ಬಳ್ಳಾರಿ,ಡಿ.05
ತೋಟಗಾರಿಕೆ ಇಲಾಖೆಯಿಂದ ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆ ಬೆಳೆಯುವ ರೈತ ಫಲಾನುಭವಿಗಳಿಗೆ 2026-27 ನೇ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ಮನರೇಗಾ ಯೋಜನೆಯಡಿ ಸಹಾಯಧನ ನೀಡಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
*ಮಹಾತ್ಮಗಾಂಧಿ ರಾಷ್ಟಿಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ:*
ಹೊಸ ಪ್ರದೇಶ ವಿಸ್ತರಣೆ ಕಾರ್ಯಕ್ರಮದಡಿ ಅಂಜೂರ, ದಾಳಿಂಬೆ, ನುಗ್ಗೆ, ಪೇರಲ, ತೆಂಗು, ಡ್ರಾಗನ್ ಫ್ರೂಟ್, ನೇರಳೆ, ಸಪೋಟ, ಮಾವು, ಸೀತಾಫಲ್, ಹುಣಸೆ, ಕರಿಬೇವು, ಗುಲಾಬಿ ಹಾಗೂ ಇತರೆ ಬೆಳೆಗಳಿಗೆ ಅನುಷ್ಠಾನಗೊಳಿಸಲಾಗುವುದು. ಆಸಕ್ತ ರೈತ ಫಲಾನುಭವಿಗಳು ಈ ಸೌಲಭ್ಯ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.
ಅರ್ಜಿ ಸಲ್ಲಿಸಲು ಡಿ.10 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ತೋಟಗಾರಿಕೆ ಇಲಾಖೆ ಕಚೇರಿಗೆ ಸಂಪರ್ಕಿಸಿ, ಮಾಹಿತಿ ಪಡೆದು ಅರ್ಜಿ ಸಲ್ಲಿಸಬಹುದು ಎಂದು ಬಳ್ಳಾರಿಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಮಹೇಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

