Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಇಎಸ್‌ಐಸಿ ವಿಶೇಷ ಯೋಜನೆ: ಜ.31ರವರೆಗೆ ನೋಂದಣಿ ಅವಕಾಶ

ಬಳ್ಳಾರಿ,ಜ.29
ಕಾರ್ಮಿಕರ ರಾಜ್ಯ ವಿಮಾ ನಿಗಮವು (ಇಎಸ್‌ಐಸಿ) ಉದ್ಯೋಗದಾತರು ಮತ್ತು ಉದ್ಯೋಗಿಗಳ ನೋಂದಣಿಯನ್ನು ಉತ್ತೇಜಿಸುವ ಯೋಜನೆಯಡಿ ಉದ್ಯೋಗದಾತರು ಮತ್ತು ಉದ್ಯೋಗಿಗಳು ನೋಂದಾಯಿಕೊಳ್ಳಲು ಜ.31 ರ ವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಕಲಬುರಗಿ ಪ್ರಾದೇಶಿಕ ಕಚೇರಿಯ ಜಂಟಿ ನಿರ್ದೇಶಕ ಯುವರಾಜ ಎಸ್.ವಿ ಅವರು ತಿಳಿಸಿದ್ದಾರೆ.
ಉದ್ಯೋಗದಾತರು ಮತ್ತು ಉದ್ಯೋಗಿಗಳ ನೋಂದಣಿಯನ್ನು ಉತ್ತೇಜಿಸುವ ಯೋಜನೆಯು ಕಾರ್ಮಿಕರ ರಾಜ್ಯ ವಿಮಾ ನಿಗಮವು ಸಾಮಾಜಿಕ ಭದ್ರತಾ ವ್ಯಾಪ್ತಿಯನ್ನು ವಿಸ್ತರಿಸಲು ಅನುಮೋದಿಸಿದ ಒಂದು ವಿಶೇಷ ಉಪಕ್ರಮವಾಗಿದ್ದು, ಇದರಡಿ ನೋಂದಾಯಿಸಿಕೊಳ್ಳಲು 31ನೇ ಡಿಸೆಂಬರ್ 2025 ರವರೆಗೆ ಅವಕಾಶ ಕಲ್ಪಿಸಲಾಗಿತ್ತು.
ಗುತ್ತಿಗೆ ಹಾಗೂ ತಾತ್ಕಾಲಿಕ ಕಾರ್ಮಿಕರು ಸೇರಿದಂತೆ ಇಎಸ್‌ಇ ಅಡಿ ಇನ್ನು ನೋಂದಣಿಯಾಗದ ಉದ್ಯೋಗದಾತರು ಮತ್ತು ಉದ್ಯೋಗಿಗಳು ಯಾವುದೇ ಪರಿಶೀಲನೆ ಅಥವಾ ಹಿಂದಿನ ಅವಧಿಯ ಯಾವುದೇ ಬಾಕಿಯ ಬೇಡಿಕೆ ಇಲ್ಲದೇ ನೋಂದಾಯಿಸಿಕೊಳ್ಳಲು ಇರುವ ಅವಧಿಯನ್ನು ಜ.31 ರ ವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಉದ್ಯೋಗದಾತರು ತಮ್ಮ ಘಟಕಗಳು ಮತ್ತು ಉದ್ಯೋಗಿಗಳನ್ನು ಇಎಸ್‌ಐಸಿ ಪೋರ್ಟಲ್, ಶ್ರಮ್ ಸುವಿಧಾ ಮತ್ತು ಎಂಸಿಎ ಪೋರ್ಟಲ್ ಮೂಲಕ ಡಿಜಿಟಲ್ ರೂಪದಲ್ಲಿ ನೋಂದಾಯಿಸಿಕೊಳ್ಳಬಹುದು.
ಈ ಯೋಜನೆಯಿಂದ ಕಾರ್ಮಿಕರ ರಾಜ್ಯ ವಿಮಾ ನಿಗಮದ ಒಂದು ಪ್ರಗತಿಪರ ಹೆಜ್ಜೆಯಾಗಿದ್ದು, ಸರಳ ಮತ್ತು ಹಿಂದಿನ ಅವಧಿಯ ಬಾಕಿಯ ಬೇಡಿಕೆಯಿಲ್ಲದೆ ನೋಂದಣಿಗೆ ಸುಲಭವಾಗಿ ಸಾಮಾಜಿಕ ಭದ್ರತೆಗೆ ಒಳಪಡುವ ಯೋಜನೆಯಾಗಿದೆ.
ಉದ್ಯೋಗದಾತರು ಕೇವಲ ತಮ್ಮ ಕಾರ್ಯಪಡೆಯ ಕ್ರಮಬದ್ಧಗೊಳಿಸುವಿಕೆಯನ್ನು ಪ್ರೋತ್ಸಾಹಿಸುವುದಲ್ಲದೇ, ಇನ್ನೂ ಹೆಚ್ಚಿನ ಕಾರ್ಮಿಕರನ್ನು ವಿಶೇಷವಾಗಿ ಗುತ್ತಿಗೆ ವಲಯದ ಕಾರ್ಮಿಕರು ಇಎಸ್‌ಐ ಕಾಯ್ದೆಯಡಿ ದೊರೆಯುವ ಅಗತ್ಯ ಆರೋಗ್ಯ ರಕ್ಷಣೆ ಹಾಗೂ ಸಾಮಾಜಿಕ ಸೌಲಭ್ಯಗಳನ್ನು ಪಡೆಯುವುದನ್ನು ಉತ್ತೇಜಿಸುತ್ತದೆ. ಇದರೊಂದಿಗೆ ಇಎಸ್‌ಐಸಿಯು ಅಗತ್ಯ ಆರೋಗ್ಯ ರಕ್ಷಣೆ ಮತ್ತು ಸಾಮಾಜಿಕ ಭದ್ರತೆಯನ್ನು ತಲುಪಿಸುವ ತನ್ನ ಬದ್ಧತೆಯನ್ನು ಉಳಿಸಿಕೊಂಡು ಭಾರತದ ಕಾರ್ಮಿಕ ಕಲ್ಯಾಣ ಕೇಂದ್ರಿತ ದೃಷ್ಟಿಕೋನಕ್ಕೆ ಅನುಗುಣವಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ