Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಹಿಂದುಳಿದ ವರ್ಗಗಳ ಕಾನೂನು ಪದವೀಧರರ ತರಬೇತಿ: ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ


ಬಳ್ಳಾರಿ,ಜು.09



ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ಕಾನೂನು ಪದವೀಧರರ ತರಬೇತಿಗಾಗಿ ಅರ್ಹ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಂದ ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ಜು.25 ರ ವರರೆಗೆ ವಿಸ್ತರಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಜಲಾಲಪ್ಪ ಅವರು ತಿಳಿಸಿದ್ದಾರೆ.

*ನಿಬಂಧನೆಗಳು:*

ಅಭ್ಯರ್ಥಿಯು ಬಳ್ಳಾರಿ ಜಿಲ್ಲೆಯವರಾಗಿರಬೇಕು. ಅಭ್ಯರ್ಥಿಗಳು ಪ್ರವರ್ಗ-1, ಪ್ರವರ್ಗ-2(ಎ), ಪ್ರವರ್ಗ-3(ಎ) ಮತ್ತು ಪ್ರವರ್ಗ-3(ಬಿ)ಗೆ ಸೇರಿದವರಾಗಿರಬೇಕು. ಶೇಕಡವಾರು ಪ್ರವರ್ಗ-1 ರಲ್ಲಿ 2 ಅಭ್ಯರ್ಥಿಗಳನ್ನು ಅಯ್ಕೆ ಮಾಡಿ ಉಳಿದ ವರ್ಗಗಳಲ್ಲಿ ನಿಯಮಾನುಸಾರ 8 ಅಭ್ಯರ್ಥಿಗಳು ಒಟ್ಟು 10 ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಅಭ್ಯರ್ಥಿಯು ಬಾರ್ ಕೌನ್ಸಿಲ್‍ನಲ್ಲಿ ಹೆಸರನ್ನು ನೋಂದಾಯಿಸಿರಬೇಕು.

ತರಬೇತಿಗೆ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕಕ್ಕೆ ಹಿಂದೆ 2 ವರ್ಷಗಳೊಳಗಾಗಿ ಕಾನೂನು ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕಾನೂನು ತರಬೇತಿಯು 4 ವರ್ಷಗಳ ಅವಧಿಯಾಗಿದ್ದು, ಮಾಸಿಕ ರೂ.4,000 ಗಳ ತರಬೇತಿ ಭತ್ಯೆ ನೀಡಲಾಗುವುದು. 5 ಅಭ್ಯರ್ಥಿಗಳನ್ನು ಪ್ರವರ್ಗ-2(ಎ) ರಲ್ಲಿ ಅಯ್ಕೆ ಮಾಡಲಾಗುವುದು. ಹಿಂದುಳಿದ ವರ್ಗಗಳ ಪ್ರವರ್ಗ-2ಎ ಅಭ್ಯರ್ಥಿಗಳಿಗೆ 38 ವರ್ಷ ಗರಿಷ್ಠ ವಯೋಮಿತಿ (ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕಕ್ಕೆ) ಇರುತ್ತದೆ. ತರಬೇತಿಯ ಅವಧಿಯ ಮಧ್ಯಭಾಗದಲ್ಲಿ ಅಭ್ಯರ್ಥಿಯು ತರಬೇತಿಗೆ ಗೈರು ಹಾಜರಾದಲ್ಲಿ ಪಡೆಯಲಾಗಿರುವ ತರಬೇತಿ ಭತ್ಯೆಯ ಹಣವನ್ನು ಬಡ್ಡಿಯೊಂದಿಗೆ ಪಾವತಿಸಬೇಕಾಗುವುದು. ವಾರ್ಷಿಕ ಆದಾಯದ ಮಿತಿ ಪ್ರವರ್ಗ-2ಎ ಗೆ ರೂ.2.50 ಲಕ್ಷ ನಿಗದಿಪಡಿಸಲಾಗಿದೆ.

ಆಯ್ಕೆಯಾದ ಅಭ್ಯರ್ಥಿಗಳನ್ನು ಜಿಲ್ಲಾ ಸಮಿತಿಯು ಜಿಲ್ಲಾ ಪಬ್ಲಿಕ್ ಪ್ರಾಸಿಕ್ಯೂಟರ್, ಸರ್ಕಾರಿ ವಕೀಲರು ಅಥವಾ ಕನಿಷ್ಟ 15 ವರ್ಷಗಳ ವೃತ್ತಿಯಲ್ಲಿ ಅನುಭವ ಹೊಂದಿರುವ ವಕೀಲರ ಅಧೀನದಲ್ಲಿ ತರಬೇತಿ ಪಡೆಯುವುದು. ಅಭ್ಯರ್ಥಿಗಳನ್ನು ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯಿಂದ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಅಭ್ಯರ್ಥಿಗಳು ಅರ್ಜಿಯ ಜೊತೆಗೆ ಎಸ್.ಎಸ್.ಎಲ್.ಸಿ ಅಂಕಪಟ್ಟಿ ಅಥವಾ ಶಾಲಾ ವರ್ಗಾವಣೆ ಪ್ರಮಾಣ ಪತ್ರ ಮತ್ತು ಪದವಿ ಹಾಗೂ ಕಾನೂನು ಪದವಿಗಳಲ್ಲಿ ಪಡೆದ ಅಂಕಪಟ್ಟಿ ಪ್ರಮಾಣ ಪತ್ರದ ದೃಢೀಕರಣ ಪ್ರತಿಗಳನ್ನು ಲಗತ್ತಿಸಬೇಕು. ಅಪೂರ್ಣವಾದ ಹಾಗೂ ಕೊನೆಯ ದಿನಾಂಕದ ನಂತರ ಬಂದ ಅರ್ಜಿಯನ್ನು ಯಾವುದೇ ಮುನ್ಸೂಚನೆ ಇಲ್ಲದೇ ತಿರಸ್ಕರಿಸಲಾಗುವುದು.

ಹೆಚ್ಚಿನ ವಿವರಗಳಿಗಾಗಿ www.ballari.nic.in ವೆಬ್‍ಸೈಟ್ ಜಾಲತಾಣಕ್ಕೆ ಭೇಟಿ ನೀಡಿ ಅರ್ಜಿ ನಮೂನೆ ಪಡೆಯಬಹುದು.

ಹೆಚ್ಚಿನ ಮಾಹಿತಿಗಾಗಿ ನಗರದ ಜೋಳದರಾಶಿ ದೊಡ್ಡನಗೌಡ ರಂಗಮಂದಿರ ಹತ್ತಿರದ ಡಿ.ದೇವರಾಜ ಅರಸು ಭವನದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ ಅಥವಾ ದೂ.08392-275751 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ