Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಉಚಿತ ಸೆಲ್‍ ಪೋನ್‍ ರಿಪೇರಿ ತರಬೇತಿ ಶಿಬಿರ





*ಬೆಂಗಳೂರು ನಗರ ಜಿಲ್ಲೆ, ಜುಲೈ 25 ಕೆನರಾ ಬ್ಯಾಂಕ್‌ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ಆಗಸ್ಟ್ 05, 2025 ರಿಂದ 30 ದಿನಗಳ ಕಾಲ ನಿರಿದ್ಯೋಗಿ ಪುರುಷರಿಗೆ ಉಚಿತ ಸೆಲ್ ಪೋನ್ ರಿಪೇರಿ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ.



ಅಭ್ಯರ್ಥಿಯು 18 ರಿಂದ 45 ವರ್ಷ ವಯಸ್ಸಿನವರಾಗಿರಬೇಕು. ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ. ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್‌ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು. ಅಭ್ಯರ್ಥಿಗಳು ಸ್ಥಳೀಯ ಭಾಷೆ ಬಲ್ಲವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ನೀಡಲಾಗುವುದು.



ಆಸಕ್ತಿಯುಳ್ಳ ಅಭ್ಯರ್ಥಿಗಳು ಆಗಸ್ಟ್ 05, 2025 ರಂದು ಬೆಳಿಗ್ಗೆ 9.00 ಗಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ (ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಡೆಯುವ ನೇರ ಸಂದರ್ಶನಕ್ಕೆ ವಿದ್ಯಾರ್ಹತೆಗಳೊಂದಿಗೆ ಮತ್ತು ವಿಳಾಸ ದಾಖಲಾತಿಗಳೊಂದಿಗೆ ಹಾಜರಾಗಬೇಕಾಗಿದೆ.



ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 9505894247, 8970476050, 9591514754, 9686248369, 8970446644 ಗಳಿಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಕೆನರಾ ಬ್ಯಾಂಕ್‌ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ