Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮೇ 9ಕ್ಕೆ ಎಸ್ಸೆಸ್ಸೆಲ್ಸಿ ಫಲಿತಾಂಶ

ಬಹುನಿರೀಕ್ಷಿತ ಎಸ್ಸೆಸ್ಸೆಲ್ಸಿ 'ಪರೀಕ್ಷೆ 1 'ರ ಫಲಿತಾಂಶವನ್ನು ಮೇ 9 ರಂದು ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಸಿದ್ಧತೆ ಮಾಡಿಕೊಳ್ಳುತ್ತಿದೆ. ಎಸ್ಸೆಸ್ಸೆಲ್ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಬಹುತೇಕ ಪೂರ್ಣಗೊಂಡಿದ್ದು ವಿದ್ಯಾರ್ಥಿಗಳ ಅಂಕಗಳ ಗಣಕೀಕರಣ ಪ್ರಕ್ರಿಯೆ ನಡೆಯುತ್ತಿದ್ದು, ಹಾಗಾಗಿ ಮೇ 9ರ ಗುರುವಾರ ಫಲಿತಾಂಶ ಪ್ರಕಟಿಸಲು  ಮಂಡಳಿಯ ಉನ್ನತ ಅಧಿಕಾರಿಗಳು ತಿಳಿಸಿದ್ದಾರೆ.

ವಿದ್ಯಾರ್ಥಿಗಳ ಉತ್ತೀರ್ಣ ಪ್ರಮಾಣದಲ್ಲಿ ವರ್ಷದಿಂದ ವರ್ಷಕ್ಕೆ ದಾಖಲೆ ಬರೆಯುತ್ತಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಈ ಬಾರಿ ಕುಸಿತ ಕಾಣುವ ಸಾಧ್ಯತೆ ಹೆಚ್ಚು ಇದೆ.

ಏಕೆಂದರೆ, ಎಲ್ಲ ಪರೀಕ್ಷಾ ಕೇಂದ್ರಗಳು, ಕೊಠಡಿಗಳಲ್ಲಿ ಸಿಸಿ ಕ್ಯಾಮೆರಾಗಳ ಅಳವಡಿಸುವ ಜೊತೆಗೆ ವೆಬ್ ಕ್ಯಾಸ್ಟಿಂಗ್ ಕೂಡ ಮಾಡಿರುವುದರಿಂದ ರಾಜ್ಯದ ಎಲ್ಲೆಡೆ ಪರೀಕ್ಷೆ ಕಟ್ಟು ನಿಟ್ಟಾಗಿ ನಡೆದಿದೆ. 'ಕೈಚಳಕ ಮತ್ತು ಕಣ್ಚಳಕ'ಕ್ಕೆ ಅವಕಾಶ ಸಿಗದ ಕಾರಣ ಫಲಿತಾಂಶ ಕುಸಿತವಾದರು, ಆಶ್ಚರ್ಯವಿಲ್ಲ ಎಂದು ಮೂಲಗಳು ತಿಳಿಸಿವೆ.

ಹಿಂದಿನ ಎರಡು ವರ್ಷಗಳಲ್ಲಿ ಉತ್ತೀರ್ಣ ಪ್ರಮಾಣ ಕ್ರಮವಾಗಿ ಶೇ.85 ಮತ್ತು ಶೇ.83ರಷ್ಟು ದಾಖಲಾಗಿತ್ತು.

ಶೈಕ್ಷಣಿಕವಾಗಿ ಮುಂದಿರುವ ಕರಾವಳಿ ಜಿಲ್ಲೆಗಳು ಈ ಬಾರಿ ಫಲಿತಾಂಶದಲ್ಲಿ ಮುಂಚೂಣಿಯಲ್ಲಿ ಇರಲಿವೆ. ಕಲ್ಯಾಣ ಕರ್ನಾಟಕ ಜಿಲ್ಲೆಗಳ ಫಲಿತಾಂಶ ಎಂದಿನಂತೆ ಕಡಿಮೆ ಇರಲಿದೆ ಎಂದು ಹೇಳಲಾಗಿದೆ. ಮಾರ್ಚ್ ಕೊನೆಯ ವಾರದಲ್ಲಿ ನಡೆದ ಪರೀಕ್ಷೆಗೆ 8.9 ಲಕ್ಷ ವಿದ್ಯಾರ್ಥಿಗಳು ಹೆಸರು ನೋಂದಣಿ ಮಾಡಿಕೊಂಡಿದ್ದರು.

ಮೌಲ್ಯಮಾಪನ ಸುವ್ಯವಸ್ಥಿತವಾಗಿ ಮುಗಿದಿದೆ. ಫಲಿತಾಂಶ ಮೇ 9 ಕ್ಕೆ ಹೊರಬಿಳಲಿದೆ, ಉತ್ತೀರ್ಣ ಪ್ರಮಾಣ ಶೇ.60ರ ಆಸುಪಾಸು ಇದ್ದರೂ ಆಶ್ಚರ್ಯವಿಲ್ಲ.

ಕಳೆದ ತಿಂಗಳು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ದಾಖಲೆಯ ಶೇ.81ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ