Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

7ನೇ ವೇತನ ಆಯೋಗ ಸೇರಿ ಹಲವು ಬಜೆಟ್ ಆದೇಶಗಳಿಗೆ ಸರ್ಕಾರದ ಸಿದ್ಧತೆ

 ಚುನಾವಣಾ ನೀತಿ ಸಂಹಿತೆ ಜಾರಿಯಾಗುವ ಒಂದು ದಿನ ಮೊದಲು ವರದಿ ಸರ್ಕಾರ ಕೈ ಸೇರಿದೆ. ಹೀಗಾಗಿ ಮಾದರಿ ನೀತಿ ಸಂಹಿತೆ ಸಡಿಲಗೊಂಡ ಕೂಡಲೇ 2024-25ನೇ ಸಾಲಿನ ಬಜೆಟ್ ಘೋಷಣೆಗಳಿಗೆ ಜಾರಿಯಾಗುವಂತೆ ಸರ್ಕಾರಿ ಆದೇಶಗಳ ಸುರಿಮಳೆಗೆ ಸಿದ್ದರಾಮಯ್ಯ ಆಡಳಿತ ಸಿದ್ಧತೆ ನಡೆಸಿದೆ.

ಈ ಹಿಂದೆಯೇ ಲೋಕಸಭಾ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲೇಖಿಸಿ ಸರ್ಕಾರ ನೌಕರರನ್ನು ಕಟ್ಟಿ ಹಾಕಿದೆ. ಆದರೆ, ನೀತಿ ಸಂಹಿತೆ ಸಡಿಲಗೊಳ್ಳುತ್ತಿದ್ದಂತೆ ಸರ್ಕಾರಿ ನೌಕರರು ಒತ್ತಡ ಹಾಕಲಿದ್ದಾರೆ. ಹೀಗಾಗಿಯೇ ಸರ್ಕಾರ ಕೂಡ ಸಕಲ ಸಿದ್ಧತೆ ನಡೆಸಿದೆ. ಕೆಲವೇ ದಿನಗಳಲ್ಲಿ ಅದೂ ಕೂಡ ನಡೆಯಲಿದೆ.
ಲೋಕಸಭೆಯ ನೀತಿ ಸಂಹಿತೆ ಮಾರ್ಚ್ 16 ರಿಂದ ಪ್ರಾರಂಭವಾಗಿದೆ. ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ ಚುನಾವಣೆಗೆ ಜೂನ್ 3 ರವರೆಗೆ ನೀತಿ ಸಂಹಿತೆ ಜಾರಿಯಲ್ಲಿದೆ. ರಾಜ್ಯ ವಿಧಾನ ಪರಿಷತ್ ಚುನಾವಣಾ ಫಲಿತಾಂಶಗಳು ಜೂನ್ 6 ರಂದು ಹೊರಬೀಳುತ್ತವೆ.

ಜೂನ್ 15 ಕ್ಕೆ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ! "ಸರ್ಕಾರದ ಎಲ್ಲಾ ಆದೇಶಗಳನ್ನು ಸಿದ್ಧಪಡಿಸುವಂತೆ ನಾವು ತಿಳಿಸಿದ್ದೇವೆ. ಜೂನ್ 15 ರ ಮೊದಲು ಎಲ್ಲಾ ಆದೇಶಗಳನ್ನು ಹೊರಡಿಸಲು ಪ್ರಯತ್ನಿಸುತ್ತಿದ್ದೇವೆ" ಎಂದು ಹೇಳಿದ್ದಾರೆ ಎಂದು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಹಣಕಾಸು) ಎಲ್‌ಕೆ ಅತೀಕ್ ಅವರನ್ನು ಡೆಕ್ಕನ್ ಹೆರಾಲ್ಡ್ ಉಲ್ಲೇಖಿಸಿದೆ. ಎಲ್‌ಕೆ ಅತೀಕ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯೂ ಹೌದು.
ಸಿದ್ದರಾಮಯ್ಯ ಅವರು 2024-25ರ ಬಜೆಟ್‌ನಲ್ಲಿ ನೀಡಿದ ಭರವಸೆಗಳನ್ನು ಜಾರಿಗೆ ತರಲು 337 ಸರ್ಕಾರಿ ಆದೇಶಗಳು ಬೇಕಾಗುತ್ತವೆ ಎಂದು ಅಂದಾಜಿಸಲಾಗಿದೆ. "ನಮ್ಮ ವಿನಂತಿಯ ಆಧಾರದ ಮೇಲೆ ಚುನಾವಣಾ ಆಯೋಗವು ಮಾದರಿ ನೀತಿ ಸಂಹಿತೆಯ ಸಡಿಲಿಕೆಯನ್ನು ಮಾಡುತ್ತದೆ. ಇದು ಕೇಸ್ ಟು ಕೇಸ್ ಆಧಾರದ ಮೇಲೆ ಇರುತ್ತದೆ" ಎಂದು ಎಲ್‌ಕೆ ಅತೀಕ್ ಹೇಳಿದ್ದಾರೆ.

"ಮುಖ್ಯಮಂತ್ರಿ ಸಿದ್ದರಾಮಯ್ಯ ಅಥವಾ ಯಾರೇ ಸಚಿವರಾದರೂ ಅಧಿಕೃತ ಸಭೆಗಳ ಅಧ್ಯಕ್ಷತೆ ವಹಿಸಲು ಚುನಾವಣಾ ಸಮಿತಿಯ ಒಪ್ಪಿಗೆ ಅಗತ್ಯ. ಯಾವುದೇ ಹೊಸ ಘೋಷಣೆ, ಹೊಸ ಆದೇಶಗಳನ್ನು ನೀಡುವುದು, ಹೊಸ ಟೆಂಡರ್‌ಗಳನ್ನು ಕರೆಯುವುದು, ಹೊಸ ಗುತ್ತಿಗೆಗಳನ್ನು ನೀಡುವುದು, ಹೊಸ ಕೆಲಸದ ಆದೇಶಗಳನ್ನು ವಹಿಸಿಕೊಡುವುದು ಮತ್ತು ಹೊಸ ಯೋಜನೆಗಳನ್ನು ಮಂಜೂರು ಮಾಡುವುದು ಮಾದರಿ ನೀತಿ ಸಂಹಿತೆಯ ಕಾರಣದಿಂದಾಗಿ ತಡೆಯಾಗುತ್ತವೆ" ಎಂದು ಹೇಳಿದ್ದಾರೆ. ಇನ್ನು, ರಾಜ್ಯದಲ್ಲಿ ಲೋಕಸಭಾ ಚುನಾವಣೆ ಮುಗಿದಿರುವ ಕಾರಣ ಇಷ್ಟು ದಿನ ಚುನಾವಣಾ ಕರ್ತವ್ಯದಲ್ಲಿದ್ದ ಅನೇಕ ಸರ್ಕಾರಿ ನೌಕರರು ತಮ್ಮ ಕೆಲಸಕ್ಕೆ ಹಿಂತಿರುಗುತ್ತಾರೆ. ಇದು ಆಡಳಿತ ಯಂತ್ರವನ್ನು ಮತ್ತೆ ಟ್ರಾಕ್‌ಗೆ ತರಲು ಸಹಾಯ ಮಾಡುತ್ತದೆ. ಇದಾದ ನಂತರ ಸರ್ಕಾರ ಹಲವು ಆದೇಶಗಳನ್ನು ಜಾರಿಗೆ ತರಲಿದೆ. ಆದರೆ, ರಾಜ್ಯ ಕ ಕೇಡರ್‌ನ ಸುಮಾರು 50-60 ಐಎಎಸ್ ಅಧಿಕಾರಿಗಳನ್ನು ಭಾರತದಾದ್ಯಂತ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಸರ್ಕಾರಿ ನೌಕರರು ತಮ್ಮ ತಮ್ಮೆ ಕೆಲಸಗಳಿಗೆ ಹಿಂತಿರುಗಿನ ನಂತರ, ಮಾದರಿ ನೀತಿ ಸಂಹಿತೆ ಸಡಿಲವಾದ ಬಳಿಕ ಎಲ್ಲಾ ಆದೇಶಗಳು ಜಾರಿಯಾಗುವ ಸಂಭವವಿದೆ. ಸರ್ಕಾರ ಕೂಡ ಈ ನಿಟ್ಟಿನಲ್ಲಿ ಸಿದ್ಧತೆ ನಡೆಸಿದೆ.
Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು