Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅರಣ್ಯ ಜಮೀನು ಒತ್ತುವರಿ : ಶಿಕ್ಷೆ ನೀಡಿ ತೀರ್ಪು

ಶಿವಮೊಗ್ಗ, ಆ.14, 

ಶಿವಮೊಗ್ಗ ತಾಲ್ಲೂಕಿನ ಹೊಳಲೂರು ಹೋಬಳಿಯ ಬಿಕ್ಕೋನಹಳ್ಳಿ ಗ್ರಾಮದ ಸರ್ವೇ ನಂ 09 ರ ಕುಂಚೇನಹಳ್ಳಿ ಮೀಸಲು ಅರಣ್ಯ ಪ್ರದೇಶದಲ್ಲಿ ಅದೇ ಗ್ರಾಮದ ಚಂದ್ರಪ್ಪ, 50 ವರ್ಷ ಇವರು 01 ಎಕರೆ 20 ಗುಂಟೆ ಜಮೀನನ್ನು ಒತ್ತುವರಿ ಮಾಡಿಕೊಂಡಿರುವುದು ಸಾಬೀತಾದ ಕಾರಣ ಆರೋಪಿಗೆ 01 ವರ್ಷ ಸಾದಾ ಶಿಕ್ಷೆ ಮತ್ತು ರೂ.10 ಸಾವಿರ ದಂಡ ವಿಧಿಸಿ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯ ಆದೇಶಿಸಿದೆ.

ದೂರುದಾರರಾದ ಉಪ ವಲಯ ಅರಣ್ಯಾಧಿಕಾರಿ, ಗೆಜ್ಜೇನಹಳ್ಳಿ ಶಾಖೆ, ಶಂಕರ ವಲಯ, ಶಿವಮೊಗ್ಗ ಇವರು ದೂರು ನೀಡಿದ ಅನ್ವಯ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯವು ಈ ಪ್ರಕರಣವನ್ನು ಎಲ್‌ಜಿಸಿ(ಸಿ) ಸಂಖ್ಯೆ 1726/2019 ಎಂದು ದಾಖಲಿಸಿಕೊಂಡು ಸಂಪೂರ್ಣ ಸಾಕ್ಷö್ಯ ವಿಚಾರಣೆಯನ್ನು ನಡೆಸಿದ ನಂತರ ಆರೋಪಿಯು ಅರಣ್ಯ ಜಮೀನನ್ನು ಭೂ ಕಬಳಿಕೆ ಮಾಡಿರುವುದು ಸಾಬೀತಾದ ಕಾರಣ ಆರೋಪಿಗೆ 01 ವರ್ಷ ಸಾದಾ ಶಿಕ್ಷೆ ಮತ್ತು ರೂ.10,000/- ದಂಡವನ್ನು ವಿಧಿಸಿ, ದಂಡ ಪಾವತಿಸಲು ತಪ್ಪಿದಲ್ಲಿ 03 ತಿಂಗಳ ಸಾದಾ ಶಿಕ್ಷೆಯನ್ನು 02ನೇ ವಿಶೇಷ ನ್ಯಾಯಾಲಯದ ನ್ಯಾಯಿಕ ಸದಸ್ಯರಾದ ಪಾಟೀಲ ನಾಗಲಿಂಗನಗೌಡ ಮತ್ತು ಕಂದಾಯ ಸದಸ್ಯರಾದ ಕೆ.ಹೆಚ್.ಅಶ್ವತ್ಥ ನಾರಾಯಣಗೌಡ ಇವರು ಇದ್ದ ಪೀಠವು ದಿ: 11-07-2024 ರಂದು ತೀರ್ಪು ನೀಡಿರುತ್ತದೆ.

ಆರೋಪಿತರು ಒತ್ತುವರಿ ಮಾಡಿಕೊಂಡ ಅರಣ್ಯ ಜಮೀನನ್ನು ಕೂಡಲೇ ತೆರವುಗೊಳಿಸುವಂತೆ ಆದೇಶಿಸಿ, 60 ದಿನಗಳ ಒಳಗಾಗಿ ನ್ಯಾಯಾಲಯಕ್ಕೆ ವರದಿ ಸಲ್ಲಿಸುವಂತೆ ಉಪ ವಲಯ ಅರಣ್ಯಾಧಿಕಾರಿ, ಗೆಜ್ಜೇನಹಳ್ಳಿ, ಶಾಖೆ, ಶಂಕರ ವಲಯ ಇವರಿಗೆ ನಿರ್ದೇಶಿಸಿ ತೀರ್ಪನ್ನು ನೀಡಿರುತ್ತದೆ
Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು