Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಶಿಕ್ಷಣ ಸುದ್ದಿ

ಆ.01, 02 ರಂದು ಶಿಕ್ಷಣ ಸಮಾವೇಶ ಕಾರ್ಯಾಗಾರ; ನೋಂದಣಿಗೆ ಆಹ್ವಾನ





ಬಳ್ಳಾರಿ

ಕಲಬುರಗಿ ವಿಭಾಗದ ಶಾಲಾ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಜೆಎಸ್‍ಡಬ್ಲ್ಯೂ ಫೌಂಡೇಶನ್ ವತಿಯಿಂದ ‘ಎಡುಕಾನ್-2024, ಕೈಜೋಡಿಸಿ ಕಲಿಸೋಣ' ಎಂಬ ವಿಷಯದೊಂದಿಗೆ ಆಗಸ್ಟ್ 01 ಮತ್ತು 02 ರಂದು ತೋರಣಗಲ್ಲಿನ ಜೆಎಸ್‍ಡಬ್ಲ್ಯೂನ ವಿದ್ಯಾನಗರದ ಜೆ-ಮ್ಯಾಕ್ಸ್ ಹಾಲ್‍ನಲ್ಲಿ ಶಿಕ್ಷಣ ಸಮಾವೇಶವನ್ನು ಆಯೋಜಿಸಲಾಗುತ್ತಿದ್ದು, ಆಸಕ್ತರು ನೋಂದಾಯಿಸಿಕೊಳ್ಳಬಹುದು.

ಗುಣಾತ್ಮಕ ಶಿಕ್ಷಣಕ್ಕಾಗಿ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ನವೀನ ವಿಧಾನಗಳ ಮೂಲಕ ಪರಿವರ್ತನೆಯನ್ನು ತರಲು ಶಿಕ್ಷಣ ತಜ್ಞರು, ಸ್ವಯಂ ಸೇವಾ ಸಂಸ್ಥೆಗಳು ಹಾಗೂ ಶಿಕ್ಷಣ ಭಾಗಿದಾರರನ್ನು ಒಗ್ಗೂಡಿಸುವುದು ಈ ಸಮಾವೇಶದ ಮುಖ್ಯ ಉದ್ದೇಶವಾಗಿದೆ.

ಸಮಾವೇಶದಲ್ಲಿ ಭಾಗವಹಿಸಲು ಕಲಬುರಗಿ ವಿಭಾಗದ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತರ ಕಚೇರಿ ಅಥವಾ ವೆಬ್‍ಸೈಟ್ https://cpikalaburgi.karnataka.gov.in ಇಲ್ಲಿ ನೋಂದಾಯಿಸಿಕೊಳ್ಳಬಹುದು.

ಕಾರ್ಯಕ್ರಮದ ವಿವರವಾದ ವೇಳಾಪಟ್ಟಿಯನ್ನು ನಂತರ ತಿಳಿಸಲಾಗುವುದು. ಸೀಮಿತ ಸಾಮಥ್ರ್ಯದ ವಸತಿ ಸೌಲಭ್ಯದ ವ್ಯವಸ್ಥೆ ಕಲ್ಪಿಸಲಾಗುತ್ತದೆ. ನೋಂದಣಿಗೆ ಜುಲೈ 20 ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ನೋಡಲ್ ವ್ಯಕ್ತಿಗಳಾದ ತೋರಣಗಲ್ಲಿನ ಜೆಎಸ್‍ಡಬ್ಲ್ಯೂ ಫೌಂಡೇಶನ್ ಸಿಎಸ್‍ಆರ್‍ನ ಹಿರಿಯ ವ್ಯವಸ್ಥಾಪಕ ರಾಜಶೇಖರ ರಾಜು ಅವರ ಮೊ.9989833133 ಮತ್ತು ಕಲಬುರಗಿ ವಿಭಾಗದ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತರ ಕಚೇರಿಯ ಹಿರಿಯ ಸಹಾಯಕ ನಿರ್ದೇಶಕ ಚನ್ನಬಸಪ್ಪ ಮುಧೋಳ ಅವರ ಮೊ.8310259380 ಗೆ ಸಂಪರ್ಕಿಸಬಹುದು ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಬಿ.ಉಮಾದೇವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ