Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮೆಟ್ರಿಕ್ ನಂತರ ವಿದ್ಯಾರ್ಥಿ ವೇತನ ಸೌಲಭ್ಯ ಅವಧಿ ವಿಸ್ತರಣೆ

ಶಿವಮೊಗ್ಗ, ಡಿಸೆಂಬರ್ 03: : ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಶುಲ್ಕ ಮರುಪಾವತಿ ಕಾರ್ಯಕ್ರಮ ಹಾಗೂ ಪ್ರವರ್ಗ-1ರ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಸೌಲಭ್ಯ ನೀಡಲು ಆನ್‌ಲೈನ್ ಮೂಲಕ ಕರೆಯಲಾಗಿದ್ದ ಅರ್ಜಿ ಅವಧಿಯನ್ನು ಡಿ.20 ರವರೆಗೆ ವಿಸ್ತರಿಸಲಾಗಿದೆ.
ಮೆಟ್ರಿಕ್ ನಂತರದ ಕೋರ್ಸುಗಳಾದ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ಹಾಗೂ ವೃತ್ತಪರ ಸ್ನಾತಕೋತ್ತರ ಪದವಿಗಳಿಗೆ ಹಾಗೂ ಪಿಯುಸಿ ಸಮಾನಾಂತರ(ಪಿಯು & ಸಮಾನಂತರ ಕೋರ್ಸ್ಗಳು) ಸಾಮಾನ್ಯ ಪದವಿ ಮತ್ತು ಸಂಯೋಜಿತ ಉಭಯ ಪದವಿ ಕೋರ್ಸ್ಗಳಲ್ಲಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಹಾಗೂ ಪ್ರವರ್ಗ-1ರ ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ ಸೌಲಭ್ಯಕ್ಕಾಗಿ https://ssp.postmartic.karnataka.gov.in ವೆಬ್‌ಸೈಟ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ನ.30 ವರೆಗೆ ನಿಗದಿಪಡಿಸಲಾಗಿತ್ತು. ಇದೀಗ ಈ ಅವಧಿಯನ್ನು ಡಿಸೆಂಬರ್ 20 ರವರೆಗೆ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿ ಹಾಗೂ ಕಾರ್ಯಕ್ರಮಗಳ ವಿವರ ಅರ್ಹತೆ ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ www.bcwd.karnataka.gov.in, ರಾಜ್ಯ ವಿದ್ಯಾರ್ಥಿವೇತನ ತಂತ್ರಾAಶದ ಸಹಾಯವಾಣಿ ಇಮೇಲ್ [email protected], ದೂ.ಸಂ.: 1902, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ದೂ.ಸಂ.: 08182-222129 ಅಥವಾ ಸಹಾಯವಾಣಿ 8050770005 ಗಳನ್ನು ಸಂಪರ್ಕಿಸಬಹುದೆಂದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.
---------------------

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ