Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಸ್ಥಳೀಯ ಸುದ್ದಿ

ಶಿಕ್ಷಣದಿಂದ ಮಾತ್ರ ಪ್ರತಿಯೊಬ್ಬರ ಪ್ರಗತಿ ಸಾಧ್ಯ ಕೊಪ್ಪಳ ಗವಿಮಠದ ಶ್ರೀಗಳು.

ಸಿರುಗುಪ್ಪ : ಪ್ರತಿಯೊಬ್ಬರು ಶಿಕ್ಷಣವನ್ನು ಪಡೆಯಬೇಕು, ಶಿಕ್ಷಣದಿಂದ ಮಾತ್ರ ಪ್ರತಿಯೊಬ್ಬರ ಪ್ರಗತಿ ಸಾಧ್ಯ, ಪ್ರತಿಯೊಬ್ಬರು ಶಿಕ್ಷಣ ಪಡೆದರೆ ದೇಶದ ಅಭಿವೃದ್ಧಿಯಾಗುತ್ತದೆ ಎಂದು ಕೊಪ್ಪಳ ಸಂಸ್ಥಾನ ಗವಿಸಿದ್ದೇಶ್ವರ ಮಠದ ಅಭಿನವ ಗವಿಸಿದ್ದೇಶ್ವರ ಶ್ರೀಗಳು ತಿಳಿಸಿದರು. ತಾಲೂಕಿನ ಇಬ್ರಾಹಿಂಪುರ ಗ್ರಾಮದಲ್ಲಿರುವ ಸುದೀಕ್ಷಾ ಇಂಟರ್ನ್ಯಾಷನಲ್ ಶಾಲೆ ಮತ್ತು ಪಿ ಯು ಕಾಲೇಜಿಗೆ ಆಗಮಿಸಿದ್ದ ಶ್ರೀಗಳು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಆಶೀರ್ವಚನ ನೀಡಿ ಬದುಕಿಗೆ ಇಂದು ಶಿಕ್ಷಣ ಅವಶ್ಯವಾಗಿದೆ, ಶಿಕ್ಷಣದಿಂದ ವ್ಯಕ್ತಿ ಅಭಿವೃದ್ಧಿಯಾಗಲು ಸಾಧ್ಯವಿದೆ, ಶಿಕ್ಷಣದಿಂದ ಬದುಕಿನಲ್ಲಿ ಏನನ್ನಾದರೂ ಸಾಧಿಸಬಹುದು ಎನ್ನುವ ಅನೇಕ ಉದಾಹರಣೆಗಳು ನಮ್ಮ ಕಣ್ಣ ಮುಂದೆ ಇದೆ, ಆದ್ದರಿಂದ ಪ್ರತಿಯೊಬ್ಬ ತಂದೆ ತಾಯಿಗಳು, ತಮ್ಮ ಮಕ್ಕಳಿಗೆ ಉತ್ತಮವಾದ ಶಿಕ್ಷಣವನ್ನು ಕೊಡಿಸಬೇಕು, ಜೊತೆಗೆ ಉತ್ತಮವಾದ ಸಂಸ್ಕಾರವನ್ನು ಕಲಿಸಿಕೊಡಬೇಕು, ಶಿಕ್ಷಣದ ಜೊತೆಗೆ ಸಂಸ್ಕಾರವಿದ್ದರೆ ಮಾತ್ರ ನಾವು ಕಲಿತ ವಿದ್ಯೆಗೆ ಅರ್ಥ ಬರುತ್ತದೆ, ಭೂಮಿಗೆ ಬಿದ್ದ ಬೀಜ, ಎದೆಗೆ ಬಿದ್ದ ಅಕ್ಷರ ಎಂದಿಗೂ ವ್ಯರ್ಥವಾಗುವುದಿಲ್ಲ ಅವು ಫಲ ಕೊಟ್ಟೆ ಕೊಡುತ್ತವೆ ಇದು ಪ್ರಕೃತಿಯ ನಿಯಮ ಎಂದು ಹೇಳಿದ ಶ್ರೀಗಳು ಬದುಕಿಗೆ ಇಂದು ಶಿಕ್ಷಣ ಅವಶ್ಯವಾಗಿದೆ, ಶಿಕ್ಷಣದಿಂದ ವ್ಯಕ್ತಿ ಅಭಿವೃದ್ಧಿಯಾಗಲು ಸಾಧ್ಯವಿದೆ, ಶಿಕ್ಷಣದಿಂದ ಬದುಕಿನಲ್ಲಿ ಏನನ್ನಾದರೂ ಸಾಧಿಸಬಹುದು ಎನ್ನುವ ಅನೇಕ ಉದಾಹರಣೆಗಳು ನಮ್ಮ ಕಣ್ಣ ಮುಂದೆ ಇದೆ, ಆದ್ದರಿಂದ ಪ್ರತಿಯೊಬ್ಬ ತಂದೆ ತಾಯಿಗಳು, ತಮ್ಮ ಮಕ್ಕಳಿಗೆ ಉತ್ತಮವಾದ ಶಿಕ್ಷಣವನ್ನು ಕೊಡಿಸಬೇಕು, ಜೊತೆಗೆ ಉತ್ತಮವಾದ ಸಂಸ್ಕಾರವನ್ನು ಕಲಿಸಿಕೊಡಬೇಕು, ಶಿಕ್ಷಣದ ಜೊತೆಗೆ ಸಂಸ್ಕಾರವಿದ್ದರೆ ಮಾತ್ರ ನಾವು ಕಲಿತ ವಿದ್ಯೆಗೆ ಅರ್ಥ ಬರುತ್ತದೆ, ಪ್ರತಿಯೊಬ್ಬರು ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಬೇಕು ಎಂದು ಹೇಳಿದ ಶ್ರೀಗಳು, ನಮ್ಮ ಸುತ್ತಮುತ್ತಲಿನ ಪ್ರದೇಶಗಳಲ್ಲಿರುವ ಶಾಲಾ, ಕಾಲೇಜುಗಳಲ್ಲಿ ಉತ್ತಮವಾದ ಶಿಕ್ಷಣವನ್ನು ಕೊಡಲು ಅನೇಕ ಶಿಕ್ಷಣ ಸಂಸ್ಥೆಗಳು ಹುಟ್ಟಿಕೊಂಡಿದ್ದು ಸಂತಸದ ವಿಷಯವಾಗಿದೆ.

20 - 30 ವರ್ಷಗಳ ಹಿಂದೆ ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳು ಉತ್ತಮವಾದ ಶಿಕ್ಷಣ ಪಡೆಯಲು ಬೆಂಗಳೂರು, ತುಮಕೂರು ಮೈಸೂರು ಸೇರಿದಂತೆ ವಿವಿಧ ಕಡೆಗೆ ತೆರಳುತ್ತಿದ್ದರು, ಆದರೆ ಈಗ ಈ ಭಾಗದಲ್ಲಿ ಉತ್ತಮ ಶಿಕ್ಷಣ ನೀಡುವ ಅನೇಕ ಶಿಕ್ಷಣ ಸಂಸ್ಥೆಗಳು ಹುಟ್ಟಿಕೊಂಡಿದ್ದು, ಈ ಭಾಗದ ಮಕ್ಕಳು ಇಲ್ಲಿಯೇ ಉನ್ನತ ಶಿಕ್ಷಣ ಪಡೆಯಲು ಸಾಧ್ಯವಾಗುತ್ತಿದೆ, ಇದರಿಂದ ಬಡ , ತಂದೆ ತಾಯಿಗಳಿಗೂ ಆರ್ಥಿಕ ಹೊರೆ ಕಡಿಮೆಯಾಗುತ್ತಿದೆ. ಎಂದು ಹೇಳಿದ ಅವರು ಶಿಕ್ಷಣವು ಎಂದಿಗೂ ಆರದ ಜ್ಯೋತಿಯಾಗಿದ್ದು, ಆ ಜ್ಯೋತಿ ಪ್ರತಿಯೊಬ್ಬರ ಎದೆಯಲ್ಲಿ ಪ್ರಜ್ವಲಿಸಲಿ ಎಂದು ಹಾರೈಸಿದ ಅವರು ಸುದೀಕ್ಷಾ ಇಂಟರ್ನ್ಯಾಷನಲ್ ಶಾಲೆ ಮತ್ತು ಪಿಯು ಕಾಲೇಜ್ ವಿದ್ಯಾರ್ಥಿಗಳ ಬದುಕಿಗೆ ಆಶಾ ಜ್ಯೋತಿಯಾಗಿ ಬೆಳಗಲಿ, ಶಿಕ್ಷಣದಿಂದ ಮಾತ್ರ ದೇಶ, ಸಂಸ್ಕೃತಿ, ಸಂಪ್ರದಾಯ ಉಳಿಯಲು ಸಾಧ್ಯ, ಆದ್ದರಿಂದ ಪ್ರತಿಯೊಬ್ಬ ತಂದೆ ತಾಯಿಗಳು ತಮ್ಮ ಮಕ್ಕಳಿಗೆ ಶಿಕ್ಷಣವನ್ನು ಕೊಡಿಸಬೇಕೆಂದು ಹೇಳಿದರು. ಸು ಅಂದರೆ ಸುಂದರವಾದ, ಧೀ ಅಂದರೆ ಬುದ್ದಿ, ಬೆಳಕು, ಕ್ಷ ಅಂದರೆ ಮನಸಿನಲ್ಲಿರುವ ದುರ್ಗುಣಗಳನ್ನು ತೊಲಗಿಸಿ, ಯಾರು ಯಾವ ಸ್ಥಳದಲ್ಲಿಯೇ ಮಕ್ಕಳಿಗೆ ಸದ್ಗುಣಗಳನ್ನು ಬೆಳೆಸುವ ಸ್ಥಳವೇ ಸುಧೀಕ್ಷ ಎಂದು ವಿವರಿಸಿದರು. ಅಂತಹ ಹೆಸರಿನ ಶಾಲೆ ನಿಮ್ಮ ಗ್ರಾಮೀಣ ಭಾಗದಲ್ಲಿ ನಿರ್ಮಾಣವಾಗಿದೆ. ಅದರಿಂದ ದೊರೆಯುವ ಉತ್ತಮ ಶಿಕ್ಷಣವನ್ನು ಪಡೆದುಕೊಂಡು ಮುಂದಿನ ಭವಿಷ್ಯ ರೂಪಿಸಿಕೊಳ್ಳುವಂತೆ ತಿಳಿಸಿದರು. ಗ್ರಾಮೀಣ ಭಾಗದ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡುವ ಉದ್ದೇಶದಿಂದ ಸುಸಜ್ಜಿತವಾದ ಕಟ್ಟಡ ನಿರ್ಮಾಣ ಮಾಡಿ ಜಿಲ್ಲಾ ಕೇಂದ್ರದ ಉತ್ತಮ ಸಂಸ್ಥೆಗಳಿಗೆ ಇಲ್ಲಿನ ಸುಧೀಕ್ಷ ಇಂಟರ್ ನ್ಯಾಷನಲ್ ಸ್ಕೂಲ್ ಸ್ಪರ್ಧಾತ್ಮಕ ಶಿಕ್ಷಣ ನೀಡುವ ಕೇಂದ್ರವಾಗಿದೆ ಎಂದರು. ಇದೆ ಸಂದರ್ಭದಲ್ಲಿ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರು ಶ್ರೀಗಳ ಪಾದಪೂಜೆ ನೆರವೇರಿಸಿದರು.

ಸುದೀಕ್ಷ ಇಂಟರ್ನ್ಯಾಷನಲ್ ಶಾಲೆ ಮತ್ತು ಪಿಯು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಪಿ. ರಾಮ್ ಬಾಬು, ವ್ಯವಸ್ಥಾಪಕಿ ಪಿ.ನಾಗಶಿವಾನಿಲಕ್ಷ್ಮಿ, ಪ್ರಾಂಶುಪಾಲರಾದ ಸ್ವಪ್ನ, ರಾಘವ ರಾವ್, ಮುಖಂಡರಾದ ಡಿ.ವೆಂಕಟ ಸ್ವಾಮಿ ನಾಯ್ಡು, ವಾಸು ನಾಯ್ಡು, ಉಮೇಶಗೌಡ ಮತ್ತು ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರುಇದ್ದರು. 29-ಸಿರುಗುಪ್ಪ-01 : ಸಿರುಗುಪ್ಪ ತಾಲೂಕಿನ ಇಬ್ರಾಹಿಂಪುರ ಗ್ರಾಮದಲ್ಲಿರುವ ಸುದೀಕ್ಷ ಇಂಟರ್ನ್ಯಾಷನಲ್ ಶಾಲೆ ಮತ್ತು ಪಿಯು ಕಾಲೇಜಿಗೆ ಕೊಪ್ಪಳ ಗವಿಸಿದ್ದೇಶ್ವರ ಮಠದ ಅಭಿನವ ಗವಿಸಿದ್ದೇಶ್ವರ ಶ್ರೀಗಳನ್ನು ಸ್ವಾಗತಿಸಿದರು. 29-ಸಿರುಗುಪ್ಪ-02 : ಸಿರುಗುಪ್ಪ ತಾಲೂಕಿನ ಇಬ್ರಾಹಿಂಪುರ ಗ್ರಾಮದಲ್ಲಿರುವ ಸುದೀಕ್ಷ ಇಂಟರ್ನ್ಯಾಷನಲ್ ಶಾಲೆ ಮತ್ತು ಪಿಯು ಕಾಲೇಜಿನಲ್ಲಿ ಕೊಪ್ಪಳ ಗವಿಸಿದ್ದೇಶ್ವರ ಮಠದ ಅಭಿನವ ಗವಿಸಿದ್ದೇಶ್ವರ ಶ್ರೀಗಳನ್ನು ಆಶಿರ್ವಚನೆ ನೀಡಿದರು. 29-ಸಿರುಗುಪ್ಪ-03 : ಸಿರುಗುಪ್ಪ ತಾಲೂಕಿನ ಇಬ್ರಾಹಿಂಪುರ ಗ್ರಾಮದಲ್ಲಿರುವ ಸುದೀಕ್ಷ ಇಂಟರ್ನ್ಯಾಷನಲ್ ಶಾಲೆ ಮತ್ತು ಪಿಯು ಕಾಲೇಜಿನಲ್ಲಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಪುಲ್ಲಿಪತ್ತಿ ರಾಮ್ ಬಾಬು, ವ್ಯವಸ್ಥಾಪಕಿ ಪಿ.ನಾಗಶಿವಾನಿಲಕ್ಷ್ಮಿ ಇವರು ಕೊಪ್ಪಳ ಗವಿಸಿದ್ದೇಶ್ವರ ಮಠದ ಅಭಿನವ ಗವಿಸಿದ್ದೇಶ್ವರ ಶ್ರೀಗಳ ಪಾದಪೂಜೆ ನೆರವೇರಿಸಿದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ