Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಸ್ಥಳೀಯ ಸುದ್ದಿ

ಬಳ್ಳಾರಿ: ಜಿಲ್ಲಾ ಯೋಜನಾ ಸಮಿತಿ ಸದಸ್ಯರ ಚುನಾವಣಾ ವೇಳಾಪಟ್ಟಿ ಪ್ರಕಟ





ಬಳ್ಳಾರಿ,ಡಿ.20

ಬಳ್ಳಾರಿ ಜಿಲ್ಲಾ ಯೋಜನಾ ಸಮಿತಿಗೆ ಪುರಸಭಾ ಕ್ಷೇತ್ರದಿಂದ ಚುನಾಯಿತ ಸದಸ್ಯರನ್ನು ಆಯ್ಕೆ ಮಾಡುವ ಸಂಬAಧ ಚುನಾವಣಾ ವೇಳಾಪಟ್ಟಿ ಪ್ರಕಟಿಸಲಾಗಿದೆ ಎಂದು ಚುನಾವಣಾಧಿಕಾರಿ ಆಗಿರುವ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಅವರು ತಿಳಿಸಿದ್ದಾರೆ.

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ಪ್ರಕರಣ 310ರ ಪ್ರಕಾರ ಜಿಲ್ಲಾ ಯೋಜನಾ ಸಮಿತಿ ರಚಿಸಬೇಕಾಗಿದ್ದು, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಜಿಲ್ಲಾ ಯೋಜನಾ ಸಮಿತಿ ಸದಸ್ಯರುಗಳ ಚುನಾವಣೆ) ನಿಯಮಗಳು 1996ರ 8ರ ನಿಯಮದ ಪ್ರಕಾರ ಬಳ್ಳಾರಿ ಜಿಲ್ಲಾ ಯೋಜನಾ ಸಮಿತಿಗೆ ಪುರಸಭಾ ಮತಕ್ಷೇತ್ರಗಳಿಂದ ಪ್ರತ್ಯೇಕವಾಗಿ ಸದಸ್ಯರ ಆಯ್ಕೆ ಕುರಿತು ಚುನಾವಣೆ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ.

*ಚುನಾವಣಾ ವೇಳಾಪಟ್ಟಿ:*

ಪುರಸಭಾ ಕ್ಷೇತ್ರದಿಂದ ಚುನಾಯಿಸಬೇಕಾದ ಸದಸ್ಯರುಗಳ ಸಂಖ್ಯೆ: ಪುರಸಭಾ ಕ್ಷೇತ್ರದಿಂದ - 23 ಸದಸ್ಯರು (ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್, ಮಹಾನಗರ ಪಾಲಿಕೆ ಚುನಾಯಿತ ಸದಸ್ಯರುಗಳು).

ನಾಮಪತ್ರ ಸ್ವೀಕರಿಸುವ ದಿನಾಂಕ, ಸಮಯ ಮತ್ತು ಸ್ಥಳ(ಸಾರ್ವಜನಿಕ ರಜಾದಿನ ಹೊರತುಪಡಿಸಿ): ಡಿ.22 ರಿಂದ 31 ರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 03 ಗಂಟೆಯವರೆಗೆ, ಸ್ಥಳ: ಜಿಲ್ಲಾ ಪಂಚಾಯತ್ ನ ಪಿಎಇಒ ಕೊಠಡಿ ಯೋಜನಾ ಶಾಖೆ.

ನಾಮಪತ್ರ ಪರಿಶೀಲಿಸುವ ದಿನಾಂಕ, ದಿನ, ಸಮಯ ಮತ್ತು ಸ್ಥಳ: 2026 ರ ಜನವರಿ 02 (ಶುಕ್ರವಾರ) ಬೆಳಿಗ್ಗೆ 11 ಗಂಟೆಗೆ, ಸ್ಥಳ: ಜಿಲ್ಲಾ ಪಂಚಾಯತ್ ನ ಪಿಎಇಒ ಕೊಠಡಿ ಯೋಜನಾ ಶಾಖೆ.

ನಾಮಪತ್ರ ಹಿಂಪಡೆಯುವ ಕೊನೆ ದಿನಾಂಕ, ದಿನ ಮತ್ತು ಸಮಯ: 2026 ರ ಜನವರಿ 05 (ಸೋಮವಾರ) ಮಧ್ಯಾಹ್ನ 03 ಗಂಟೆಯವರೆಗೆ, ಸ್ಥಳ: ಜಿಲ್ಲಾ ಪಂಚಾಯತ್ ನ ಪಿಎಇಒ ಕೊಠಡಿ ಯೋಜನಾ ಶಾಖೆ.

ಮತದಾನ ಅಗತ್ಯವಾದಲ್ಲಿ ಮತದಾನ ನಡೆಸಬೇಕಾದ ದಿನಾಂಕ, ದಿನ, ಸಮಯ ಮತ್ತು ಸ್ಥಳ: 2026 ರ ಜನವರಿ 12(ಸೋಮವಾರ) ಬೆಳಿಗ್ಗೆ 09 ರಿಂದ ಸಂಜೆ 04 ರ ವರೆಗೆ, ಸ್ಥಳ: ಜಿಲ್ಲಾ ಪಂಚಾಯತ್ ನಜೀರ್ ಸಭಾಂಗಣ.

ಮತ ಎಣಿಕೆ ದಿನಾಂಕ, ಸಮಯ ಮತ್ತು ಸ್ಥಳ: 2026 ರ ಜನವರಿ 12(ಸೋಮವಾರ) ಸಂಜೆ 05 ಗಂಟೆಗೆ, ಸ್ಥಳ: ಜಿಲ್ಲಾ ಪಂಚಾಯತ್ ನಜೀರ್ ಸಭಾಂಗಣ.

2026 ರ ಜನವರಿ 13 (ಮಂಗಳವಾರ) ಸಂಜೆ 05 ಗಂಟೆಗೆ ಚುನಾವಣೆ ಪ್ರಕ್ರಿಯೆ ಮುಕ್ತಾಯಗೊಳ್ಳಲಿದೆ ಎಂದು ಚುನಾವಣಾಧಿಕಾರಿ ಆಗಿರುವ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಅವರು ತಿಳಿಸಿದ್ದಾರೆ.

--------------

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ