Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಜುಲೈ 17 ರಿಂದ ಪ್ರಥಮ ಅಧಿವೇಶನ ಇಲಾಖಾ ಪರೀಕ್ಷೆ: ನಿಷೇದಾಜ್ಞೆ ಜಾರಿ

ಕೊಪ್ಪಳ ಜುಲೈ 16 2026ನೇ ಸಾಲಿನ ಪ್ರಥಮ ಅಧಿವೇಶನ ಇಲಾಖಾ ಪರೀಕ್ಷೆಗಳು ಜುಲೈ 17 ರಿಂದ 19 ವರೆಗೆ ಕೊಪ್ಪಳದಲ್ಲಿ ನಡೆಯಲಿದ್ದು, ಪರೀಕ್ಷೆಗಳು ಸುಗಮ ಹಾಗೂ ಶಾಂತಿಯುತವಾಗಿ ನಡೆಯುವ ಉದ್ದೇಶದಿಂದ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳಾದ ಡಾ. ಸುರೇಶ್ ಬಿ. ಇಟ್ನಾಳ ಅವರು ಆದೇಶ ಹೊರಡಿಸಿದ್ದಾರೆ.
ಪ್ರಥಮ ಅಧಿವೇಶನ ಇಲಾಖಾ ಪರೀಕ್ಷೆಗಳು ಜುಲೈ 17 ರಿಂದ ಜು. 19 ವರೆಗೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 12 ವರೆಗೆ ಮತ್ತು ಮದ್ಯಾಹ್ನ 2 ರಿಂದ ಸಂಜೆ 4 ಗಂಟೆಯವರೆಗೆ ನಡೆಯಲಿದ್ದು, ಪರೀಕ್ಷಾ ಕೇಂದ್ರದಲ್ಲಿ ಯಾವುದೇ ರೀತಿಯ ಅಕ್ರಮ, ಅವ್ಯವಹಾರ ನಡೆಯದಂತೆ ತಡೆಗಟ್ಟಲು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ 163ರ ಅನ್ವಯ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ಅಂತರದ ಪ್ರದೇಶದಲ್ಲಿ ವಿವಿಧ ಷರತ್ತಿಗೆ ಒಳಪಟ್ಟು ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ನಿಷೇಧಿತ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ., ಮೊಬೈಲ್ ಪೇಜರ್, ಝರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಲಾಗಿದೆ. ಪರೀಕ್ಷೆಯಲ್ಲಿ ಪ್ರವೇಶ ಪತ್ರ ಹೊಂದಿದ ಅಭ್ಯರ್ಥಿಗಳು ಹಾಗೂ ನಿಯೋಜಿತ ಶಿಕ್ಷಕರನ್ನು, ಜಾಗೃತ ದಳದವರನ್ನು ಹೊರತುಪಡಿಸಿ ಇನ್ನೂಳಿದವರಿಗೆ ಪರವಾನಿಗೆ ಇಲ್ಲದೇ ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಮಾಡುವುದನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತಲೂ ಜನರು ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವದನ್ನು ನಿಷೇಧಿಸಿದೆ. ಈ ಆದೇಶವು ಮದುವೆ, ಶವ ಸಂಸ್ಕಾರಗಳು ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯವಾಗುವದಿಲ್ಲ ಎಂದು ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ