Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಸ್ಥಳೀಯ ಸುದ್ದಿ

ಮಾಧ್ಯಮ ಅಕಾಡೆಮಿಯಿಂದ ಫೆಲೋಷಿಪ್: ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ





ಬಳ್ಳಾರಿ,ಆ.03

ಕರ್ನಾಟಕ ಮಾಧ್ಯಮ ಅಕಾಡೆಮಿಯ ವತಿಯಿಂದ ಪತ್ರಕರ್ತರಿಗೆ ಆರು ವಿಷಯಗಳ ಕುರಿತ ಫೆಲೋಷಿಪ್ ಗೆ ಅರ್ಜಿ ಸಲ್ಲಿಸಲು ಅಂತಿಮ ದಿನಾಂಕವನ್ನು 2025ರ ಆಗಸ್ಟ್ 8 ರವರೆಗೆ ವಿಸ್ತರಿಸಲಾಗಿದೆ.

ಅಕಾಡೆಮಿಯ ಸಾಮಾನ್ಯ ಆಯವ್ಯಯದಡಿ ಎರಡು, ಮಹಿಳಾ ಆಯವ್ಯಯದಡಿ ಎರಡು ಹಾಗೂ ಪರಿಶಿಷ್ಟ ಜಾತಿ ಉಪಯೋಜನೆಯಡಿ ಒಂದು ಹಾಗೂ ಪರಿಶಿಷ್ಟ ಪಂಗಡ ಉಪ ಯೋಜನೆಯಡಿ ಒಂದು ಫೆಲೋಷಿಪ್ ನೀಡಲಾಗುವುದು. ಫೆಲೋಷಿಪ್ ಅವಧಿ 6 ತಿಂಗಳು.

ಕನಿಷ್ಟ ಐದು ವರ್ಷ ಸೇವಾನುಭವ ಹೊಂದಿರುವ, ಕನಿಷ್ಟ 30 ವರ್ಷದಿಂದ 50 ವರ್ಷ ವಯೋಮಿತಿಯ ಪತ್ರಕರ್ತರು ಫೆಲೋಷಿಪ್ ಗೆ ಅರ್ಜಿ ಸಲ್ಲಿಸಬಹುದು. ಪತ್ರಕರ್ತರು ಪದವೀಧರರಾಗಿರಬೇಕು ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಪತ್ರಿಕೆಗಳು ಹಾಗೂ ಉಪಗ್ರಹ ಸುದ್ದಿವಾಹಿನಿಗಳಲ್ಲಿ ಕಾರ್ಯನಿರ್ವಹಿಸುತ್ತಿರಬೇಕು. ಈ ಕುರಿತು ಸಂಪಾದಕರ ದೃಢೀಕರಣ ಪತ್ರ ಸಲ್ಲಿಸಬೇಕು.

ಫೆಲೋಷಿಪ್ ನ ವಿಷಯಗಳು:

ಬಾಲ್ಯವಿವಾಹ, ಪೋಕ್ಸೋ, ಮರ್ಯಾದೆಗೇಡು ಹತ್ಯೆ- ಮಾಧ್ಯಮ ದೃಷ್ಟಿಕೋನ. ಕೃಷಿ ಸಂವಹನ- ಒಂದು ಅಧ್ಯಯನ. ಕಲ್ಯಾಣ ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿಯಲ್ಲಿ ಮಾಧ್ಯಮಗಳ ಪಾತ್ರ. ಬುಡಕಟ್ಟು ಕಾಯ್ದೆಗಳು ಹಾಗೂ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನ- ಮಾಧ್ಯಮ ನೋಟ.

Role of Media in creating awareness on cybercrime and digital safety (ಇಂಗ್ಲಿಷ್ ನಲ್ಲಿ ಅಧ್ಯಯನ ವರದಿ ಸಲ್ಲಿಸುವುದು). ಮಾಧ್ಯಮ ಶಿಕ್ಷಣ ಮತ್ತು ವೃತ್ತಿ ನಡುವಿನ ಅಂತರ: ಕಾರಣಗಳು, ಪರಿಣಾಮ ಹಾಗೂ ಪರಿಹಾರ.

ಫೆಲೋಷಿಪ್ ಅವಧಿ ಆರು ತಿಂಗಳು. ಅರ್ಜಿ ಸ್ವೀಕರಿಸಲು 8ನೇ ಆಗಸ್ಟ್ 2025 ಕೊನೆಯ ದಿನವಾಗಿದ್ದು, ವಿಜೇತರ ಆಯ್ಕೆಯಲ್ಲಿ ಅಕಾಡೆಮಿಯ ಸಮಿತಿಯ ತೀರ್ಮಾನವೇ ಅಂತಿಮವಾಗಿರುತ್ತದೆ.

ಅರ್ಜಿ ನಮೂನೆಯನ್ನು ಅಕಾಡೆಮಿಯ ವೆಬ್ ಸೈಟ್ mediaacademy.karnataka.gov.in ನಿಂದ ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಿ ಪೂರಕ ದಾಖಲೆಗಳು ಹಾಗೂ ಅಧ್ಯಯನ ಕುರಿತ ಟಿಪ್ಪಣಿಯೊಂದಿಗೆ ಕಾರ್ಯದರ್ಶಿ, ಕರ್ನಾಟಕ ಮಾಧ್ಯಮ ಅಕಾಡೆಮಿ, ಪೋಡಿಯಂ ಬ್ಲಾಕ್, ವಿಶ್ವೇಶ್ವರಯ್ಯ ಗೋಪುರ, ಡಾ. ಬಿ.ಆರ್. ಅಂಬೇಡ್ಕರ್ ವೀದಿ, ಬೆಂಗಳೂರು 560001 ಇವರಿಗೆ ಕಳುಹಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ