Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಅವಳಿ ನಗರದಲ್ಲಿ ಸುಗಮ ಸಂಚಾರಕ್ಕಾಗಿ ಇ.ಆರ್.ಟಿ. ಬಸ್ ಸೇವೆ; ಜನಪ್ರತಿನಿಧಿಗಳ, ಸಾರ್ವಜನಿಕರ ಅಭಿಪ್ರಾಯಕ್ಕೆ ಮನ್ನಣೆ: ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್.





*ಧಾರವಾಡ  ಜೂ.16:* ದಿನದಿಂದ ದಿನಕ್ಕೆ ಹುಬ್ಬಳ್ಳಿ ಧಾರವಾಡ ಮಹಾನಗರವು ಬೆಳೆಯುತ್ತಿದ್ದು, ಅವಳಿ ನಗರದಲ್ಲಿ ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ ಹುಬ್ಬಳ್ಳಿ ಧಾರವಾಡ ಕಾರಿಡಾರ್‍ದಲ್ಲಿ ಎಲೆಕ್ಟ್ರಿಕ್ ರ್ಯಾಪಿಡ್ ಟ್ರಾನ್ಸಿಟ್-ಇ.ಆರ್.ಟಿ. ಬಸ್ ಸೇವೆ ಆರಂಭಿಸಲು ಜನಪ್ರತಿನಿಧಿಗಳ ಹಾಗೂ ಸಾರ್ವಜನಿಕರ ಅಭಿಪ್ರಾಯಗಳನ್ನು ಪಡೆದುಕೊಂಡು, ಉತ್ತಮವಾದ ಯೋಜನಾ ವರದಿಯನ್ನು ರೂಪಿಸಿ, ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಹೇಳಿದರು.



ಅವರು ಇಂದು ಸಂಜೆ ನಗರದ ಸೃಜನಾ ರಂಗಮಂದಿರದಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಿದ್ದ ಹುಬ್ಬಳ್ಳಿ-ಧಾರವಾಡ ಕಾರಿಡಾರ್‍ದಲ್ಲಿ ಇ.ಆರ್.ಟಿ. ಸಾರಿಗೆ ವ್ಯವಸ್ಥೆ ಕುರಿತು ಸಾರ್ವಜನಿಕರು ಮತ್ತು ಭಾಗಿದಾರರ ಸಭೆ ಜರುಗಿಸಿ, ಮಾತನಾಡಿದರು.



ಹುಬ್ಬಳ್ಳಿ ಧಾರವಾಡ ಕಾರಿಡಾರ್‍ದಲ್ಲಿ ಎಲೆಕ್ಟ್ರಿಕ್ ರ್ಯಾಪಿಡ್ ಟ್ರಾನ್ಸಿಟ್-ಇ.ಆರ್.ಟಿ. ಸಾರಿಗೆ ವ್ಯವಸ್ಥೆಯನ್ನು ಸರ್ಕಾರ ಮತ್ತು ಖಾಸಗಿ (ಪಿಪಿಪಿ ಮಾಡಲ್) ಸಹಭಾಗಿತ್ವದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಎಲೆಕ್ಟ್ರಿಕ್ ರ್ಯಾಪಿಡ್ ಟ್ರಾನ್ಸಿಟ್-ಇ.ಆರ್.ಟಿ. ಸಾರಿಗೆ ವ್ಯವಸ್ಥೆಯನ್ನು ಜಾರಿಗೊಳಿಸಲು ವಿಸೃತ ಯೋಜನಾ ವರದಿ (ಡಿಪಿಆರ್)ಯನ್ನು ಸಿದ್ಧಗೊಳ್ಳಿಸಲಾಗುತ್ತಿದೆ. ಸರ್ಕಾರವು 3 ತಿಂಗಳ ಕಾಲಾವಕಾಶ ನೀಡಿದ್ದು, ಈಗಾಗಲೇ ಒಂದು ತಿಂಗಳ ಅಧ್ಯಯನ ನಡೆಸಲಾಗಿದ್ದು, ಮುಂದಿನ ಎರಡು ತಿಂಗಳಲ್ಲಿ ಅಂತಿಮ ವಿಸೃತ ಯೋಜನಾ ವರದಿಯನ್ನು ಸರ್ಕಾರಕ್ಕೆ ಸಂಸ್ಥೆಯು ಸಲ್ಲಿಸಲಿದೆ ಎಂದು ಅವರು ಹೇಳಿದರು.



ಸಭೆಯಲ್ಲಿ ವಿಧಾನ ಪರಿಷತ್ತ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್, ಶಾಸಕರಾದ ಅರವಿಂದ ಬೆಲ್ಲದ, ಮಹೇಶ ಟೆಂಗಿನಕಾಯಿ ಹಾಗೂ ವಿವಿಧ ಪ್ರತಿನಿಧಿಗಳು, ಸಾರ್ವಜನಿಕರು ಮಾತನಾಡಿ, ತಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳನ್ನು ತಿಳಿಸಿ, ಮನವಿಗಳನ್ನು ಸಲ್ಲಿಸಿದರು.



ಜಿಲ್ಲಾಧಿಕಾರಿ ದಿವ್ಯ ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಗೋಪಾಲ ಬ್ಯಾಕೋಡ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗಾ ಎಮ್. ಬಿ.ಆರ್.ಟಿ.ಎಸ್. ವ್ಯವಸ್ಥಾಪಕ ನಿರ್ದೇಶಕಿ ಸಾವಿತ್ರಿ ಕಡಿ, ಉಪಪೊಲೀಸ್ ಆಯುಕ್ತ ರವೀಶ ಸಿ.ಆರ್., ಮಾಜಿ ಶಾಸಕ ಚಂದ್ರಕಾಂತ ಬೆಲ್ಲದ ಸೇರಿದಂತೆ ಇತರರು ಸಭೆಯಲ್ಲಿ ಭಾಗವಹಿಸಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ