Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಸ್ಥಳೀಯ ಸುದ್ದಿ

ರೈತರಿಗೆ ವರಧಾನ ವಾಗಬೆಕಾಗಿರೋ ಮಳೆಯೆ ಶಾಪವಾಯಿತೇ...? ಸಿಡಿಲು ಮಳೆಗೆ ಕೃಷಿ ಭೂಮಿಯಲ್ಲಿ ಸಾವನ್ನಪ್ಪಿದ ರೈತರು .

ಬಳ್ಳಾರಿ, ವಿಜಯಪುರ ಹಾಗೂ ಹಾವೇರಿಯ ತಲಾ ಇಬ್ಬರು, ರಾಯಚೂರು, ಕೊಪ್ಪಳ, ಚಿಕ್ಕಮಗಳೂರಿನ ತಲಾ ಒಬ್ಬರು ಮೃತಪಟ್ಟಿದ್ದಾರೆ. ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ರಾರವಿಯಲ್ಲಿ ಒಂದೇ ಕುಟುಂಬದ ಮೂವರು, ಹಾವೇರಿಯಲ್ಲಿ ಇಬ್ಬರು, ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ತಂಗಡಗಿ, ಚಿಕ್ಕಮಂಗಳೂರು ಜಿಲ್ಲೆಯ ಕಡೂರು ತಾಲೂಕಿನ ಗೆದ್ಲೆಹಳ್ಳಿ ಹಾಗು ಗದಗದಲ್ಲಿ ಒಬ್ಬೊಬ್ಬರು ಸಿಡಿಲು ಬಡಿದು ಸಾವನಪ್ಪಿದ್ದಾರೆ.

ಬಳ್ಳಾರಿಯಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ರಾರವಿ ಗ್ರಾಮದಲ್ಲಿ ಸಿಡಿಲು ಬಡಿದು ಮೂವರು ಸಾವನಪ್ಪಿದ್ದಾರೆ. ಸಿಡಿಲು ಬಡಿದು ಒಂದೇ ಕುಟುಂಬದ ಮೂವರು ಇದೀಗ ಸಾವನ್ನಪ್ಪಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ರಾರಾವಿ ಗ್ರಾಮದಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ.

ಮೃತರನ್ನು ಬೀರಪ್ಪ (45) ಸುನಿಲ್ (26) ಮತ್ತು ವಿನೋದ್ (16) ಎಂದು ತಿಳಿದು ಬಂದಿದೆ. ಕುರಿ ಮೇಯಿಸಲು ಹೋದಾಗ ಸಿಡಿಲು ಬಡಿದು ಒಂದೇ ಕುಟುಂಬದ ಮೂವರು ಇದೀಗ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಮಳೆ ಬಂದಾಗ ಮೂವರು ಮರದ ಕೆಳಗೆ ನಿಂತಿದ್ದಾರೆ. ಈ ವೇಳೆ ಭಾರಿ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ಘಟನೆ ಕುರಿತಂತೆ ಸಿರಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗದೆ.

ವಿಜಯಪುರ ಜಿಲ್ಲೆಯ  ಇನ್ನು ತಂಗಡಗಿ ಗ್ರಾಮದಲ್ಲಿ ಸಿಡಿಲು ಬಡಿದು ರೈತ ಸಾವನ್ನಪ್ಪಿದ್ದಾರೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ತಂಗಡಗಿ ಗ್ರಾಮದಲ್ಲಿ ಸಡಿಲು ಬಡಿದು ಮಲ್ಲಪ್ಪ ತಾಳಿಕೋಟೆ (47) ಸಾವನಪ್ಪಿದ್ದಾ ರೆ. ಜಮೀನಿನಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದು ಮಲ್ಲಪ್ಪ ಸಾವನಪ್ಪಿದ್ದಾರೆ. ಘಟನೆ ಕುರಿತಂತೆ ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯ  ಗೆದ್ಲೇಹಳ್ಳಿಯಲ್ಲಿ ಸಿಡಿಲು ಬಡಿದು ಕುರಿಗಾಹಿ ಸಾವನ್ನಪ್ಪಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಗೆದ್ದಲಹಳ್ಳಿ ಎಂಬಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಸಿಡಿಲು ಬಡಿದು ಕುರಿಗಾಹಿ ಲೊಕೇಶಪ್ಪ (65) ಸಾವನಪ್ಪಿದ್ದಾರೆ. ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಘಟನೆ ಕುರಿತಂತೆ ಪ್ರಕರಣ ದಾಖಲಾಗಿದೆ.

ಹಾವೇರಿ, ಗದಗದಲ್ಲೂ ಮೂವರು ಸಾವು ಹಾವೇರಿ ಮತ್ತು ಗದಗ ಜಿಲ್ಲೆಯಲ್ಲಿ ಕೂಡ ಸಿಡಿಲು ಬಡಿದು ಮೂವರು ಸಾವನಪ್ಪಿರುವ ಘಟನೆ ವರದಿಯಾಗಿದೆ. ಹೌದು ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲ್ಲೂಕಿನ ಡಮ್ಮಳ್ಳಿ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದ್ದು , ಹಿರೇಕೆರೂರು ತಾಲ್ಲೂಕಿನ ಡಮ್ಮಳ್ಳಿಯ ನಾಗಪ್ಪ ಬಸವಣೆಪ್ಪ ಕಣಸೋಗಿ (65), ರಟ್ಟೀಹಳ್ಳಿ ತಾಲ್ಲೂಕಿನ ಕುಡುಪಲಿ ಸುನೀಲ್ ಕಾಳೇರ (29) ಹಾಗೂ ಗದಗ ಜಿಲ್ಲೆಯ ಬಸಾಪುರದ ಮರಿಯವ್ವ ನಾಯ್ಕರ್ (60)  ಮೃತ ದುರ್ದೈವಿಗಳು ಎಂದು ತಿಳಿದುಬಂದಿದೆ. ಘಟನೆ ಕುರಿತಂತೆ  ಪ್ರಕರಣಗಳು ದಾಖಲಾಗಿವೆ

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ