Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿವಿಧ ಇಲಾಖೆಗಳ ನೇಮಕಾತಿ ಪರೀಕ್ಷೆ: ನಿಷೇಧಾಜ್ಞೆ ಜಾರಿ



ಕೊಪ್ಪಳ ಫೆಬ್ರವರಿ 20, : ಬಿಡಿಎ, ಕೆಕೆಆರ್‌ಟಿಸಿ, ಕೆಎಸ್‌ಡಿಎಲ್, ತಾಂತ್ರಿಕ ಶಿಕ್ಷಣ ಇಲಾಖೆ ಮುಂತಾದ ಇಲಾಖೆ/ಸಂಸ್ಥೆಗಳಲ್ಲಿನ ವಿವಿಧ ಹುದ್ದೆಗಳಿಗೆ ಫೆ.22 ರಂದು ನೇರ ನೇಮಕಾತಿ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಗಳನ್ನು ಸುಗಮ ಮತ್ತು ಶಾಂತಿಯುತವಾಗಿ ನಡೆಸುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ಅಂತರದ ಪ್ರದೇಶದಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ 163 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಅವರು ಆದೇಶ ಹೊರಡಿಸಿದ್ದಾರೆ.

ನೇರ ನೇಮಕಾತಿ ಪರೀಕ್ಷೆಗಳು ಕೊಪ್ಪಳ ತಾಲ್ಲೂಕಿನ 13 ಪರೀಕ್ಷಾ ಕೇಂದ್ರಗಳಲ್ಲಿ ಬೆಳಿಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 12.30 ರವರೆಗೆ ಹಾಗೂ ಮಧ್ಯಾಹ್ನ 2.30 ಗಂಟೆಯಿAದ ಸಂಜೆ 4.30 ಗಂಟೆಯವರೆಗೆ ನಿಗದಿತ 13 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ.

ನಿಷೇಧಾಜ್ಞೆ ಆದೇಶದನ್ವಯ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ., ಮೊಬೈಲ್, ಪೇಜರ್, ಜರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಹಾಗೂ ನಿಯೋಜಿತ ಶಿಕ್ಷಕರನ್ನು, ಜಾಗೃತ ದಳದವರನ್ನು ಹೊರತುಪಡಿಸಿ ಇನ್ನುಳಿದವರಿಗೆ ಪರವಾನಿಗೆ ಇಲ್ಲದೆ ಪರೀಕ್ಷಾ ಕೇಂದ್ರಗಳಲ್ಲಿ ಪ್ರವೇಶ ಮಾಡುವುದನ್ನು ನಿಷೇಧಿಸಿದೆ. ಪರೀಕ್ಷಾ ಕೇಂದ್ರಗಳ ಸುತ್ತಲೂ ಜನರು ಮಾರಕಾಸ್ತçಗಳನ್ನು ಹಿಡಿದು ತಿರುಗಾಡುವುದನ್ನು ನಿಷೇಧಿಸಿದೆ. ಈ ಆದೇಶವು ಮದುವೆ, ಶವ ಸಂಸ್ಕಾರಗಳು ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯವಾಗುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.
Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು