ಸಿರುಗುಪ್ಪ : ತಾಲ್ಲೂಕಿನ ತೆಕ್ಕಲಕೋಟೆ ಪಟ್ಟಣದ 19ನೇ ವಾರ್ಡ್ ನ ರಾಷ್ಟ್ರೀಯ ಹೆದ್ದಾರಿ ಯಲ್ಲಿ ಬೆಳಂ ಬೆಳಿಗ್ಗೆ ಅಪಘಾತ ಮೂರುಜನ ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ತೆಕ್ಕಲಕೋಟೆ ಪೊಲೀಸ್ ಠಾಣೆಯ ವ್ಯಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಸಿರುಗುಪ್ಪ ನಿವಾಸಿಗಳಾದ ನಿಟ್ಟೂರಿನ ನಾಗ ಪ್ರಸಾದ್ ರಾವ್ (75) ವಿಜಯಲಕ್ಷ್ಮಿ (70) ಹಾಗೂ ಸಂಧ್ಯಾ (35) ಎಂದು ಗುರುತಿಸಲಾಗಿದೆ.ತೀವ್ರವಾಗಿ ಗಾಯಗೊಂಡ ನಿಟ್ಟೂರು ಗ್ರಾಮದ ಪದ್ಮ (70) ಹಾಗೂ ಸಿರುಗುಪ್ಪದ ಬೃಹೇಶ್ವರರಾವ್ (45) ಇವರನ್ನು ಬಳ್ಳಾರಿಯ ಬಿಮ್ಸ ಆಸ್ಪತ್ರೆಯ ಟ್ರಾಮಾ ಕೇರ್ ಸೆಂಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತದೆ.ನಿಟ್ಟೂರು ಗ್ರಾಮದವರಾದ, ಇವರು ಸದ್ಯ ಸಿರುಗುಪ್ಪ ನಗರದಲ್ಲಿ ವಾಸವಾಗಿರುವ ಒಂದೇ ಕುಟುಂಬದ ಐವರು ತಮಿಳುನಾಡಿನ ದೇವಸ್ಥಾನಕ್ಕೆ ತೆರಳಿ ವಾಪಸ್ಸು ಬರುವಾಗ ದೇವಿನಗರದ ಬಳಿ ಅಪಘಾತವಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.