Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಉದ್ಯೊಗದಾತರು ಉಪಧನ ವಿಮಾ ನಿಯಮಗಳನ್ನು ಜಾರಿಗೆ ತರಬೇಕು : ಗೋಪಿನಾಥ್

ಶಿವಮೊಗ್ಗ ಜು.09 

ಉದ್ಯೋಗದಾತರು ತಮ್ಮ ಕಾರ್ಮಿಕರಿಗೆ ಉಪಧನವನ್ನು ಪಾವತಿಸಬೇಕು. ಇದರಿಂದ ಅವರು ಹಾಗೂ ಅವರ ಕುಟುಂಬಕ್ಕೆ ಅನುಕೂಲವಾಗುವುದು ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷರಾದ ಗೋಪಿನಾಥ್ ಹೇಳಿದರು.

ಕರ್ನಾಟಕ ಕಡ್ಡಾಯ ಉಪಧನ ವಿಮಾ ನಿಯಮಗಳು-2024 ಅನುಷ್ಟಾನ ಕುರಿತು ಕಾರ್ಮಿಕ ಇಲಾಖೆ ಮತ್ತು ಎಲ್‍ಐಸಿ ವತಿಯಿಂದ ಜು.9 ರಂದು ಛೇಂಬರ್ ಆಫ್ ಕಾಮರ್ಸ್ ಇಲ್ಲಿ ಹೋಟೆಲ್ ಮಾಲೀಕರು, ಆಸ್ಪತ್ರೆ, ನರ್ಸಿಂಗ್ ಹೋಂ, ಖಾಸಗಿ ಶಿಕ್ಷಣ ಸಂಸ್ಥೆ, ಸಾರಿಗೆ ಮುಖ್ಯಸ್ಥರು, ವಿವಿಧ ಸಂಸ್ಥೆಗಳ ಮಾಲೀಕರುಗಳಿಗೆ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಉಪಧನ ಪಾವತಿ ಕಾಯ್ದೆ 1972 ರ ಕಲಂ 4-ಎ ರನ್ವಯ ಕರ್ನಾಟಕ ಕಡ್ಡಾಯ ಉಪಧನ ವಿಮಾ ನಿಯಮಗಳು 2024 ಅನುಷ್ಟಾನಗೊಳಿಸುವ ಕುರಿತು ಸರ್ಕಾರ ಹೊರಡಿಸಿರುವ ಸುತ್ತೋಲೆಯನ್ನು ವಿವಿಧ ಸಂಸ್ಥೆಗಳ ಮಾಲೀಕರು ಸಾಮಾಜಿಕ ಹೊಣೆಗಾರಿಕೆಯಿಂದ ಜಾರಿಗೆ ತರಬೇಕು. ವಾಣಿಜ್ಯೋದ್ಯಮಿಗಳು, ಉದ್ಯೋಗದಾತರು ಎಲ್‍ಐಸಿ ಸಂಸ್ಥೆಗೆ ಕಾರ್ಮಿಕರ ಗ್ರಾಚ್ಯುಯಿಟಿ ತುಂಬಬೇಕು. ಇದರಿಂದ ಕಾರ್ಮಿಕರಿಗೆ ಹಲವಾರು ರೀತಿಯಲ್ಲಿ ಅನುಕೂಲವಾಗುತ್ತದೆ ಎಂದರು.

ಜಿಲ್ಲಾ ಕಾರ್ಮಿಕ ಅಧಿಕಾರಿ ವೇಣುಗೋಪಾಲ್ ಎಂ ಪಿ ಪ್ರಾಸ್ತಾವಿಕವಾಗಿ ಮಾತನಾಡಿ, ಉಪಧನ ಪಾವತಿ ಕಾಯ್ದೆ 1972 ಕಲಂ 4ಎ ಕಡ್ಡಾಯ ವಿಮೆಯನ್ನು ಜಾರಿಗೆ ತಂದಲ್ಲಿ ಉದ್ಯೋಗದಾತರ ಸಂಸ್ಥೆಯು ಯಾವುದೇ ಕಾರಣದಿಂದ ಮುಚ್ಚಿದಲ್ಲಿ, ಆರ್ಥಿಕವಾಗಿ ನಷ್ಟ ಅನುಭವಿಸಿದಲ್ಲಿ ಅಥವಾ ದಿವಾಳಿಯಾದಲ್ಲಿಯೂ ಸಹ ಕಾರ್ಮಿಕ ಉಪಧನವನ್ನು ಸುರಕ್ಷಿತವಾಗಿಸಲು ಅವಕಾಶವಾಗುತ್ತದೆ. ಉದ್ಯೋಗದಾತರು ಕಾರ್ಮಿಕರ ಉಪಧನ ಪಾವತಿಸುವುದರಿಂದ ಹಲವಾರು ಅನುಕೂಲಗಳಿವೆ ಎಂದು ವಿವರಿಸಿದರು.

ಜಿಲ್ಲಾ ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ರಂಗಪ್ಪ ಮಾತನಾಡಿ, ರಾಜ್ಯದಲ್ಲಿ ಉಪಧನ ಪಾವತಿ ಕಾಯ್ದೆ 1972 ರ ಕಲಂ 4-ಎ ರನ್ವಯ ಕರ್ನಾಟಕ ಕಡ್ಡಾಯ ಉಪಧನ ವಿಮಾ ನಿಯಮಗಳು 2024 ಅನುಷ್ಟಾನಗೊಳಿಸುವ ಕುರಿತು ಸರ್ಕಾರ ಸುತ್ತೋಲೆ ಹೊರಡಿಸಿರುವುದು ಸಂತಸದ ವಿಚಾರ. ಸರ್ಕಾರ ಈ ಕ್ರಮ ವಹಿಸಿರುವುದಕ್ಕೆ ಸರ್ಕಾರಕ್ಕೆ ಅಭಿನಂದನೆಗಳು. ಎಲ್ಲ ಉದ್ಯೊಗದಾತರು, ಮಾಲೀಕರು ಈ ನಿಯಮಗಳನ್ನು ಜಾರಿಗೆ ತರಬೇಕು. ಕಾರ್ಮಿಕರಿಗೆ ಅನುಕೂಲ ಮಾಡಿಕೊಡಬೇಕೆಂದರು.

ಮಂಗಳೂರು ಎಲ್‍ಐಸಿ ರೀಜನಲ್ ಮ್ಯಾನೇಜರ್ ಸಿ.ವಿ.ಪ್ರಭ, ಪಿಪಿಟಿ ಪ್ರದರ್ಶನ ಮೂಲಕ ಕರ್ನಾಟಕ ಕಡ್ಡಾಯ ಉಪಧನ ವಿಮಾ ನಿಯಮಗಳು-2024 ರನ್ವಯ 10 ಜನ ಮತ್ತು ಅದಕ್ಕಿಂತ ಹೆಚ್ಚು ಕಾರ್ಮಿಕರನ್ನು ನೇಮಿಸಿಕೊಂಡಿರುವ ಸಂಸ್ಥೆಯ ಮಾಲೀಕರು ಉಪಧನವನ್ನು ಪಾವತಿಸಬೇಕು. ಕರ್ನಾಟಕ ಕಡ್ಡಾಯ ವಿಮಾ ಉಪಧನ ನಿಯಮ 2024 ರನ್ವಯ ಅರ್ಹ ಕಾರ್ಮಿಕ/ನೌರರಿಗೆ ಆಗುವ ಅನುಕೂಲಗಳು, ಮಾಲೀಕರಿಗೆ/ಆಡಳಿತ ವರ್ಗಕ್ಕೆ ಆಗುವ ಅನುಕೂಲಗಳು, ಉಪಧನ ಪಾವತಿಸುವಲ್ಲಿ ಮಾಲೀಕರ ಕರ್ತವ್ಯಗಳು, ನೌಕರರಿಗೆ ಆಗುವ ಅನುಕೂಲಗಳು, ನಿಯಂತ್ರಣಾಧಿಕಾರಿಗಳ ಕರ್ತವ್ಯ ಮತ್ತು ಜವಾಬ್ದಾರಿಗಳ ಬಗ್ಗೆ ತಿಳಿಸಿದರು.

ಕಾರ್ಮಿಕ ನಿರೀಕ್ಷಕರಾದ ಭೀಮೇಶ್, ಸುಖಿತಾ ಕೆ ಸಿ, ಕಾರ್ಮಿಕ ಇಲಾಖೆ ಯೋಜನಾ ನಿರ್ದೇಶಕ ರಘುನಾಥ್, ಅಧಿಕಾರಿಗಳು, ಎಲ್‍ಐಸಿ ಅಧಿಕಾರಿಗಳು, ವಿವಿಧ ಖಾಸಗಿ ಸಂಸ್ಥೆಗಳ ಮಾಲೀಕರು ಪಾಲ್ಗೊಂಡಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ