಾರಿಗಳು, ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರು ಕಾರ್ಯಪ್ರವೃತ್ತರಾಗಬೇಕು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ವಿನಯ ನಾವಲಗಟ್ಟಿ ತಿಳಿಸಿದರು.



ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕಾಧಿಕಾರಿ ರಾಹುಲ್ ಶಿಂಧೆ ಮಾತನಾಡಿ ಓಟಿಪಿ ಮೂಲಕ ಪಡಿತರ ಪಡೆಯಲು ಈ ಮುಂಚೆ ಅನುಮತಿ ಇತ್ತು ಆದರೆ ದುರ್ಬಳಕೆ ಆಗುತ್ತಿರುವ ಕಾರಣ ಸರ್ಕಾರದಿಂದ ಓಟಿಪಿ ಮೂಲಕ ಪಡಿತರ ಪಡೆಯಲು ಬಯೋ ಮೆಟ್ರಿಕ್ ಕಡ್ಡಾಯಗೊಳಿಸಲಾಗಿದೆ. ಬಯೋಮೆಟ್ರಿಕ್ ತೊಂದರೆ ಇರುವ ಪಡಿತರದಾರರಿಗೆ ಮಾತ್ರ ಒಟಿಪಿ ಮೂಲಕ ಪಡಿತರ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದರು.



ಗ್ಯಾರಂಟಿ ಯೋಜನೆಗಳ ಸಮಿತಿಯ ಜಿಲ್ಲಾ, ತಾಲೂಕಾ ಅಧ್ಯಕ್ಷರು ಗ್ಯಾರಂಟಿ ಯೋಜನೆಗಳ ತಾಲೂಕುವಾರು ಅನಿಸಿಕೆ ತಿಳಿಸಲು ಅಥವಾ ದೂರುಗಳನ್ನು ನೋಂದಣಿ ಮಾಡಲು ಗೂಗಲ್ ಸ್ಪ್ರೆಡ್ ಶೀಟ್ ಲಿಂಕ್ ಶೀಘ್ರದಲ್ಲೇ ಬಿಡುಗಡನೆ ಮಾಡಲಿದ್ದು, ಫಲಾನುಭವಿಗಳಿಗೆ ಯಾವುದೇ ರೀತಿಯಲ್ಲಿ ತೊಂದರೆ ಎದುರಾದಲ್ಲಿ ಲಿಂಕ್ ಮೂಲಕ ದೂರು ಸಲ್ಲಿಸಬಹುದಾಗಿದೆ.



ಸರ್ಕಾರದಿಂದ ಪಂಚ ಗ್ಯಾರಂಟಿ ಯೋಜನೆಗಳಡಿ ಪ್ರತಿ ಕುಟುಂಬಕ್ಕೆ ಸರಿ ಸುಮಾರು 10 ಸಾವಿರ ವರೆಗೆ ಆರ್ಥಿಕ ಹೊರೆ ಕಡಿಮೆಯಾಗಿದೆ. ಆಯಾ ಇಲಾಖೆಗಳಲ್ಲಿ ಕೆಲವು ತಾಂತ್ರಿಕ ತೊಂದರೆ ಇರುವ ಕಾರಣ ಫಲಾನುಭವಿಗಳು ಸಹಕರಿಸಲು ಗ್ಯಾರಂಟಿ ಸಮಿತಿ ಸದಸ್ಯರು ತಿಳಿಹೇಳಬೇಕು. ಆಯಾ ಇಲಾಖೆಯಿಂದ ನಿಗದಿತ ಅವಧಿಯೊಳಗೆ ತಾಂತ್ರಿಕ ದೋಷ ಸರಿಪಡಿಸಲಾಗುವುದು ಎಂದು ಹೇಳಿದರು.



ಯುವನಿಧಿ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ತಾಲೂಕಾ ಮಟ್ಟದಲ್ಲಿ ಕಾಲೇಜುಗಳಿಗೆ ಗ್ಯಾರಂಟಿ ಸಮಿತಿ ಸದಸ್ಯರು ಭೇಟಿ ನೀಡಿ ಪದವೀಧರ ಮಾಹಿತಿ ಪಡೆದು ನೋಂದಣಿ ಮಾಡಿಕೊಳ್ಳದ ಅಭ್ಯರ್ಥಿಗಳಿಗೆ ನೋಂದಣಿ ಮಾಡಿಸಿಕೊಳ್ಳುವಂತೆ ಅಭಿಯಾನ ಹಮ್ಮಿಕೊಳ್ಳಬೇಕು ಎಂದು ತಿಳಿಸಿದರು.



ಗ್ಯಾರಂಟಿ ಯೋಜನೆಗಳ ಸಮಿತಿ ಬಗ್ಗೆ ಅಧಿವೇಶನದಲ್ಲಿ ಚರ್ಚೆಯಾಗಿದೆ. ಎಲ್ಲ ಪದಾಧಿಕಾರಿಗಳು ನಮ್ಮ ವ್ಯಾಪ್ತಿಯಲ್ಲಿ ಸಮಪರ್ಕವಾಗಿ ಕಾರ್ಯ ನಿರ್ವಹಿಸಬೇಕು. ಸರ್ಕಾರದ ವಿವಿಧ ಯೋಜನೆಗಳನ್ನು ತಲುಪಿಸುವ ನಿಟ್ಟಿನಲ್ಲಿ ಎಲ್ಲ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರು ಕಾರ್ಯ ನಿರ್ವಹಿಸಬೇಕು ಎಂದು ಜಿ.ಪಂ ಸಿಇಓ ರಾಹುಲ್ ಶಿಂಧೆ ತಿಳಿಸಿದರು.



ಖಾನಾಪೂರ ತಾಲೂಕಿನ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಮಾತನಾಡಿ ಖಾನಾಪೂರ ತಾಲೂಕಿನ ಕೆಲವು ಪಡಿತರ ಅಂಗಡಿಗಳಲ್ಲಿ ಸರಿಯಾದ ತೂಕದಲ್ಲಿ ಪಡಿತರ ವಿತರಣೆ ಮಾಡುತ್ತಿಲ್ಲ. ವಿಚಾರಿಸಿದರೆ ಸಮಂಜಸವಲ್ಲದ ಉತ್ತರ ನೀಡುತ್ತಿದ್ದಾರೆ ಹಾಗಾಗಿ ಅಂತಹ ಅಂಗಡಿಗಳ ವಿರುದ್ಧ ದೂರುಗಳನ್ನು ಸ್ವೀಕರಿಸಿ ಕ್ರಮ ಜರುಗಿಸಬೇಕು ಎಂದು ವಿನಂತಿಸಿದರು.



ಈಗಾಗಲೇ ನೀಡಲಾಗುತ್ತಿರುವ 5 ಕೆ.ಜಿ ಅಕ್ಕಿ ಬದಲಿಗೆ ಹಣ ಸಂದಾಯ ಮಾಡಲಾಗುತ್ತಿದ್ದು, ಡಿಸೆಂಬರ್ ಮಾಹೆಯಲ್ಲಿ ಹಣ ನೀಡಲಾಗಿದೆ ಜನವರಿ ತಿಂಗಳು ಮಾತ್ರ ಬಾಕಿಯಿದೆ. ಫೆಬ್ರುವರಿ ತಿಂಗಳಿನಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ತಲಾ 5 ಕೆ.ಜಿ ಅಕ್ಕಿ ನೀಡಲಾಗುತ್ತಿದೆ ಎಂದು ಎಂದು ಆಹಾರ ಇಲಾಖೆ ಉಪ ನಿರ್ದೇಶಕ ಮಲ್ಲಿಕಾರ್ಜುನ್ ನಾಯಕ ವಿವರಿಸಿದರು.



ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಬಸವರಾಜ ಹೆಗ್ಗನಾಯಕ ಅವರು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ ನಿರ್ವಹಿಸಿದರು.



ಜಿಲ್ಲಾ ಪಂಚಾಯತ್ ಸಹಾಯಕ ಕಾರ್ಯದರ್ಶಿ

ರಾಹುಲ್ ಕಾಂಬಳೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಆರ್. ನಾಗರಾಜ್, ಹೆಸ್ಕಾಂ, ಸಾರಿಗೆ ಸಂಸ್ಥೆ ಅಧಿಕಾರಿಗಳು, ಜಿಲ್ಲಾ ಪಂಚಾಯತ್ ಗ್ಯಾರಂಟಿ ಯೋಜನೆಗಳ ವಿಷಯ ನಿರ್ವಾಹಕ ಪ್ರಶಾಂತ ಕಲ್ಲಪಗೌಡರ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿ ಸಿಬ್ಬಂದಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ