Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

*ಗಂಗೂಬಾಯಿ ಹಾನಗಲ್ ಅವರ ಜನ್ಮ ಸ್ಥಳ ಗಂಗೋತ್ರಿಗೆ ಭೇಟಿ ನೀಡಿ, ಅಭಿವೃದ್ಧಿಯ ಬಗ್ಗೆ ಚರ್ಚಿಸಿದ ಜಿಲ್ಲಾಧಿಕಾರಿ ದಿವ್ಯ ಪ್ರಭು*





*ಧಾರವಾಡ ಆ.20:* ಗಾನವಿದೂಷಿ ಗಂಗೂಬಾಯಿ ಹಾನಗಲ್ ಅವರ ಜನ್ಮಸ್ಥಳವಾದ ನಗರದ ಹೊಸಯಲ್ಲಾಪೂರ ಓಣಿಯ ಗಂಗೋತ್ರಿಗೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಇಂದು (ಆ.20) ಭೇಟಿ ನೀಡಿ, ಗಂಗೂಬಾಯಿ ಹಾನಗಲ್ ಅವರ ಹುಟ್ಟಿದ ಮನೆ ಅಭಿವೃದ್ಧಿಪಡಿಸುವ ಕುರಿತು ಸ್ಥಳೀಯರು, ಜನಪ್ರತಿನಿಧಿಗಳು ಹಾಗೂ ಸಂಗೀತ ಕಲಾವಿದರೊಂದಿಗೆ ಸ್ಥಳದಲ್ಲಿ ಚರ್ಚಿಸಿದರು.



ಅವರು ಮಾತನಾಡಿ, ಧಾರವಾಡ ಜಿಲ್ಲೆಯ ಕೀರ್ತಿಯನ್ನು ರಾಷ್ಟ್ರೀಯ ಮಟ್ಟದಲ್ಲಿ ಮೆರೆಸಿದ ನಮ್ಮ ಜಿಲ್ಲೆಯ ಹೆಮ್ಮೆಯ ಪುತಿ,್ರ ಸಂಗೀತ ಸುಧೆ ಪದ್ಮವಿಭೂಷಣ ಪುರಸ್ಕøತ ದಿ. ಗಂಗೂಬಾಯಿ ಹಾನಗಲ್ ಅವರನ್ನು ಸ್ಮರಣೀಯಗೊಳಿಸಲು ಜಿಲ್ಲಾಡಳಿತದಿಂದ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.



ಸಂಗೀತ, ಸಾಹಿತ್ಯ, ಚಿತ್ರಕಲೆ ಮತ್ತು ವೃತ್ತಿ ರಂಗಭೂಮಿಯಲ್ಲಿ ಧಾರವಾಡದ ಪ್ರಸಿದ್ಧಿಯನ್ನು ಅನೇಕ ಕಲಾವಿದರು ದಾಖಲಿಸಿದ್ದಾರೆ. ಅವರ ಕೊಡುಗೆ ಮತ್ತು ಸಾಧನೆಯನ್ನು ನಾವು ಸ್ಮರಿಸುವುದು ಮತ್ತು ಅದನ್ನು ಮುಂದಿನ ಪೀಳಿಗೆಗೆ ಮುಂದುವರೆಸಲು ಅಗತ್ಯ ಸೌಲಭ್ಯ, ಅವಕಾಶಗಳನ್ನು ಮಾಡಿಕೊಡುವುದು ನಮ್ಮ ಕರ್ತವ್ಯವಾಗಿದೆ. ಈ ಹಿನ್ನಲೆಯಲ್ಲಿ ಸರ್ಕಾರ ಮತ್ತು ಇತರ ಉದ್ಯಮಗಳ ಆರ್ಥಿಕ ನೆರವಿನಲ್ಲಿ ಗಂಗೋತ್ರಿಯನ್ನು ಅಭಿವೃದ್ಧಿಪಡಿಸಿ, ಸಂಗೀತ ಕಾರ್ಯ ಚಟುವಟಿಕೆಗಳು ನಿರಂತರವಾಗಿ ನಡೆಯುವಂತೆ ಮಾಡಲು ಜಿಲ್ಲಾಡಳಿತದಿಂದ ಒಂದು ಮುನ್ನೋಟದ ರೂಪರೇಷಗಳನ್ನು ಸಿದ್ಧಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು.



ಈಗೀರುವ ಗಂಗೋತ್ರಿಯ ಜಾಗ ಚಿಕ್ಕದಾಗಿರುವದರಿಂದ ಅಕ್ಕಪಕ್ಕದ ಖಾಲಿ ಜಾಗೆಗಳನ್ನು ಪಡೆಯುವ ಕುರಿತು ಅವುಗಳ ಮಾಲೀಕರೊಂದಿಗೆ ಸಂಪರ್ಕಿಸಲಾಗುವುದು. ಒಪ್ಪಿದಲ್ಲಿ ಆ ಜಾಗೆಗಳನ್ನು ಸಹ ಉಪಯೋಗಿಸಿಕೊಂಡು ಉತ್ತಮವಾದ ಸಂಗೀತ-ಸಾಂಸ್ಕøತಿಕ ಭವನ ಹಾಗೂ ನಿರಂತರವಾಗಿ ಸಂಗೀತ ಪಾಠಶಾಲೆಗಳು ನಡೆಯುವಂತೆ ಮಾಡಲಾಗುವುದು. ಸ್ಥಳೀಯ ಕಲಾವಿದರ, ಸಂಗೀತಗಾರರ ಸಹಕಾರದಿಂದ ನಿರಂತರವಾಗಿ ಸಂಗೀತ ಸಭೆಗಳು ಜರಗುವಂತೆ ಯೋಜಿಸಲಾಗುವುದು. ಹಾಗೂ ಪದ್ಮವಿಭೂಷಣ ಗಂಗೂಬಾಯಿ ಹಾನಗಲ್ ಅವರ ಕಿರಾಣಾ ಘರನಾ ಸಂಗೀತವನ್ನು ಮುಂದುವರೆಸುವ ಆಸಕ್ತರಿಗೆ ಪ್ರೋತ್ಸಾಹಿಸಲಾಗುವುದು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದರು.



ಗಂಗೋತ್ರಿಯನ್ನು ಉಪಯುಕ್ತವಾಗಿ ಮಾಡಲು ಕಲಾವಿದರ, ಸಂಗೀತಗಾರರ ಹಾಗೂ ಸ್ಥಳೀಯರ, ಜನಪ್ರತಿನಿಧಿಗಳ ಸಲಹೆ ಹಾಗೂ ಮಾಹಿತಿಯನ್ನು ಪಡೆದುಕೊಳ್ಳಬೇಕು. ಗಂಗೋತ್ರಿಯನ್ನು ಸ್ಮಾರಕವಾಗಿಸಲು ಅಗತ್ಯ ನೀಲನಕ್ಷೆಯನ್ನು ಅಂದಾಜು ವೆಚ್ಚದ ಪಟ್ಟಿಯೊಂದಿಗೆ ಸರ್ಕಾರಕ್ಕೆ ಹಾಗೂ ಸಿಎಸ್‍ಆರ್ ನೆರವಿಗಾಗಿ ಸಲ್ಲಿಸಲು ಅಗತ್ಯ ಪ್ರಸ್ತಾವನೆಯನ್ನು ತಯಾರಿಸಿ, ಒಂದು ವಾರದಲ್ಲಿ ಜಿಲ್ಲಾಡಳತಕ್ಕೆ ಸಲ್ಲಿಸುವಂತೆ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಈ ಸಂದರ್ಭದಲ್ಲಿ ಅವರು ಸೂಚಿಸಿದರು.



ಇದು ಮುಂದಿನ ಪೀಳಿಗೆಗೆ ಸ್ಫೂರ್ತಿ ನೀಡುವ ಪವಿತ್ರ ತಾಣವಾಗಬೇಕು. ಆದ್ದರಿಂದ ಸರ್ಕಾರದ ಸಹಕಾರದೊಂದಿಗೆ ಈ ಮನೆಯನ್ನು ಪುನರ್‍ನಿರ್ಮಿಸಬೇಕು ಎಂದು ಸಾರ್ವಜನಿಕರು ಮನವಿ ಸಲ್ಲಿಸಿದರು.

ಜಿಲ್ಲಾಧಿಕಾರಿಗಳ ಭೇಟಿ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಸದಸ್ಯ ಶಂಕರ ಶಳಕೆ, ಹಿರಿಯ ನ್ಯಾಯವಾದಿ ಅರುಣ ಚರಂತಿಮಠ, ಕಲಾವಿದ ಪ್ರಸನ್ನ ಗುಡಿ, ಡಾ. ಶಶೀಧರ ನರೇಂದ್ರ, ರಾಘವೇಂದ್ರ ಗುಡಿ, ಸಂಗೀತ ಕಲಾವಿದೆ ಭಾರ್ಗವಿ ಗುಡಿ, ವೀರಣ್ಣ ಪತ್ತಾರ, ಉದಯ ಯಂಡಿಗೇರಿ, ಅಣ್ಣಪ್ಪ ಪಾಲನಕರ, ಸಮೀರ ಜೋಶಿ, ಸಂಜೀವ ಲಕ್ಕಮನಹಳ್ಳಿ ಸೇರಿದಂತೆ ಗಂಗೂಬಾಯಿ ಹಾನಗಲ್ ಅವರ ಅನುಯಾಯಿಗಳು, ಅಭಿಮಾನಿಗಳು, ಸಂಗೀತ ಸೇವಕರು, ಸಂಗೀತಾಸಕ್ತರು, ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ