Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರತಿಯೊಬ್ಬರಿಗೂ ಪರಿಸರದ ಅರಿವು ಅಗತ್ಯ

ಸಿರುಗುಪ್ಪ: ಪರಿಸರಕ್ಕೆ ಧಕ್ಕೆ ಮಾಡುವ ಮನುಷ್ಯನಿಗೆ ಇದು ಮಾನವ ಕುಲದ ಬೆಳವಣಿಗೆಗೆ ಧಕ್ಕೆ ಎಂಬ ಅರಿವು ಮೂಡಿಸಿದರೆ ಮಾತ್ರ ಬದಲಾವಣೆ ಸಾಧ್ಯಕಳೆದ 44 ವರ್ಷಗಳಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇದಕ್ಕಾಗಿ ಜನಜಾಗೃತಿ ಮೂಡಿಸುತ್ತಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಕೃಷಿ ಮೇಲ್ವಿಚಾರಕ ವೀರೇಶ್ ಹೇಳಿದರು.

ನಗರದ ಸರಕಾರಿ ಆದರ್ಶ ವಿದ್ಯಾಲಯದಲ್ಲಿ ಸೋಮವಾರದಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಬೀವೃದ್ಧಿ ಯೋಜನೆಯಿಂದ ಆಯೋಜಿಸಿದ್ದ ಗಿಡ ನಾಟಿ ಮತ್ತು ಪರಿಸರ ಮಾಹಿತಿ ಕಾರ್ಯಕ್ರಮದಲ್ಲಿ ಸಸಿ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ವಿದ್ಯಾರ್ಥಿಗಳಿಗೆ ಪರಿಸರದ ಕುರಿತು ಮತ್ತು ಧರ್ಮಸ್ಥಳ ಸಂಸ್ಥೆ ಇಡೀ ರಾಜ್ಯದಲ್ಲಿ ಕೆರೆಗಳ ಹೂಳೆತ್ತುವುದು, ಕೃಷಿ ಅಭಿವೃದ್ಧಿ ಪಡಿಸುವುದು, ಪರಿಸರ ಸಂರಕ್ಷಿಸುವುದು, ದೇವಸ್ಥಾನಗಳ ಜೀರ್ಣೋದ್ಧಾರ ಸೇರಿದಂತೆ ಅನೇಕ ಸಮಾಜಮುಖಿ ಕಾರ್ಯದಲ್ಲಿ ಮುಂದಿದೆ. ಸರ್ಕಾರದ ಜೊತೆಗೆ ಸಂಸ್ಥೆಯು ಒಂದು ಭಾಗವಾಗಿ ಜನಹಿತಕ್ಕೆ ಮುಂದಾಗಿದೆ ಗ್ರಾಮೀಣ ಪ್ರದೇಶದಲ್ಲಿ ಮಹಿಳೆಯರು ಕೃಷಿಕರನ್ನೊಳಗೊಂಡ ಇಂತಹ ಜಾಗೃತಿ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗುತ್ತಿದೆ. ಒಂದು ಊರಿನ ಸೊಗಸು ಆ ಊರಿನ ದೇವಸ್ಥಾನ, ಕೆರೆ, ಶಾಲೆ, ಆಸ್ಪತ್ರೆಗಳ ಸುವ್ಯವಸ್ಥೆಯನ್ನು ಅವಲಂಬಿಸಿದೆ. ಇದೆಲ್ಲದರಲ್ಲಿ ಸಾರ್ವಜನಿಕರ ಪಾತ್ರ ಬಹು ಮುಖ್ಯವಾದದು ಎಂದರು.
ಈ ಸಂದರ್ಭದಲ್ಲಿ ಶಾಲೆಯ ಪ್ರಭಾರ ಮುಖ್ಯೋಪಾಧ್ಯಾಯರಾದ ನಾರಾಯಣ ನಾಯ್ಕ್, ಎಸ್ ಡಿ ಎಮ್ ಸಿ ಅಧ್ಯಕ್ಷರಾದ ಮಂಜುನಾಥ, ಶಾಲೆಯ ಶಿಕ್ಷಕರಾದ ಉಮಾದೇವಿ, ಮಲವಿ ಆನಂದ, ಶಿಕ್ಷಕರು, ಶಾಲಾ ಮಕ್ಕಳು ಉಪಸ್ಥಿತರಿದ್ದರು.
Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು