Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮ ...... ಹೆಣ್ಣು ಮಗುವನ್ನು ರಕ್ಷಿಸುವುದು ಪ್ರತಿಯೊಬ್ಬರ ಜವಾಬ್ದಾರಿ: ಡಾ. ರವೀಂದ್ರನಾಥ್

ಕೊಪ್ಪಳ ಜನವರಿ 28  ಹೆಣ್ಣು ಮಗುವನ್ನು ರಕ್ಷಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ರವೀಂದ್ರನಾಥ್ ಎಂ.ಹೆಚ್ ಹೇಳಿದರು.

ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಬೋಧಕ ಆಸ್ಪತ್ರೆಯ ಸಂಯುಕ್ತಾಶ್ರಯದಲ್ಲಿ ಎಂ.ಸಿ.ಹೆಚ್ ಆಸ್ಪತ್ರೆಯ ಬಾಣಂತಿಯರ ವಾರ್ಡಿನಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ “ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮ” ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿ ವರ್ಷ ಜನವರಿ 24 ರಂದು “ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮ”ವನ್ನು ಆಚರಿಸಲಾಗುತ್ತದೆ. ಈ ಕಾರ್ಯಕ್ರಮದ ಉದ್ದೇಶ ಹೆಣ್ಣು ಮಗುವಿನ ಮಹತ್ವದ ಬಗ್ಗೆ, ಹೆಣ್ಣು ಮಕ್ಕಳ ಸಮಾನತೆ ಮತ್ತು ಮಕ್ಕಳ ರಕ್ಷಣೆ ಕುರಿತು, ಸಮಾಜದಲ್ಲಿ ಅರಿವು ಮೂಡಿಸುವುದಾಗಿದೆ. ಈ ಪುರುಷ ಪ್ರಧಾನ ಕುಟುಂಬದಲ್ಲಿ ಹೆಣ್ಣು ಮಕ್ಕಳಿಗೆ ಇನ್ನೂ ಸರಿಯಾದ ಸ್ಥಾನ-ಮಾನ ನೀಡಿರುವುದಿಲ್ಲ. ಕುಟುಂಬದಲ್ಲಿ ಹೆಣ್ಣು ಮಗುವನ್ನು ನೋಡುವ ದೃಷ್ಠಿಕೋನ ಬೇರೆಯಾಗಿದೆ. ಆದರೆ ಹೆಣ್ಣು ಮಕ್ಕಳ ರಕ್ಷಣೆಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದೆ. ಹೆಣ್ಣು ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸಬೇಕು. ಹೆಣ್ಣು ಕುಟುಂಬದ ಕಣ್ಣು, ಸಮಾಜದ ಆಸ್ತಿ, ಮನೆ ಬೆಳಗುವ ನಂದಾದೀಪವಿದ್ದಂತೆ, ಮನೆಯೇ ಮೊದಲ ಪಾಠ ಶಾಲೆ, ತಾಯಿಯೇ ಮೊದಲ ಗುರು, ಎಂಬುದನ್ನು ಅರಿಯಬೇಕು. ಚಿಕ್ಕ ಮಕ್ಕಳನ್ನು ನೋಡಿಕೊಳ್ಳುವವಳು ಹೆಣ್ಣು, ವಯಸ್ಸಾದವರ ಆರೈಕೆ ಮಾಡುವವಳೂ ಹೆಣ್ಣು, ಪ್ರತಿಯೊಂದು ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸುವವಳು ಹೆಣ್ಣು. ಆದ್ದರಿಂದ ಹೆಣ್ಣು ಮಕ್ಕಳ ಬಗ್ಗೆ ತಾತ್ಸಾರ ಮನೋಭಾವನೆ ಮಾಡದೆ ಪ್ರೀತಿಯಿಂದ ಕಾಣಬೇಕು. ಕುಟುಂಬ ಕಲ್ಯಾಣ ಕಾರ್ಯಕ್ರಮದಡಿಯಲ್ಲಿ ಒಂದು ಮಗುವಿನಿಂದ ಇನ್ನೊಂದು ಮಗುವಿಗೆ, ಕನಿಷ್ಠ 4 ವರ್ಷ ಅಂತರ ಕಾಪಾಡಲು ಕುಟುಂಬ ಕಲ್ಯಾಣ ಕಾರ್ಯಕ್ರಮದ ವಿಧಾನಗಳನ್ನು ಅಳವಡಿಸಿಕೊಳ್ಳಬೇಕು. ಇದಕ್ಕಾಗಿ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು, ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಬೇಕು ಎಂದು ತಿಳಿಸಿದರು.

ಗರ್ಭಪೂರ್ವ ಮತ್ತು ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ಕಾನೂನು ಬಾಹಿರ ಮತ್ತು ಶಿಕ್ಷಾರ್ಹ ಅಪರಾಧವಾಗಿದೆ. ಒಂದು ವೇಳೆ ಲಿಂಗ ಪತ್ತೆ ಮಾಡಿ, ಗರ್ಭಪಾತ ಮಾಡಿಸಿದರೆ 10 ಸಾವಿರ ರೂಗಳಿಂದ 1 ಲಕ್ಷ ರೂಗಳವರೆಗೆ ಹಾಗೂ 3 ರಿಂದ 5 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದರು.

ಕೊಪ್ಪಳ ಎಂ.ಸಿ.ಹೆಚ್ ಆಸ್ಪತ್ರೆಯ ಪ್ರಸೂತಿ ಹಾಗೂ ಸ್ತ್ರೀರೋಗ ತಜ್ಞರಾದ ಡಾ. ಸುರೇಖಾ ಅವರು ಕಾರ್ಯಕ್ರಮ ಕುರಿತು ಮಾತನಾಡಿ, ಹೆಣ್ಣು ಮಕ್ಕಳ ಎಲ್ಲಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಹೆಣ್ಣು ಮಕ್ಕಳ ಬಗ್ಗೆ ನಿರ್ಲಕ್ಷ್ಯತನ ಬೇಡ, ಹೆಣ್ಣು-ಗಂಡು ಬೇದ-ಬಾವ ಮಾಡದೇ ಸಮಾನವಾಗಿ ಕಾಣಬೇಕು ಮತ್ತು ಸಮಾನವಾಗಿ ಶಿಕ್ಷಣ ಕೊಡಿಸಬೇಕು ಎಂದು ವಿವರವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಸ್ತ್ರೀರೋಗ ತಜ್ಞರಾದ ಡಾ ರಾಜೇಶ್, ಮಕ್ಕಳ ತಜ್ಞರಾದ ಡಾ. ಭಾರ್ಗವ, ಮಕ್ಕಳ ವಿಭಾಗದ ಮುಖ್ಯಸ್ಥರಾದ ಡಾ ಗೀರಿಶ್, ಶುಶ್ರೂಷಕ ಅಧೀಕ್ಷಕರಾದ ತೈರುನ್ನಿಸಾ ಸೈಯದ್, ಎಂ.ಸಿ.ಹೆಚ್ ಆಸ್ಪತ್ರೆಯ ವೈದ್ಯಾಧಿಕಾರಿಗಳು, ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು, ಬಾಣಂತಿಯರು, ತಾಯಂದಿರು ಹಾಗೂ ಇತರರು ಉಪಸ್ಥಿತರಿದ್ದರು.

ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ವ್ಹಿ.ಪಿ ಅವರು ಕಾರ್ಯಕ್ರವನ್ನು ನಿರೂಪಿಸಿದರು. ಸ್ವಾತಿ ಅವರ ಪ್ರಾರ್ಥನೆ ಗೀತೆಯನ್ನು ಹಾಡಿದರು. ಕಾರ್ಯಕ್ರಮದ ಅಂಗವಾಗಿ ಆಸ್ಪತ್ರೆಯಲ್ಲಿರುವ ಎಲ್ಲಾ ಬಾಣಂತಿಯರಿಗೆ ಹಣ್ಣು ಹಂಪಲುಗಳನ್ನು ವಿತರಣೆ ಮಾಡಲಾಯಿತು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ