Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಸ್ಥಳೀಯ ಸುದ್ದಿ

ಬಳ್ಳಾರಿಯಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ





ಬಳ್ಳಾರಿ,ಜೂ.02

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆ, ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯ, ಭಾರತೀಯ ಕೃಷಿ ಅನುಸಂಧಾನ ಪರಿಷತ್ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನವು ಯಶಸ್ವಿಯಾಗಿ ನಡೆಯುತ್ತಿದೆ.

ಇದರ ಅಂಗವಾಗಿ ಭಾನುವಾರದಂದು ಐ.ಸಿ.ಆರ್ ಕೃಷಿ ವಿಜ್ಞಾನ ಕೇಂದ್ರ ಹಗರಿ ಮತ್ತು ಕೃಷಿ ಇಲಾಖೆ ವತಿಯಿಂದ ಸಂಡೂರು ತಾಲ್ಲೂಕಿನ ಗುಡೆಕೋಟೆ, ಚಂದ್ರಶೇಖರಪುರ, ರಾಮದುರ್ಗ, ಮುಟ್ಟಾಳಕುಂಟ, ತ್ಯಾಗದಲ್ ಹಾಗೂ ಎಸ್.ಓಬಳಾಪುರ ಗ್ರಾಮಗಳಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕುರಿತು ಗ್ರಾಮಗಳ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು.

ಕೃಷಿ ವಿಜ್ಞಾನ ಕೇಂದ್ರ ಹಗರಿಯ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥರಾದ ಡಾ. ಪಾಲಯ್ಯ.ಪಿ ಅವರು ಮಾತನಾಡಿ, ವಿಕಸಿತ ಕೃಷಿ ಸಂಕಲ್ಪ ಅಭಿಯಾನದಲ್ಲಿ ಅಧಿಕಾರಿಗಳ ತಂಡಗಳು ಹಳ್ಳಿಗಳಿಗೆ ಭೇಟಿ ನೀಡಿ, ಹವಾಮಾನ ಸ್ನೇಹಿ ಬೆಳೆ ಪ್ರಭೇದಗಳು, ರಸಗೊಬ್ಬರಗಳ ಸಮತೋಲಿತ ಬಳಕೆ, ಮಣ್ಣಿನ ಪೋಷಕಾಂಶಗಳ ಜ್ಞಾನ ಮತ್ತು ಸಂರಕ್ಷಣೆ, ಬೆಳೆ ರೋಗಗಳು ಮತ್ತು ಅವುಗಳ ಚಿಕಿತ್ಸೆ ಮತ್ತು ಕೃಷಿ ವೈವಿಧ್ಯೀಕರಣವನ್ನು ಉತ್ತೇಜಿಸುವ ತಂತ್ರಗಳ ಬಗ್ಗೆ ರೈತರಿಗೆ ವಿವರವಾದ ಮಾಹಿತಿಯನ್ನು ಒದಗಿಸುತ್ತಾರೆ ಎಂದು ಅವರು ಹೇಳಿದರು.

ಪ್ರಸ್ತುತ ಸವಾಲುಗಳನ್ನು ಗಮನದಲ್ಲಿಟ್ಟುಕೊಂಡು, ಸಾವಯವ ಕೃಷಿ, ಕೃಷಿಯಲ್ಲಿ ಡ್ರೋನ್‌ಗಳ ಬಳಕೆ, ಪಶುಸಂಗೋಪನೆ, ಹೈನುಗಾರಿಕೆ ಮತ್ತು ಮೀನುಗಾರಿಕೆಯಂತಹ ಪ್ರಮುಖ ವಿಷಯಗಳ ಬಗ್ಗೆ ರೈತರಿಗೆ ಶಿಕ್ಷಣ ನೀಡುವಲ್ಲಿ ಈ ಅಭಿಯಾನವು ವಿಶೇಷವಾಗಿ ಉಪಯುಕ್ತವಾಗಿದೆ ಎಂದು ತಿಳಿಸಿದರು.

ಮುಂಗಾರು ಬೆಳೆಗಳಿಗೆ ಅನುಸರಿಸಬೇಕಾದ ಕ್ರಮಗಳು, ಸೂಕ್ತ ತಳಿ ಬಿತ್ತನೆ ಬೀಜದ ಆಯ್ಕೆ, ಬೀಜೋಪಚಾರ, ಕೃಷಿಯಲ್ಲಿನ ವಿನೂತನ ತಾಂತ್ರಿಕತೆಗಳು ಮುಂತಾದವುಗಳ ಕುರಿತು ರೈತರಿಗೆ ಮಾಹಿತಿ ನೀಡಿದರು.

ಹಿರಿಯ ವಿಜ್ಞಾನಿ (ಮಣ್ಣು ವಿಜ್ಞಾನ) ಡಾ.ರವಿ.ಎಸ್ ಅವರು ಮಾತನಾಡಿ, ರೈತರಿಗೆ ಮಣ್ಣು, ನೀರಿನ ಪರೀಕ್ಷೆ ಮಾಡಿಸುವುದರಿಂದ ತಮ್ಮ ಜಮೀನಿನಲ್ಲಿನ ಪೋಷಕಾಂಶಗಳು ಎಷ್ಟು ಪ್ರಮಾಣದಲ್ಲಿ ಇದೆ ಮತ್ತು ಅದು ಬೆಳೆಗಳಿಗೆ ಯಾವ ಪ್ರಮಾಣದಲ್ಲಿ ದೊರೆಯುತ್ತದೆ ಹಾಗೂ ಮಣ್ಣಿನ ಫಲವತ್ತತೆಯನ್ನು ಯಾವ ರೀತಿಯಾಗಿ ಸಮತೋಲನವಾಗಿ ಕಾಪಾಡಿಕೊಳ್ಳಬಹುದು ಎಂದು ತಿಳಿಸಿದರು.

ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ ಹೆಸರಘಟ್ಟದ ಬೆಂಗಳೂರಿನ ವಿಜ್ಞಾನಿಗಳಾದ ಹತಿಕ್ ಉಲ್ಲಾ ಅವರು ತೋಟಗಾರಿಕೆ ಬೆಳೆಗಳ ಸಮಗ್ರ ರೋಗ ಹಾಗೂ ಕೀಟ ನಿಯಂತ್ರಣದ ಬಗ್ಗೆ ಮಾಹಿತಿ ನೀಡಿದರು.

ಡಾ.ನರೇಶ್ ಅವರು ತರಕಾರಿ ಬೆಳೆಗಳ ಉತ್ಪಾದನೆ, ನಿರ್ವಹಣೆ ಮತ್ತು ಸಂಸ್ಕರಣೆ ಹಾಗು ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯಿAದ ಬಿಡುಗಡೆಯಾದ ಹೊಸ ತಳಿಗಳ ಬಗ್ಗೆ ರೈತರಿಗೆ ತಿಳಿಸಿದರು.

ಡಾ.ಪ್ರಭುಲಿಂಗ ಅವರು ರೈತರಿಗೆ ಕೀಟ ನಿರ್ವಹಣೆಗಾಗಿ ಜೈವಿಕ ಕೀಟನಾಶಕಗಳು ಹಾಗು ಸಸ್ಯ ಜನ್ಯ ಪಿಡೇ ನಾಶಕಗಳ ಮಾಹಿತಿ ತಿಳಿಸಿದರು. ಬೇಸಾಯ ವಿಜ್ಞಾನಿಗಳಾದ ಡಾ.ಮಲ್ಲೇಶ್ ಅವರು ತೋಗರಿ ತಳಿಗಳು, ನೀರು ಹಾಗು ಮಣ್ಣಿನ ಸಂರಕ್ಷಣೆ ಬಗ್ಗೆ ಮಾಹಿತಿ ನೀಡಿದರು.

ಅಭಿಯಾನದಲ್ಲಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳಾದ ಡಾ.ರಾಜೇಶ್ವರಿ, ಡಾ.ಮಲ್ಲೇಶ್, ಡಾ.ಕಂದನ್ ಮತ್ತು ಡಾ.ನವೀನ್ ಕುಮಾರ್.ಪಿ ಮತ್ತು ವಿವಿಧ ಗ್ರಾಮಗಳಿಂದ ಹೆಚ್ಚಿನ ರೈತರಗಳು ಭಾಗವಹಿಸಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ