Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಉಚಿತ ಫ್ಯಾಷನ್ ಡಿಸೈನಿಂಗ್ ಮತ್ತು ಉದ್ಯಮಶೀಲತಾ ತರಬೇತಿ: ಅರ್ಜಿ ಆಹ್ವಾನ

ಬಳ್ಳಾರಿ,ಜು.07
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಸರ್ಕಾರ ಹಾಗೂ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಪ್ರಾಯೋಜಕತ್ವದಲ್ಲಿ, ಬಳ್ಳಾರಿಯ ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್) ವತಿಯಿಂದ ಸ್ವಯಂ ಉದ್ಯೋಗ ಪ್ರಾರಂಭಿಸಲು ಆಸಕ್ತಿ ಹೊಂದಿರುವ ಪರಿಶಿಷ್ಟ ಪಂಗಡದ ಮಹಿಳಾ ಫಲಾನುಭವಿಗಳು ಹಾಗೂ ಯುವನಿಧಿ ಯೋಜನೆಯ ಫಲಾನುಭವಿಗಳಿಗಾಗಿ 24 ದಿನಗಳ ಉಚಿತ ‘ಫ್ಯಾಷನ್ ಡಿಸೈನಿಂಗ್’ ವಲಯಾಧಾರಿತ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಫ್ಯಾಷನ್ ಡಿಸೈನಿಂಗ್ ಕುರಿತು ಪ್ರಾಯೋಗಿಕ ಮತ್ತು ಸಿದ್ಧಾಂತ ತರಬೇತಿಯೊಂದಿಗೆ, ಉದ್ಯಮಶೀಲತೆಯ ಗುಣಲಕ್ಷಣಗಳು, ಸ್ವಯಂ ಉದ್ಯೋಗ ಆರಂಭಿಸುವ ಹಂತಗಳು, ಸರ್ಕಾರದ ಯೋಜನೆಗಳು, ಬ್ಯಾಂಕ್ ವ್ಯವಹಾರ, ಸಾಲ ಹಾಗೂ ಹಣಕಾಸು ಸೌಲಭ್ಯಗಳು, ಲೆಕ್ಕಪತ್ರ ನಿರ್ವಹಣೆ ಮತ್ತು ಯೋಜನಾ ವರದಿ ತಯಾರಿಕೆಯ ಬಗ್ಗೆ ಅನುಭವಿ ಉಪನ್ಯಾಸಕರಿಂದ ಮಾಹಿತಿ ನೀಡಲಾಗುವುದು.
ಸಾಲ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸುವಲ್ಲಿ ಅಭ್ಯರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ಮತ್ತು ಸಹಾಯವನ್ನು ಒದಗಿಸಲಾಗುವುದು.
*ಅರ್ಹತೆಗಳು:*
ವಯೋಮಿತಿಯು 18 ರಿಂದ 35 ವರ್ಷದೊಳಗಿನವರಾಗಿರಬೇಕು. ಕನಿಷ್ಠ ಎಸ್‌ಎಸ್‌ಎಲ್‌ಸಿ ತೇರ್ಗಡೆಯಾಗಿರಬೇಕು. ಪರಿಶಿಷ್ಟ ಪಂಗಡದ ಮಹಿಳೆಯರು ಹಾಗೂ ಯುವನಿಧಿ ಯೋಜನೆಯ ಆಸಕ್ತ ಫಲಾನುಭವಿಗಳು ಅರ್ಹರಾಗಿರುತ್ತಾರೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಜುಲೈ 15, 2026 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರು, ಸಿಡಾಕ್, ಜಿಲ್ಲಾ ಕೈಗಾರಿಕಾ ಕೇಂದ್ರದ ಕಟ್ಟಡ, ಹೊಸಪೇಟೆ ರಸ್ತೆ, ಬಳ್ಳಾರಿ - 583102. ಮೊ.9449226221/7483538942 ಗೆ ಸಂಪರ್ಕಿಸಬಹುದಾಗಿದೆ ಎಂದು ಸಿಡಾಕ್ ನ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ