ಕೊಪ್ಪಳ ಜಿಲ್ಲೆಯ ಯಲಬುರ್ಗಾ ಹಾಗೂ ಕುಕನೂರು ತಾಲ್ಲೂಕಿನ ಬನ್ನಿಕೊಪ್ಪ ಸೇರಿ 23 ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಯೋಜನೆಯನ್ನು 125 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗುತ್ತದೆ.
ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಹೆಸರನ್ನು ಚಿರಸ್ಥಾಯಿಗೊಳಿಸುವ ಉದ್ದೇಶದಿಂದ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ‘ಮಹಾತ್ಮಾ ಗಾಂಧಿ ಗ್ರಾಮ ಪಂಚಾಯಿತಿ’ ಎಂದು ನಾಮಕರಣ ಮಾಡುವುದಾಗಿ ಬಜೆಟ್‌ನಲ್ಲಿ ಘೋಷಿಸಲಾಗಿದೆ.
ಇದೇ ವೇಳೆ ರಾಜ್ಯದ ಎಲ್ಲಾ ಪಂಚಾಯಿತಿಗಳಲ್ಲಿ ಸಾರ್ವಜನಿಕ–ಖಾಸಗಿ ಸಹಭಾಗಿತ್ವದಲ್ಲಿ ಸೋಲಾರ್ ಮೈಕ್ರೋ ಗ್ರಿಡ್‌ಗಳನ್ನು ಸ್ಥಾಪಿಸುವ ‘ಅನಂತ’ ಯೋಜನೆಯನ್ನು ಜಾರಿಗೊಳಿಸಲು ಸರ್ಕಾರ ಮುಂದಾಗಿದೆ.
ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು, ವಿದ್ಯುತ್ ಹಾಗೂ ಆಡಳಿತಾತ್ಮಕ ವ್ಯವಸ್ಥೆಗಳನ್ನು ಬಲಪಡಿಸುವ ಮೂಲಕ ಸಮಗ್ರ ಅಭಿವೃದ್ಧಿಗೆ ಸರ್ಕಾರ ಒತ್ತು ನೀಡಿರುವುದು ಬಜೆಟ್‌ನ ಪ್ರಮುಖ ಅಂಶವಾಗಿದೆ.
Also read