Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಸ್ಥಳೀಯ ಸುದ್ದಿ

ಗ್ರಾಮ ಆಡಳಿತಾಧಿಕಾರಿ ನೇಮಕಾ: ಅಭ್ಯರ್ಥಿಗಳಿಗೆ ಮಹತ್ವದ ಸೂಚನೆ

ಬೆಂಗಳೂರು, ಮೇ 01: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಿದ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿಯನ್ನು ನೀಡಲಾಗಿದೆ.

ಕೆಇಎ ಕಾರ್ಯನಿರ್ವಾಹಕ ನಿರ್ದೇಶಕರು. ಮಲ್ಲೇಶ್ವರಂ, ಬೆಂಗಳೂರ ಈ ಕುರಿತು ಟಿಪ್ಪಣಿ ಮೂಲಕ ಮಾಹಿತಿ ನೀಡಿದ್ದಾರೆ. ಅರ್ಜಿ ಸಲ್ಲಿಕೆ ಬಳಿಕ ಶುಲ್ಕ ಪಾವತಿ ಮಾಹಿತಿ ಅಪ್‌ಡೇಟ್‌ಗೆ ಸಂಬಂಧಿಸಿದಂತೆ ಈ ಮಾಹಿತಿ ನೀಡಲಾಗಿದೆ



ಟಿಪ್ಪಣಿಯ ವಿವರ: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸಿದ ನಂತರ ಶುಲ್ಕ ಮಾಹಿತಿಯು update ಆಗದಿದ್ದಲ್ಲಿ, ಇ-ಮೇಲ್ ವಿಳಾಸ [email protected]ಗೆ ಅರ್ಜಿ ಸಂಖ್ಯೆ ಹಾಗೂ ಶುಲ್ಕ ಪಾವತಿಸಿದ ವಿವರಗಳನ್ನು ಸಲ್ಲಿಸತಕ್ಕದ್ದು ಎಂದು ತಿಳಿಸಿದೆ.ಶುಲ್ಕ ಪಾವತಿಸಿದ ವಿವರಗಳನ್ನು ಇ-ಮೇಲ್ ಕಳುಹಿಸಿದ 2 ದಿನಗಳ ನಂತರ update ಮಾಡಲಾಗುತ್ತದೆ ನಂತರ ಅರ್ಜಿಯನ್ನು ಪ್ರಿಂಟ್ ಮಾಡಬಹುದಾಗಿದೆ ಎಂದು ಟಿಪ್ಪಣಿ ಮೂಲಕ ಅಭ್ಯರ್ಥಿಗಳಿಗೆ ಮಾಹಿತಿ ನೀಡಲಾಗಿದೆ

ಕೆಇಎ ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ (ಸ್ಥಳೀಯ) ವೃಂದದಲ್ಲಿರುವ ಒಟ್ಟು 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿ ಸಂಬಂಧ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 21,400-42,000 ರೂ. ವೇತನವನ್ನು ನಿಗದಿಗೊಳಿಸಲಾಗಿದೆ. ದ್ವಿತೀಯ ಪಿಯುಸಿ ಅಥವ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಕೆ ಮಾಡಬೇಕಿದೆ.

ಅರ್ಜಿಗಳನ್ನು ಸಲ್ಲಿಕೆ ಮಾಡುವ ಎಲ್ಲಾ ಅಭ್ಯರ್ಥಿಗಳಿಗೆ 18 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ, ಪ್ರವರ್ಗ 2ಎ, 2ಬಿ, 3ಎ, 3 ಬಿ ಅಭ್ಯರ್ಥಿಗಳಿಗೆ 38 ವರ್ಷಗಳು. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷದ ಗರಿಷ್ಠ ವಯೋಮಿತಿ ಇದೆ. ಆಸಕ್ತ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್ http://kea.kar.nic.in ನಲ್ಲಿ ತೋರಿಸುವ ಲಿಂಕ್ ಅನ್ನು ಆಯ್ಕೆ ಮಾಡಿ ಆನ್ ಲೈನ್ ಮುಖಾಂತರ ಅರ್ಜಿಯನ್ನು ಭರ್ತಿ ಮಾಡಬೇಕು.

ಅಭ್ಯರ್ಥಿಯು ಯಾವುದಾದರು ಒಂದು ಜಿಲ್ಲೆಗೆ ಮಾತ್ರ ಹುದ್ದೆ ಬಯಸಿ ಅರ್ಜಿಯನ್ನು ಸಲ್ಲಿಸತಕ್ಕದ್ದು. ಒಮ್ಮೆ ಸಲ್ಲಿಸಿದ ಅರ್ಜಿಯಲ್ಲಿನ ಯಾವುದೇ ಮಾಹಿತಿಯನ್ನು ಯಾವುದೇ ಹಂತದಲ್ಲಿ ಬದಲಾವಣೆ/ ತಿದ್ದು ಪಡಿಮಾಡಲು ಅವಕಾಶವಿರುವುದಿಲ್ಲ. ಆದ್ದರಿಂದ ಆಭ್ಯರ್ಥಿಗಳು ಎಚ್ಚರಿಕೆಯಿಂದ ಅಧಿಸೂಚನೆಯನ್ನು ಓದಿ ಅರ್ಥೈಸಿಕೊಂಡು ಅರ್ಜಿ ಸಲ್ಲಿಸಲು ಸೂಚಿಸಲಾಗಿತ್ತು.

ಅಭ್ಯರ್ಥಿಗಳು ಆನ್‌ಲೈನ್ ಮುಖಾಂತರ ಭರ್ತಿ ಮಾಡುವ ಮೊದಲು ಅರ್ಹತೆಗೆ ಸಂಬಂಧಿಸಿದ ಎಲ್ಲಾ ಸೂಚನೆಗಳನ್ನು ಓದಿಕೊಳ್ಳತಕ್ಕದ್ದು ಹಾಗೂ ನೀಡಿರುವ ಸೂಚನೆಗಳನ್ವಯ ಅರ್ಜಿಯನ್ನು ಭರ್ತಿ ಮಾಡತಕ್ಕದ್ದು. ತಪ್ಪು ಅಥವಾ ಸುಳ್ಳು ಮಾಹಿತಿಗಳನ್ನು ನೀಡಿ ಅರ್ಜಿ ಸಲ್ಲಿಸಿದಲ್ಲಿ ಯಾವುದೇ ಸಮಯದಲ್ಲಿಯಾದರೂ ಅಭ್ಯರ್ಥಿತನವು ರದ್ದುಗೊಳ್ಳುವುದು ಹಾಗು ನಿಯಮಾನುಸಾರ ಅಂತಹವರ ವಿರುದ್ಧ ಸರ್ಕಾರವು/ ಪ್ರಾಧಿಕಾರ/ ಸಂಸ್ಥೆಯು ಕಾನೂನಿನನ್ವಯ ಸೂಕ್ತ ಕ್ರಮ ಕೈಗೊಳ್ಳುವುದು ಎಂದು ಎಚ್ಚರಿಕೆ ನೀಡಲಾಗಿತ್ತು.




Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ