Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ನಿಯಮಿತ, ವ್ಯಾಯಾಮ ಹಾಗೂ ಆರೋಗ್ಯಕರ ಜೀವನಶೈಲಿಯನ್ನು ಪ್ರತಿಯೊಬ್ಬರೂ ರೂಡಿಸಿಕೊಳ್ಳಿ* *ಪಿ. ರವಿಕುಮಾರ್*

ಜೀವನಶೈಲಿಯಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಪ್ರತಿಯೊಬ್ಬರ ಹೊಣೆಗಾರಿಕೆಯಾಗಿದೆ. ನಾವು ಸೇವಿಸುವ ಆಹಾರ ಪದ್ಧತಿ, ದೈಹಿಕ ಚಟುವಟಿಕೆ ಹಾಗೂ ದಿನನಿತ್ಯದ ಜೀವನಶೈಲಿ ನಮ್ಮ ಆರೋಗ್ಯವನ್ನು ನಿರ್ಧರಿಸುತ್ತವೆ. ಆದ್ದರಿಂದ ಪೌಷ್ಟಿಕ ಆಹಾರ ಸೇವನೆ, ನಿಯಮಿತ ವ್ಯಾಯಾಮ ಹಾಗೂ ಆರೋಗ್ಯಕರ ಜೀವನಶೈಲಿಯನ್ನು ಪ್ರತಿಯೊಬ್ಬರೂ ರೂಡಿಸಿಕೊಳ್ಳಬೇಕು ಎಂದು ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಪಿ. ರವಿ ಕುಮಾರ ರವರು ತಿಳಿಸಿದರು.
ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯತ್ ಹಾಗೂ ಆದಿಚುಂಚನಗಿರಿ ಆಸ್ಪತ್ರೆ, ಬಿ.ಜಿ.ನಗರ, ನಾಗಮಂಗಲ,
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಂಡ್ಯ, ಮ೦ಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಮಂಡ್ಯ ಹಾಗೂ ಕಿದ್ವಾಯಿ ಸಂಸ್ಥೆ, ಬೆಂಗಳೂರು, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಇವರುಗಳ ಸಹಯೋಗದೊಂದಿಗೆ ಕೆರೆಗೋಡು ಎಜುಕೇಶನ್ ಸೊಸೈಟಿ (ರಿ) ಕೆರೆಗೋಡು ಗ್ರಾಮಾಂತರ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ *ತಜ್ಞ ವೈದ್ಯಾಧಿಕಾರಿಗಳ ತಂಡದಿಂದ ಉಚಿತ ವಿಶೇಷ ಆರೋಗ್ಯ ತಪಾಸಣಾ ಶಿಬಿರ* ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸಾರ್ವಜನಿಕರ ಆರೋಗ್ಯಕ್ಕೆ ಸರ್ಕಾರ ವಿಶೇಷ ಆದ್ಯತೆ ನೀಡಿದ್ದು, ಜಿಲ್ಲೆಯಲ್ಲಿ ಪ್ರತಿ ಆರು ತಿಂಗಳಿಗೊಮ್ಮೆ ಉಚಿತ ಆರೋಗ್ಯ ಶಿಬಿರಗಳನ್ನು ಆಯೋಜಿಸಿ, ಎಲ್ಲ ಜನರಿಗೆ ಉಚಿತ ಆರೋಗ್ಯ ತಪಾಸಣೆ, ತಜ್ಞ ವೈದ್ಯರ ಸಲಹೆ, ಅಗತ್ಯ ಔಷಧೋಪಚಾರ ಹಾಗೂ ಆರೋಗ್ಯ ಜಾಗೃತಿ ಸೇವೆಗಳನ್ನು ಒದಗಿಸುವ ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಳ್ಳಲಾಗುತ್ತಿದೆ ಎಂದು ಹೇಳಿದರು. ಪ್ರಾರಂಭಿಕ ಹಂತದಲ್ಲೇ ರೋಗಗಳನ್ನು ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ನೀಡುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣವೇ ಪ್ರಮುಖ ಉದ್ದೇಶವಾಗಿದೆ ಎಂದು ಅವರು ತಿಳಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲೆಯ ನಾಲೆಗಳ ಅಭಿವೃದ್ಧಿಗಾಗಿ ಸುಮಾರು ₹300 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗಿದ್ದು, ರೈತರಿಗೆ ಸಮರ್ಪಕ ನೀರಾವರಿ ಸೌಲಭ್ಯ ಕಲ್ಪಿಸುವ ಮೂಲಕ ಕೃಷಿ ಉತ್ಪಾದಕತೆ ಹೆಚ್ಚಿಸುವ ಉದ್ದೇಶ ಹೊಂದಲಾಗಿದೆ ಎಂದು ತಿಳಿಸಿದರು. ಇದೇ ವೇಳೆ, ಐತಿಹಾಸಿಕ ಹಾಗೂ ಧಾರ್ಮಿಕ ಮಹತ್ವ ಹೊಂದಿರುವ ಕೆರೆಗೋಡು ಪಂಚಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿಗೆ ₹10 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದ್ದು, ಕ್ಷೇತ್ರವನ್ನು ಧಾರ್ಮಿಕ ಕೇಂದ್ರವಾಗಿ ಅಭಿವೃದ್ಧಿಪಡಿಸುವ ಯೋಜನೆ ರೂಪಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಮಾತನಾಡಿದ *ಜಿಲ್ಲಾಧಿಕಾರಿಗಳಾದ ಡಾ ಕುಮಾರ* ಅವರು ಗ್ರಾಮೀಣ ಪ್ರದೇಶದ ಜನರಿಗೆ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಉತ್ತಮವಾಗಿ ಕಾಪಾಡಿಕೊಳ್ಳಲ ವ್ಯಾಯಾಮ, ಸಮತೋಲಿತ ಆಹಾರ, ಸರಿಯಾದ ನಿದ್ರೆ ಮತ್ತು ಒತ್ತಡ ನಿರ್ವಹಣೆ ಅತ್ಯಂತ ಅವಶ್ಯಕವಾಗಿದೆ ಎಂದು ಅವರು ತಿಳಿಸಿದರು.
ಆರೋಗ್ಯ ತಪಾಸಣೆ ಕಾರ್ಯಕ್ರಮಗಳನ್ನು ಸಕಾಲದಲ್ಲಿ ಸದುಪಯೋಗಪಡಿಸಿಕೊಳ್ಳುವುದು ಅತ್ಯಂತ ಮುಖ್ಯ. ಇದು ರೋಗಗಳು ಬರುವುದನ್ನು ಮುಂಚಿತವಾಗಿ ತಡೆಯಲು, ಮಧುಮೇಹ, ಅಧಿಕ ರಕ್ತದೊತ್ತಡದಂತಹ ಸಮಸ್ಯೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆ ಹಚ್ಚಿ ಗುಣಪಡಿಸಲು ಹಾಗೂ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ನಮಗೆ ಸಹಾಯ ಮಾಡುತ್ತದೆ ಎಂದು ಅವರು ತಿಳಿಸಿದರು.
*ಮಂಡ್ಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಗಳಾದ ಕೆ. ಆರ್. ನಂದಿನಿ* ರವರು ಮಾತನಾಡಿ ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ವಿಶೇಷವಾಗಿ ಮಹಿಳೆಯರು ತಮ್ಮ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸದೆ, ಪ್ರತಿದಿನ ಕನಿಷ್ಠ 30 ನಿಮಿಷಗಳ ಕಾಲ ನಿಯಮಿತವಾಗಿ ವ್ಯಾಯಾಮ ಮಾಡುವ ಮೂಲಕ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಉತ್ತಮವಾಗಿ ಕಾಪಾಡಿಕೊಳ್ಳಬಹುದು ಎಂದು ತಿಳಿಸಿದರು.
ಸಮತೋಲಿತ ಆಹಾರ ಸೇವನೆ, ಯೋಗ, ವಾಕಿಂಗ್, ದೈಹಿಕ ಚಟುವಟಿಕೆ ಹಾಗೂ ನಿಯಮಿತ ಆರೋಗ್ಯ ತಪಾಸಣೆಗಳನ್ನು ಜೀವನದ ಭಾಗವಾಗಿಸಿಕೊಳ್ಳುವುದು ಅಗತ್ಯವಾಗಿದೆ. ಇದರಿಂದ ಮಧುಮೇಹ, ರಕ್ತದೊತ್ತಡ, ಹೃದಯ ಸಂಬಂಧಿ ಕಾಯಿಲೆಗಳು ಸೇರಿದಂತೆ ಹಲವು ಅಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಸಾಧ್ಯವಾಗುತ್ತದೆ.
ಆರೋಗ್ಯವೇ ನಿಜವಾದ ಸಂಪತ್ತು. ಆದ್ದರಿಂದ ಮಹಿಳೆಯರು ಕುಟುಂಬದ ಆರೋಗ್ಯದ ಜೊತೆಗೆ ತಮ್ಮ ಸ್ವಂತ ಆರೋಗ್ಯಕ್ಕೂ ಆದ್ಯತೆ ನೀಡಿ, ಪ್ರತಿದಿನ ವ್ಯಾಯಾಮ ಹಾಗೂ ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳುವ ಮೂಲಕ ಉತ್ತಮ ಆರೋಗ್ಯವನ್ನು ವೃದ್ಧಿಸಿಕೊಳ್ಳಬೇಕು ಎಂದು ತಿಳಿಸಿದರು.
ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನಮಠದ ಪೀಠಾಧ್ಯಕ್ಷರಾದ ಪರಮ ಪೂಜ್ಯ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿರವರು ದಿವ್ಯ ಸಾನಿಧ್ಯ ವಹಿಸಿ ಮಾತನಾಡಿ "ಉತ್ತಮ ಆರೋಗ್ಯವೇ ಉತ್ತಮ ಜೀವನದ ಅಡಿಪಾಯ. ಮನಸ್ಸು ಆರೋಗ್ಯಕರವಾಗಿದ್ದರೆ ದೇಹವೂ ಆರೋಗ್ಯಕರವಾಗಿರುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ತಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯದ ಬಗ್ಗೆ ಸಮಾನ ಕಾಳಜಿ ವಹಿಸಬೇಕು. ವಿಶೇಷವಾಗಿ ಹೃದಯ ಸಂಬಂಧಿತ ಕಾಯಿಲೆಗಳ ಲಕ್ಷಣಗಳು ಕಂಡುಬಂದ ತಕ್ಷಣವೇ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳುವುದು ಅತ್ಯಂತ ಅಗತ್ಯ. ಪ್ರಾರಂಭಿಕ ಹಂತದಲ್ಲಿಯೇ ರೋಗ ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ಪಡೆದರೆ ಗಂಭೀರ ಆರೋಗ್ಯ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಿ ಗುಣಪಡಿಸಬಹುದು ಎಂದರು
ಬೆಳ್ಳೂರು ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಹೃದಯ ಕಾಯಿಲೆ ಸೇರಿದಂತೆ ವಿವಿಧ ರೀತಿಯ ಕಾಯಿಲೆಗಳಿಗೆ ಆಧುನಿಕ ವೈದ್ಯಕೀಯ ಸೌಲಭ್ಯಗಳು ಹಾಗೂ ಪರಿಣಿತ ವೈದ್ಯರ ಸೇವೆ ಲಭ್ಯವಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಆರೋಗ್ಯ ಸಮಸ್ಯೆಯನ್ನು ನಿರ್ಲಕ್ಷಿಸದೆ ಸಮಯಕ್ಕೆ ಸರಿಯಾಗಿ ವೈದ್ಯರನ್ನು ಸಂಪರ್ಕಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ.
ಪ್ರತಿಯೊಬ್ಬರೂ ತಮ್ಮ ದೈನಂದಿನ ಜೀವನದಲ್ಲಿ ಶಿಸ್ತು ಪಾಲಿಸಿ, ಸಮತೋಲನಯುತ ಪೌಷ್ಟಿಕ ಆಹಾರ ಸೇವನೆ, ನಿಯಮಿತ ವ್ಯಾಯಾಮ, ಸಮರ್ಪಕ ನಿದ್ರೆ ಹಾಗೂ ಒತ್ತಡರಹಿತ ಜೀವನಶೈಲಿಯನ್ನು ಅಳವಡಿಸಿಕೊಂಡರೆ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ. ಆರೋಗ್ಯದ ಬಗ್ಗೆ ಜಾಗೃತಿ, ಮುನ್ನೆಚ್ಚರಿಕೆ ಮತ್ತು ಸಮಯೋಚಿತ ಚಿಕಿತ್ಸೆ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಅತ್ಯಗತ್ಯವಾಗಿದೆ ಎಂದು ತಿಳಿಸಿದರು.
ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಪುರುಷೋತ್ತಮಾನಂದನಾಥ ಸ್ವಾಮೀಜಿರವರು ಕಾರ್ಯಕ್ರಮದ ದಿವ್ಯ ಸಾನಿಧ್ಯವಹಿಸಿದ್ದರು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಬಿ.ಸಿ ಶಿವಾನಂದಮೂರ್ತಿ, ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕರಾದ ನರಸಿಂಹಮೂರ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ. ಬೆಟ್ಟಸ್ವಾಮಿ, ಮಂಡ್ಯ ಉಪವಿಭಾಗಾಧಿಕಾರಿಗಳಾದ ಶಿವಮೂರ್ತಿ ಎಂ. ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಭಾಧ್ಯಕ್ಷರಾದ ಮೀರಾ ಶಿವಲಿಂಗಯ್ಯ, ಕೆರೆಗೋಡು ಎಜುಕೇಶನ್ ಸೊಸೈಟಿಯ ಅಧ್ಯಕ್ಷರಾದ ವಸಂತರಾಜು. ಜಿ.,ಕೆರೆಗೋಡು ಎಜುಕೇಶನ್ ಸೊಸೈಟಿಯ ಕಾರ್ಯದರ್ಶಿಗಳಾದ ಜಿ. ರಾಮಲಿಂಗೇಗೌಡ ರವರು ಉಪಸ್ಥಿತರಿದ್ದರು

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ