Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಶಿಕ್ಷಣ ಸುದ್ದಿ

ಆರಗದಲ್ಲಿ ಗರುಡ ಪದ್ಧತಿಯ ಶಿರ ಛೇದನ ಸ್ಮಾರಕ ಶಿಲ್ಪ ಪತ್ತೆ


ಶಿವಮೊಗ್ಗ 

ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಂಪಿಯ ನಿರ್ದೇಶಕರಾದ(ಪುರಾತತ್ತ್ವ )(ಪ) ಡಾ.ಆರ್.ಶೇಜೇಶ್ವರ ಇವರು ಕ್ಷೇತ್ರ ಕಾರ್ಯ ಕೈಗೊಂಡಾಗ ತೀರ್ಥಹಳ್ಳಿ ತಾಲ್ಲೂಕಿನ ಆರಗದ ವೀರಭದ್ರ ದೇವಾಲಯದ ಆವರಣದಲ್ಲಿ ಸುಮಾರು ಎರಡು ಮೀಟರ್ ಉದ್ದದ ಗ್ರಾನೈಟ್ ಶಿಲೆಯ “ಗರುಡ ಪದ್ಧತಿಯ ಶಿರ ಛೇದನ ಸ್ಮಾರಕ ಶಿಲ್ಪ ಪತ್ತೆಯಾಗಿದೆ".

ಶಿರ ಛೇದನ ಸ್ಮಾರಕ ಶಿಲ್ಪವು ಎರಡು ಪಟ್ಟಿಕೆಗಳಿಂದ ಕೂಡಿದ್ದು ಕೆಳಗಿನ ಪಟ್ಟಿಕೆಯಲ್ಲಿ ವೇಳಾವಳಿ/ ಗರುಡ ಹೋಗುವ ವೀರ ಕುದುರೆಯ ಮೇಲೆ ಕುಳಿತು ಕತ್ತಿಯನ್ನು ಹಿಡಿದಿದ್ದಾನೆ, ಇವನಿಗೆ ಹಿಂಭಾಗದಲ್ಲಿ ಸೇವಕ ಛತ್ರಿಯನ್ನು ಹಿಡಿದಿದ್ದಾನೆ, ಆದ್ದರಿಂದ ಇವನನ್ನು ರಾಜ ಪ್ರಮುಖನೆಂದು ತಿಳಿಯಬಹುದಾಗಿದೆ. ಹಿಂಭಾಗದಲ್ಲಿ ಮಹಿಳೆಯು ಕತ್ತಿಯನ್ನು ಹಿಡಿದು ನಿಂತಿದ್ದಾಳೆ.

ಎರಡನೇ ಪಟ್ಟಕೆಯಲ್ಲಿ ಗರುಡ ಹೊಂದತಹ ವೀರನು ವೀರಾಸನದಲ್ಲಿ ನಿಂತಿದ್ದು ರುಂಡವನ್ನು ಕತ್ತರಿಸಲಾಗಿದ್ದು, ಬಲಗೈಯಲ್ಲಿ ಕತ್ತಿಯನ್ನು ಹಿಡಿದು ಮುಂಡದ ಮೇಲೆ ಹಲಗೆಯ ರೀತಿಯನ್ನು ಹೊತ್ತುಕೊಂಡಿದ್ದು ಇದನ್ನು ಕೈಯಲ್ಲಿ ಹಿಡಿದಿರುವಂತಿದೆ. ಈ ಶಿರ ಛೇದನ ಶಿಲ್ಪದ ಪಕ್ಕದಲ್ಲಿ ಮಹಿಳೆಯು ಶಿರ ಛೇದನವಾದ ರುಂಡವನ್ನು ಕೈಯಲ್ಲಿ ಹಿಡಿದು ನಿಂತಿದ್ದಾಳೆ.

ಮೂರನೇ ಪಟ್ಟಿಕೆಯಲ್ಲಿ ಪಟ್ಟಿಕೆಯ ಶಿಲ್ಪಗಳ ಬದಲು ಲಿಂಗದ ರೀತಿಯಲ್ಲಿ ಇರುವ ಕಂಬವಿದ್ದು ಇದರಲ್ಲಿ ಲಿಂಗದ ಉಬ್ಬು ಶಿಲ್ಪವಿದೆ. ಈ ಲಿಂಗದ/ಕoಬದ ಮೇಲೆ ಸಮತಟ್ಟಾಗಿದೆ.

ಗರುಡ ಪದ್ಧತಿಯ ಶಿರ ಛೇದನ ಸ್ಮಾರಕ ಶಿಲ್ಪದ ಮಹತ್ವ: ಆತ್ಮಬಲಿದಾನವು ಹಿಂದೂಗಳ ದೃಷ್ಟಿಯಲ್ಲಿ ಮಹತ್ವಪೂರ್ಣವಾಗಿದ್ದು, ಆತ್ಮ ಬಲಿದಾನ ಮಾಡಿಕೊಳ್ಳಲು ಶುಭ ತಿಥಿಗಳು ಒಳ್ಳೆಯವು ಎಂಬ ನಂಬಿಕೆಯಿದ್ದು, ವ್ಯಕ್ತಿಗಳು ತಮ್ಮ ಪ್ರಾಣವನ್ನು ತಾವೇ ತೆಗೆದುಕೊಳ್ಳುವಂತಹ ಅಥವಾ ಇನ್ನೊಬ್ಬರ ಸಹಾಯದಿಂದ ಮಾಡಿಕೊಳ್ಳುವಂತಹದ್ದು ಆತ್ಮ ಬಲಿದಾನ(ದೇಹತ್ಯಾಗ) ಎನ್ನಬಹುದಾಗಿದೆ.

ಆತ್ಮಬಲಿದಾನವು ಆತ್ಮಹತ್ಯೆಗಿಂತ ವಿಶೇಷವಾಗಿದ್ದು ಇದು ಸಮಾಜದ ಒಳತಿಗೋಸ್ಕರ ಆಗಿರುವಂತಹದ್ದು ಹಾಗೂ ಪೂರ್ವ ನಿಯೋಜಿತವಾಗಿರುವಂತಹದ್ದು.

ಈ ಆತ್ಮ ಬಲಿದಾನದಲ್ಲಿ ಹಲವು ಬಗೆಗಳಿವೆ. ಆತ್ಮಬಲಿದಾನವನ್ನು ಮಾಡಿಕೊಂಡ ವೀರರು ಯಾವುದೇ ಹೋರಾಟದಲ್ಲಿ ಹೋರಾಡಿ ಮಡಿದವರಾಗಿರುವುದಿಲ್ಲ. ಆದರೆ ಇವರು ಯಾವುದೇ ಹೋರಾಟದಲ್ಲಿ ಮಡಿದ ವೀರರಿಗಿಂತ ಕಡಿಮೆಯಿರುವುದಿಲ್ಲ.

ಆತ್ಮ ಬಲಿದಾನದಲ್ಲಿ ಚಿತಾಪ್ರವೇಶ, ಜಲಪ್ರವೇಶ, ಊರ್ಧ್ವಪತನದ ಬಗೆಗಳಿವೆ. ಚಿತಾ ಪ್ರವೇಶ ಎಂದರೆ ಬೆಂಕಿಗೆ ಹಾರಿ ಆತ್ಮಬಲಿದಾನ ಮಾಡಿಕೊಳ್ಳುವಂತಹದ್ದು, ಜಲಪ್ರವೇಶ ಎಂದರೆ ಗಂಗೆ, ವಾರಾಣಾಸಿ, ಪ್ರಯಾಗ, ತುಂಗಭದ್ರೆ ಮೊದಲಾದೆಡೆ ನೀರಿನಲ್ಲಿ ಮುಳುಗಿ ಆತ್ಮಬಲಿದಾನ ಮಾಡಿಕೊಳ್ಳುವಂತಹದ್ದು ಹಾಗೂ ಊರ್ಧ್ವ ಬಲಿದಾನವೆಂದರೆ ಬೆಟ್ಟ, ಮರ ಹಾಗೂ ದೇವಾಲಯಗಳ ಶಿಖರಗಳಿಂದ ಕೆಳಗೆ ಬಿದ್ದು ಅಥವಾ ಹಾರಿ ಆತ್ಮಬಲಿದಾನ ಮಾಡಿಕೊಳ್ಳುವಂತಹದ್ದು ಎನ್ನಬಹುದು.

ಈ ಆತ್ಮಬಲಿದಾನದಲ್ಲಿ ಸಹಗಮನ ಪದ್ಧತಿ, ನಿಸಿಧಿ ಶಾಸನ ಶಿಲ್ಪಗಳು, ಸೂರ್ಯಗ್ರಹಣ ಶಾಸನ ಶಿಲ್ಪಗಳು ಇದರಲ್ಲಿ ಉರಿ ಉಯ್ಯಲೆ ಶಿಲ್ಪಗಳು, ಶೂಲ ಬಲಿ, ಶಿರ ಛೇದನ(ಬಲಿ) ಶಿಲ್ಪ, ಸಿಡಿದಲೆ ಶಾಸನ ಶಿಲ್ಪಗಳು, ಇರಿತ ಬಲಿ, ಬೆಂಕಿಬಲಿ ಶಿಲ್ಪ, ಕಿಳ್ಗುಂಟೆ, ಗರುಡ ಪದ್ಧತಿ ಹಾಗೂ ವಿಶೇಷವಾಗಿ ಚಾಟಿ ವಿಟನಿಂದ ಆತ್ಮಬಲಿದಾನ ಮಾಡಿಕೊಂಡಿದ್ದು, ಇವನ ಜೊತೆಯಲ್ಲಿ ಇವನ ಹೆಂಡತಿಯು ಸಹಗಮನ ಮಾಡಿಕೊಂಡಿರುವ ಆತ್ಮಬಲಿದಾನದ ಸ್ಮಾರಕ ಶಿಲ್ಪಮೊದಲಾದ ಆತ್ಮ ಬಲಿದಾನದ ಸ್ಮಾರಕ ಶಾಸನ ಶಿಲ್ಪಗಳು ಕರ್ನಾಟಕಲ್ಲಿ ಕಂಡುಬರುತ್ತವೆ.

ಈ ಸ್ಮಾರಕ ಶಿಲ್ಪವು ಇದುವರೆಗೂ ದೊರೆತಿರುವ ಶಿರ ಛೇದನ ಶಿಲ್ಪಗಳಲ್ಲಿ ತುಂಬಾ ಅಪರೂಪದ್ದು, ಈ ಸ್ಮಾರಕ ಶಿಲ್ಪವನ್ನು ಗರುಡ ಸ್ತಂಭವೆ0ದು ಕರೆಯಬಹುದು. ಕರ್ನಾಟಕದಲ್ಲಿ ಇದುವರೆಗೂ ಗರುಡರಾಗಿರುವಂತಹ ಎರಡು ಸ್ತಂಭಗಳು ಹಳೇಬೀಡು ಮತ್ತು ಅಗ್ರಹಾರ ಬಾಚಿಹಳ್ಳಿಯಲ್ಲಿ ಮಾತ್ರ ಕಂಡುಬ0ದಿವೆ. ಇವು ಹೊಯ್ಸಳರ ಕಾಲದ್ದಾಗಿವೆ.

ಆರಗದಲ್ಲಿ ದೊರೆತಿರುವ ಈ ಶಿರ ಛೇದನ ಸ್ಮಾರಕ ಶಿಲ್ಪವು ಶಾಸನರಹಿತವಾಗಿದ್ದು, ಮೇಲ್ಬಾಗದಲ್ಲಿ ಲಿಂಗದ ಆಕೃತಿಯನ್ನು ಹೊಂದಿದ್ದರೂ ಹಳೇಬೀಡಿನಲ್ಲಿ ಕಂಡುಬರುವ ಸ್ತಂಭದ ರೀತಿಯಲ್ಲಿದೆ. ಕೆಳಭಾಗದಲ್ಲಿ ಚೌಕಾಕರಾವಾಗಿದ್ದು ಶಿಲ್ಪಗಳಿಂದ ಕೂಡಿದೆ.

ಲಿಂಗದ ರೀತಿಯ ಸ್ತಂಬದ ಮೇಲ್ಬಾಗದಲ್ಲಿ ಚಪ್ಪಟೆಯಾಗಿದೆ. ಆದ್ದರಿಂದ ಇದನ್ನು ಶಿವಲಿಂಗ ಎಂದು ಹೇಳುವುದು ಕಷ್ಟವಾಗಿದೆ. ಈ ಭಾಗವು ಹಳೆಬೀಡಿನ ಗರುಡಸ್ತಂಭದ ವೃತ್ತಾಕಾರದ ರೀತಿಯಲ್ಲಿದೆ. ಆರಗ ಶಿಲ್ಪದ ವೃತ್ತಾಕಾರದ ಸ್ತಂಭದ ಬುಡದಲ್ಲಿ ಯಾವುದೇ ಚಿಕಣಿ ಶಿಲ್ಪಗಳಿಲ್ಲ ಆದರೆ ಲಿಂಗದ ಉಬ್ಬು ಶಿಲ್ಪವನ್ನು ಕಂಡರಿಸಲಾಗಿದೆ.

ಕೆಳಭಾಗದ ಚೌಕಾಕಾರದ ಭಾಗದಲ್ಲಿ ಕೈಯಲ್ಲಿ ಹಿಡಿದಿರುವ ರುಂಡವನ್ನು ಮಹಿಳೆಯು ದೇವರಿಗೆ ಅರ್ಪಿಸಿ ಸತಿ ಹೊಗಿರಬಹುದು. ಗರುಡ ಹೋಗಿರುವಂತವರು ಶೈವರಾದಕಾರಾಗಿದ್ದು ರುಂಡವನ್ನು ಉಬ್ಬು ಶಿಲ್ಪದ ಲಿಂಗಕ್ಕೆ ಅರ್ಪಿಸಿದ್ದಾರೆ.

ಹೊಯ್ಸಳರ ಕಾಲದವರೆಗೆ ಇದ್ದಂತಹ ಗರುಡ ಪದ್ಧತಿ ವಿಜಯನಗರ ಅರಸರ ಕಾಲದಲ್ಲಿಯೂ ಮುಂದುವರೆಯಿತು ಎಂದು ಈ ಗರುಡ ಪದ್ಧತಿಯ ಶಿರ ಛೇದನ ಸ್ಮಾರಕ ಶಿಲ್ಪ ಪತ್ತೆಯಿಂದ ತಿಳಿಯಬಹುದಾಗಿದೆ. ಹಳೇಬೀಡು ಮತ್ತು ಆರಗದ ಸ್ಥಂಬಗಳನ್ನು ಗಮನಿಸಿದಾಗ ಒಟ್ಟಾರೆಯಾಗಿ ಗರುಡ ಪದ್ಧತಿಯಲ್ಲಿ ಇದೇ ರೀತಿಯ ಸ್ತಂಭಳನ್ನು ಸ್ಥಾಪಿಸಿತಿದ್ದಿರಬೇಕು ಎಂಬುದನ್ನು ಊಹಿಸಬಹುದಾಗಿದೆ.

ಈ ಗರುಡ ಪದ್ಧತಿಯ ಸ್ಮಾರಕ ಶಿಲ್ಪದ ಬಗ್ಗೆ ಮಾಹಿತಿಯನ್ನು ಒದಗಿಸಿದ ಡಾ.ದೇವರಾಜಸ್ವಾಮಿ, ಡಾ. ಜಗದೀಶ, ಟಿ.ಎಂ.ಕೇಶವ, ಡಾ.ಗಂಗಾ0ಬಿಕೆ ಗೋವರ್ಧನ, ರಮೇಶ ಹಿರೇಜಂಬೂರು, ಶಶಿಧರ ಹಾಗೂ ಮೋಹನ್ ಇವರುಗಳಿಗೆ ಪುರಾತತ್ತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಬಳ್ಳಾರಿ ನಿರ್ದೇಶಕರಾದ ಡಾ.ಆರ್.ಶೇಜೇಶ್ವರ ಧನ್ಯವಾದಗಳನ್ನು ತಿಳಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ