Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಮನೆ-ಮನೆಗೆ ತೆರಳಿ ಸಾರ್ವಜನಿಕರಲ್ಲಿ ಡೆಂಗ್ಯೂ ಜಾಗೃತಿ ಮೂಡಿಸಿದ ಜಿಪಂ ಸಿಇಓ ಸೊಳ್ಳೆ ಉತ್ಪತ್ತಿ ತಾಣಗಳನ್ನು ಮುಕ್ತಗೊಳಿಸಿ



ಬಳ್ಳಾರಿ,ಜೂ.28



ಮನೆ ಸುತ್ತ-ಮುತ್ತಲಿನ ಪರಿಸರದಲ್ಲಿ ನಮ್ಮ ಸಣ್ಣ ನಿರ್ಲಕ್ಷ್ಯವೂ ಡೆಂಗಿ ಜ್ವರದಿಂದ ನರಳುವಂತೆ ಮಾಡಬಹುದು. ಹಾಗಾಗಿ ಸೊಳ್ಳೆ ಉತ್ಪತ್ತಿ ತಾಣಗಳನ್ನು ಮುಕ್ತಗೊಳಿಸಿ ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು ಹೇಳಿದರು.

ಡೆಂಗ್ಯೂ ಜ್ವರ ನಿಯಂತ್ರಣಕ್ಕಾಗಿ ಲಾರ್ವಾ ಸೊಳ್ಳೆಗಳನ್ನು ಪತ್ತೆ ಹಚ್ಚಿ ನಾಶಗೊಳಿಸಲು ರಾಜ್ಯ ಸರ್ಕಾರ ನಿರ್ದೇಶನದಂತೆ ಈಡಿಸ್ ಸೊಳ್ಳೆ ನಿರ್ಮೂಲನ ದಿನದ ಅಂಗವಾಗಿ ನಗರದ ಇಂದಿರಾನಗರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಹಯೋಗದಲ್ಲಿ ಅರಿವು ಮೂಡಿಸಲು ಶುಕ್ರವಾರ ಏರ್ಪಡಿಸಿದ್ದ ಡೆಂಗ್ಯೂ ನಿಯಂತ್ರಣ ಜಾಥಾದಲ್ಲಿ ಅವರು ಮಾತನಾಡಿದರು.

ಮಹಾಮಾರಿ ಡೆಂಗ್ಯೂ ರೋಗವನ್ನು ನಿಯಂತ್ರಿಸಲು ಸಾರ್ವಜನಿಕರು ತಮ್ಮ ಮನೆಯ ಒಳಾಂಗಣ ಮತ್ತು ಹೊರಾಂಗಣ ಪ್ರದೇಶಗಳಲ್ಲಿ ನೀರು ಸಂಗ್ರಹಣೆಯಾಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಮೇಶ್‍ಬಾಬು ಅವರು ಮಾತನಾಡಿ, ಈಡೀಸ್ ಈಜಿಪ್ಟೈ ಸೊಳ್ಳೆ ಕಡಿತದಿಂದ ಡೆಂಗಿ ಜ್ವರ ಹರಡಲಿದ್ದು, ಸಾಮಾನ್ಯವಾಗಿ ಹಗಲು ಹೊತ್ತಿನಲ್ಲಿ ಅವು ಕಚ್ಚುತ್ತವೆ. ಜನ ಸಾಮಾನ್ಯರು 5-6 ದಿನಗಳಿಗೊಮ್ಮೆ ಶೇಖರಣೆ ಮಾಡಿಕೊಂಡ ನೀರಿನ ತೊಟ್ಟಿ, ಡ್ರಮ್, ಬ್ಯಾರೆಲ್ ಇತರೆ ನೀರಿನ ಸಂಗ್ರಹಾರಗಳನ್ನು ಸ್ವಚ್ಛಗೊಳಿಸಿಕೊಳ್ಳಬೇಕು ಎಂದು ತಿಳಿಸಿದರು.


ಜಿಲ್ಲೆಯಾದ್ಯಂತ ಡೆಂಗ್ಯೂ ಪ್ರಕರಣ ಕಡಿಮೆಯಿದ್ದು, ರೋಗ ಸಂಪೂರ್ಣ ನಿಯಂತ್ರಿಸಲು ಸಾರ್ವಜನಿಕರು ಇಲಾಖೆಯೊಡನೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಅಬ್ದುಲ್ಲಾ ಅವರು ಮಾತನಾಡಿ, ಪ್ರಸ್ತುತ ಮುಂಗಾರಿನಲ್ಲಿ ಸಾರ್ವಜನಿಕರು ಮನೆಯ ಸುತ್ತಮುತ್ತಲಿನ ಘನತ್ಯಾಜ್ಯ ವಸ್ತುಗಳಲ್ಲಿ ಸಂಗ್ರಹವಾಗುವ ಮಳೆ ನೀರಿನಲ್ಲಿ ಈಡೀಸ್ ಸೊಳ್ಳೆ ಉತ್ಪತ್ತಿಯಾಗದಂತೆ ತಡೆಗಟ್ಟುವಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಈಡೀಸ್ ಈಜಿಪ್ಟೈ ಸೊಳ್ಳೆ ಕಡಿತದಿಂದ ಹರಡುವ ಡೆಂಗೀ ಜ್ವರವು ವೈರಾಣುಗಳಿಂದ ಉಂಟಾಗುತ್ತದೆ. ಡೆಂಗ್ಯು ಜ್ವರದ ಲಕ್ಷಣಗಳಾದ ತೀವ್ರ ಜ್ವರ, ವಿಪರೀತ ತಲೆನೋವು, ಕಣ್ಣಿನ ಹಿಂಭಾಗದಲ್ಲಿ ನೋವು, ಮಾಂಸಖಂಡ ಮತ್ತು ಕೀಲುಗಳಲ್ಲಿ ವಿಪರೀತ ನೋವು, ವಾಕರಿಕೆ, ವಾಂತಿ, ರಕ್ತಸ್ರಾವ, ಒಸಡುಗಳಲ್ಲಿ ರಕ್ತಸ್ರಾವ ಲಕ್ಷಣಗಳು ಕಾಣಿಸಿಕೊಂಡಲ್ಲಿ ತಕ್ಷಣವೇ ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ರಕ್ತ ಪರೀಕ್ಷೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯಬೇಕು ಎಂದರು.


ಬಳಿಕ ಇಂದಿರಾ ನಗರದಲ್ಲಿ ಮನೆ-ಮನೆಗಳಿಗೆ ತೆರಳಿ ಸಾರ್ವಜನಿಕರಲ್ಲಿ ಲಾರ್ವಾ, ಈಜೀಸ್ ಈಜಿಪ್ಟೈ ಸೊಳ್ಳೆಗಳಿಂದ ಹರಡುವ ಡೆಂಗ್ಯೂ ಕುರಿತು ಜಾಗೃತಿ ಮೂಡಿಸಲಾಯಿತು. ಇದೇ ವೇಳೆ ‘ಡೆಂಗಿ ನಿಲ್ಲಿಸಿ’ ಎನ್ನುವ ಜಾಗೃತಿ ಭಿತ್ತಿಚಿತ್ರ ಪ್ರದರ್ಶಿಸಿದರು.

ಈ ವೇಳೆ ಜಿಲ್ಲಾ ಕೀಟ ಶಾಸ್ತ್ರಜ್ಞೆ ನಂದಾ ಕಡಿ, ವೈದ್ಯಾಧಿಕಾರಿ ಡಾ.ನರಸಿಂಹ ಮೂರ್ತಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ್ ಹೆಚ್.ದಾಸಪ್ಪನವರ ಸೇರಿದಂತೆ ಆರೋಗ್ಯ ಇಲಾಖೆಯ ಸಿಬ್ಬಂದಿಯವರು, ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸಿಬ್ಬಂದಿಯವರು ಹಾಗೂ ಆಶಾ ಕಾರ್ಯಕರ್ತೆಯರು ಮತ್ತು ನರ್ಸಿಂಗ್ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ