Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮುಖ್ಯ ಶಿಕ್ಷಕ ಯು. ಶ್ರೀನಿವಾಸ್ ರವರ ವಯೋನಿವೃತ್ತಿ ಬೀಳ್ಕೊಡುಗೆ ಸಮಾರಂಭ




ಕಂಪ್ಲಿ ಸಮೀಪದ ಎಂ ಸೂಗೂರು ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಮುಖ್ಯಗುರುಗಳಾದ ಯು. ಶ್ರೀನಿವಾಸ್ ಅವರ ವಯೋನಿವೃತ್ತಿ ಹಿನ್ನೆಲೆ ಬೀಳ್ಕೊಡುಗೆ ಸಮಾರಂಭ ಸೋಮವಾರ ಅದ್ಧೂರಿಯಾಗಿ ಜರಗಿತು.


ಈ ಸಂದರ್ಭದಲ್ಲಿ ನಿವೃತ್ತ ಪ್ರಾಚಾರ್ಯ ಮಹಾಬಲೇಶಪ್ಪ ಮಾತನಾಡಿ ಶ್ರೀನಿವಾಸ್ ಅವರು ಬಹಳ ಸರಳ ಸಜ್ಜನಿಕೆ ವ್ಯಕ್ತಿ, ಪರಿಣಾಮಕಾರಿಯಾದ ಪಾಠ ಬೋಧನೆ ಮೂಲಕ ಎಲ್ಲಾ ವಿದ್ಯಾರ್ಥಿಗಳ ಮನಸ್ಸು ಗೆದ್ದ ಉತ್ತಮ ಶಿಕ್ಷಕ ಎಂದರು.


ಈ ಸಂದರ್ಭದಲ್ಲಿ ಶಿಕ್ಷಕರಾದ ಎಸ್. ರಾಮಪ್ಪ ಮಾತಾಡಿ ಶ್ರೀಯುತ ಶ್ರೀನಿವಾಸ ಸಾರ್ ರವರು ಬೀದರ್ ನ ಹುಮ್ನಾಬಾದಿನ ಹಳ್ಳಿಕೇಡು ಗ್ರಾಮದಲ್ಲಿ 1992 ರಲ್ಲಿ ವೃತ್ತಿ ಜೀವನ ಆರಂಭಿಸಿ ಇವರು ಸತತ 3 ವರ್ಷಗಳ ಕಾಲ ಸೇವೆ ಸಲ್ಲಿಸಿದರು. ನಂತರ ಬಳ್ಳಾರಿ ಜಿಲ್ಲೆ ಕಂಪ್ಲಿ ತಾಲೂಕು ಎಮ್ಮಿಗನೂರು ಗ್ರಾಮಕ್ಕೆ 1995 ರಲ್ಲಿ ವರ್ಗಾವಣೆಯಾಗಿ ಬಂದು ಸರಿ ಸುಮಾರು 18 ವರ್ಷಗಳ ಕಾಲ ಸೇವೆ ಸಲ್ಲಿಸಿ, 2012ರಲ್ಲಿ ಮುಖ್ಯಗುರುಗಳಾಗಿ ಸಿರುಗುಪ್ಪ ತಾಲೂಕಿನ ಸಿರುಗುಪ್ಪ ಗ್ರಾಮದ ಎಂ ಸೂಗೂರು ಗ್ರಾಮದ ಸರ್ಕಾರಿ ಪ್ರೌಢ ಶಾಲೆಗೆ ನಿಯೋಜನೆಯಾದರು ತಮ್ಮ ಅವಧಿಯಲ್ಲಿ ಹಲವಾರು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಆಯೋಜಿಸುವ ಮೂಲಕ ವಿದ್ಯಾರ್ಥಿಗಳ ಮೆಚ್ಚುಗೆಗೆ ಪಾತ್ರರಾಗಿ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸುವ ಸಾಮರ್ಥ್ಯವನ್ನು ಸಹ ಮಕ್ಕಳಲ್ಲಿ ಬೆಳೆಸುವ ನಿಟ್ಟಿನಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಅನೇಕ ಸಾಧನೆಗಳನ್ನು ಮಾಡಿದ್ದಾರೆ ಎಂದು ತಿಳಿಸಿದರು.


ಇದೇ ವೇಳೆ ಯು. ಶ್ರೀನಿವಾಸ್ ರವರ ದಂಪತಿಗಳನ್ನು 1997-98ನೇ ಸಾಲಿನಲ್ಲಿ ಶಿಕ್ಷಣ ಕಲಿತ ವಿದ್ಯಾರ್ಥಿ ತಂಡದಿಂದ ಹಾಗೂ ಶಾಲೆಯ ವತಿಯಿಂದ‌ ಹಳೇ ವಿದ್ಯಾರ್ಥಿಗಳು ಸೇರಿ ಸನ್ಮಾನಿಸಿ ಗೌರವಿಸಲಾಯಿತು.


ಈ ಸಂದರ್ಭದಲ್ಲಿ ಶಾಲೆಯ ಮುಖ್ಯಗುರುಗಳು ಸಹ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಹಳೆ ವಿದ್ಯಾರ್ಥಿಗಳು ಸೇರಿದಂತೆ ಉಪನ್ಯಾಸಕರಾದ ಕುಮಾರ ಸ್ವಾಮಿ, ರಾಜಕುಮಾರ, ಜಡಪ್ಪ, ಬಸವರಾಜ್ ಸೇರಿದಂತೆ ಇತರರು ಉಪಸ್ಥಿತರಿದ್ದರು.






Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ