Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿಶೇಷ ಅಗತ್ಯವುಳ್ಳ ಮಕ್ಕಳಿಗೆ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

ವಿಶೇಷ ಅಗತ್ಯವುಳ್ಳ ಮಕ್ಕಳಿಗೆ ಉಚಿತ ವೈದ್ಯಕೀಯ ತಪಾಸಣಾ ಶಿಬಿ
ಶಿವಮೊಗ್ಗ ನವೆಂಬರ್ 08() ಜಿಲ್ಲಾ ಸಮಗ್ರ ಶಿಕ್ಷಣ ಅಭಿಯಾನ ಯೋಜನೆ ಅಡಿ 2024-25 ನೇ ಸಾಲಿನಲ್ಲಿ ಶಿವಮೊಗ್ಗ ತಾಲ್ಲೂಕಿನ ವಿಶೇಷ ಅಗತ್ಯವುಳ್ಳ ಮಕ್ಕಳಿಗೆ ಉಚಿತ ವೈದ್ಯಕೀಯ ತಪಾಸಣಾ ಶಿಬಿರವನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಶಿವಮೊಗ್ಗ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಇವರ ಸಂಯುಕ್ತಾಶ್ರಯದಲ್ಲಿ ನ.14 ರಂದು ಬೆಳಗ್ಗೆ 9.30 ರಿಂದ ಸಂಜೆ 4.30 ರವರೆಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಮಿಳಘಟ್ಟ ಇಲ್ಲಿ ಹಮ್ಮಿಕೊಳ್ಳಲಾಗಿದೆ.
ಶಿಬಿರದಲ್ಲಿ ಪೂರ್ಣದೃಷ್ಟಿ ದೋಷ, ಶ್ರವಣ ದೋಷ, ಲೋಕೋಮೋಟರ್ (ದೈಹಿಕ ಅಂಗವಿಕಲತೆ), ಸೆರೆಬ್ರಲ್ ಪಾಲ್ಸಿ, ಬಹು ಅಂಗಾಂಗ ವಿಕಲತೆ, ದೈಹಿಕ ಅಂಗವಿಕಲತೆವುಳ್ಳ ಮಕ್ಕಳು ಭಾಗವಹಿಸಬಹುದು.
ಶಿಬಿರಕ್ಕೆ ಹಾಜರಾಗಲು ಅಂಗವಿಕಲ ಗುರುತಿನ ಚೀಟಿ, ಆದಾಯ ಪ್ರಮಾಣ ಪತ್ರ, ಮಗುವಿನ ಆಧಾರ್ ಕಾರ್ಡ್, ಬಿಪಿಎಲ್ ಕಾರ್ಡ್, ಮಗುವಿನ ಪಾಸ್‌ಪೋರ್ಟ್ ಸೈಜಿನ 4 ಭಾವಚಿತ್ರಗಳು ಮಗುವಿನ ಬ್ಯಾಂಕ್ ಪಾಸ್ ಪುಸ್ತಕ, ಮಗುವಿನ ಆಧಾರ್ ಕಾರ್ಡ್ನ್ನು ತರಬೇಕು .
ಈ ಶಿಬಿರದಲ್ಲಿ ಪೂರ್ವ ಪ್ರಾಥಮಿಕದಿಂದ 12 ನೇ ತರಗತಿಯವರೆಗೆ ವಿದ್ಯಾಭ್ಯಾಸ ಮಾಡುತ್ತಿರುವ ಸರ್ಕಾರಿ/ಅನುದಾನಿತ ಶಾಲೆಗಳ ವಿಕಲಚೇತನ ಮಕ್ಕಳು(ಈ ಹಿಂದೆ ಸಾಧನ ಸಲಕರಣೆ ಪಡೆದ ಮಕ್ಕಳನ್ನು ಹೊರತುಪಡಿಸಿ) ಇದರ ಸದುಪಯೋಗವನ್ನು ಪಡೆಯಬಹುದೆಂದು ಬಿಇಓ ರಮೇಶ್ ಮತ್ತು ಬಿಆರ್‌ಸಿ ಸಮನ್ವಯಾಧಿಕಾರಿ ಶಿವಪ್ಪ ಸಂಗಣ್ಣನವರು ತಿಳಿಸಿರುತ್ತಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ