Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಮಾನವ ಸಾಗಾಣಿಕೆ ಕಂಡುಬಂದರೆ ದೂರು ದಾಖಲಿಸಿ: ನ್ಯಾ ಮಹಾಂತೇಶ್ ದರಗದ


----

ಕೊಪ್ಪಳ ಜುಲೈ 31: ಮಾನವ ಕಳ್ಳ ಸಾಗಾಣಿಕೆಯು ಒಂದು ಗಂಭೀರ ಅಪರಾಧವಾಗಿದ್ದು, ಮಾನವ ಸಾಗಾಣಿಕೆ ಕಂಡುಬಂದರೆ ದೂರು ದಾಖಲಿಸಬೇಕು ಎಂದು ಹಿರಿಯ ಸಿವ್ಹಿಲ್ ನ್ಯಾಯಾಧೀಶರು ಹಾಗೂ ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶ್ ಎಸ್. ದರಗದ ಹೇಳಿದರು.

ಅವರು ಗುರುವಾರ ಕೊಪ್ಪಳ ನಗರದ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಜಿಲ್ಲಾ ಪೋಲಿಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕೊಪ್ಪಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಯ ಸಂಯಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ “ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ” ಪರಿಶಿಷ್ಟ ಜಾತಿ, ಪರಿಶಿಷ್ಡ ಪಂಗಡ ಕಾಯ್ದೆ ಹಾಗೂ ಖಾಯಂ ಜನತಾ ನ್ಯಾಯಲಯ ಕುರಿತು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮಾನವ ಕಳ್ಳ ಸಾಗಾಣಿಕೆಯು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ಇದರಿಂದ ಜನರು ಬಲವಂತವಾಗಿ, ಮೋಸದಿಂದ ಅಥವಾ ಬಲತ್ಕಾರದಿಂದ ದುಡಿಮೆ, ಲೈಂಗಿಕ ಶೋಷಣೆಗಾಗಿ ಸಾಗಿಸಲ್ಪಡುತ್ತಾರೆ. ಈ ಸಮಸ್ಯೆಯ ವಿರುದ್ಧ ಜಾಗೃತಿ ಮೂಡಿಸಲು ಮತ್ತು ಇಂತಹ ಪ್ರಕರಣಗಳಿಗೆ ಸಿಲುಕಿಕೊಂಡವರಿಗೆ ರಕ್ಷಿಸಲು ಸಂಬಂಧಿಸಿದ ಅಧಿಕಾರಿಗಳು ಎಲ್ಲಾ ಹಂತದಲ್ಲೂ ಕ್ರಮವಹಿಸಬೇಕು ಎಂದರು.

ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಕಾಯ್ದೆ ಮತ್ತು ಖಾಯಂ ಜನತಾ ನ್ಯಾಯಾಲಯ ಕುರಿತು ವಿವರವಾದ ಮಾಹಿತಿ ನೀಡಿದರು.

ಕೊಪ್ಪಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ನಟರಾಜ್ ಅವರು ಮಾತನಾಡಿ, ಮಾನವ ಸಾಗಾಣಿಕೆ ಹಳ್ಳಿಗಳಲ್ಲಿ, ನಗರಗಳಲ್ಲಿ ಕಂಡುಬAದರೆ ದೂರು ದಾಖಲಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಾಹಾಂತಯ್ಯ ಸ್ವಾಮಿ ಅವರು ಮಾತಾನಾಡಿ, ಪ್ರತಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ಮಕ್ಕಳ ಕಾವಲು ಸಮಿತಿ ರಚನೆಯಾಗಿದ್ದು, ಇಂತಹ ಪ್ರಕರಣಗಳು ಕಂಡುಬAದಲ್ಲಿ ಸಮಿತಿಯಲ್ಲಿ ಚರ್ಚಿಸಬೇಕು ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಅನ್ನಪೂರ್ಣ ಕುಬಕಡ್ಡಿ ಅವರು “ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ” ಕುರಿತು ಪ್ರತಿಜ್ಞಾ ವಿಧಿ ಭೋಧಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪರಶುರಾಮ್ ವಾಯ್ ಶೆಟ್ಟಪ್ಪನವರ್ ಅವರು ಮಾತನಾಡಿ, ಮಾನವ ಕಳ್ಳ ಸಾಗಾಣಿಕೆ ಮಾಡುವುದರ ಮೂಲಕ ಮಾನವನ ಅಂಗಾಂಗಗಳು ತೆಗೆದು ಇತರರಿಗೆ ಮಾರಾಟ ಮಾಡುವಂತಹ ಪ್ರಕ್ರಿಯೆಗಳು ನಡೆಯುತ್ತವೆ. ಇಂತಹ ಜಾಲ ಪತ್ತೆಯಾದಲ್ಲಿ ಹತ್ತಿರ ಪೋಲಿಸ್ ಠಾಣೆಗೆ ಮಾಹಿತಿ ನೀಡಬೇಕು. ಈ ಬಗ್ಗೆ ಅಂಗನವಾಡಿ ಕಾರ್ಯಕರ್ತೆಯವರಿಗೆ ಪ್ರತಿ 3 ತಿಂಗಳಿಗೊಮ್ಮೆ ಕಾವಲು ಸಮಿತಿ ಸಭೆ ನಡೆಸಿ, ಇಂತಹ ಪ್ರಕರಣಗಳು ಕಂಡುಬಂದಲ್ಲಿ ಪೋಲಿಸರಿಗೆ ಹಾಗೂ ಮೇಲಾಧಿಕಾರಿಗಳಿಗೆ ಮಾಹಿತಿ ನೀಡುವಂತೆ ತಿಳಿಸಿದರು.

ಕೊಪ್ಪಳ ತಾಲ್ಲೂಕು ಪಂಚಾಯತಿ ಸಹಾಯಕ ನಿರ್ದೇಶಕ ಮಹೇಶ್ ಅವರು ಕಾರ್ಯಕ್ರಮದ ಕುರಿತು ಮಾತನಾಡಿದರು. ಮೇಲ್ವಿಚಾರಕಿ ಚಂದ್ರಮ್ಮ ಅವರು ಕಾರ್ಯಕ್ರಮ ನಿರೂಪಿಸಿದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ರೋಹಿಣಿ ಕೋಟಗಾರ್ ಸ್ವಾಗತಿಸಿದರು. ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ರೂಪ ಗಂದಧ ಅವರು ಕೊನೆಯಲ್ಲಿ ವಂದಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಮಹಿಳಾ ಸಬಲೀಕರಣ ಘಟಕದ ಸಿಬ್ಬಂದಿಗಳು, ಜಿಲ್ಲಾ ಸಂಯೋಜಕಿ ಶ್ರೀದೇವಿ, ಜೆಂಡರ್ ಸ್ಪಷಲಿಸ್ಟ್ ಫಾತಿಮಾ, ಸಖಿ ಒನ್ ಸ್ಟಾಪಸೆಂಟರ್ ಮೇಲ್ವಚಾರಕಿ ಯಮುನಾ ಬೆಸ್ತರ್ ಸೇರಿದಂತೆ ಮಕ್ಕಳ ಸಹಾಯವಾಣಿ 1098 ಸಿಬ್ಬಂದಿಗಳು, ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು, ಸಾಮತ್ವಾನಾ ಸಿಬ್ಬಂದಿ, ಕೌಟುಂಬಿಕ ಸಲಹಾ ಕೇಂದ್ರದ ಸಿಬ್ಬಂದಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ