Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಸೌಂದರ್ಯ ಸಹಕಾರಿ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕ್ ನೂತನ ಕಟ್ಟಡ ಲೋಕಾರ್ಪಣೆ

 ಬೆಂಗಳೂರು: ಪೀಣ್ಯ ದಾಸರಹಳ್ಳಿಯಲ್ಲಿ  ಸ್ವಂತ ಕಟ್ಟಡ ಹೊಂದಿದ ಸೌಂದರ್ಯ ಸಹಕಾರಿ ಸಂಸ್ಥೆ ಹೆಗ್ಗಳಿಕೆಗೆ ಪಾತ್ರವಾಗಿದೆ. ಸಮಾಜದಲ್ಲಿ ಎಲ್ಲರ ಜೊತೆಗೂ ಸೌಹಾರ್ದದಿಂದ ಬದುಕನ್ನು ಮುನ್ನಡೆಸಿಕೊಂಡು ಬಂದರೆ ಸಮಾಜವು ನಮ್ಮೊಡನೆ ಸೌಹಾರ್ದದ ಬದುಕನ್ನು ಬೆಳೆಸುತ್ತದೆ ಎಂದು ಉಡುಪಿ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮಿ ಹೇಳಿದರು.

 ಹಾವನೂರು ಬಡಾವಣೆಯ ಸೌಂದರ್ಯ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕಿನ  ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದರು. ' ಸಂಸ್ಥೆಯಿಂದ ಸಮಾಜ ಬೆಳೆಯಬೇಕು, ಹಾಗೆಯೇ ಸಮಾಜದಿಂದ ಸಹಕಾರ ಬೆಳೆಯಬೇಕು. ನಮ್ಮ ಬದುಕಿಗೆ ಈ ಸಮಾಜದಲ್ಲಿ ಸಂಪತ್ತು ಕೂಡ ಅವಶ್ಯಕ. ಅದನ್ನು ಕೂಡಿಟ್ಟುಕೊಂಡರೆ ಬದುಕು ವಿನಾಶ, ಅದನ್ನು ಪರಸ್ಪರ ಸಹಕಾರದಿಂದ ಹೊರಗೆ ಹಾಕುತ್ತಿರಬೇಕು. ಆಗ ನೆಮ್ಮದಿ ಸಾಧ್ಯ' ಎಂದು ತಿಳಿಸಿದರು.

ಸಂಘದ ಸಂಸ್ಥಾಪಕ  ಅಧ್ಯಕ್ಷ ಸೌಂದರ್ಯ ಪಿ ಮಂಜಪ್ಪ ಮಾತನಾಡಿ' ಸಂಘದ ಪ್ರಾರಂಭಕ್ಕೆ ಪೇಜಾವರ ಶ್ರೀಗಳ ಆಶೀರ್ವಾದದಿಂದ ಸಂಘ ಬೆಳೆಯುತ್ತಿದೆ.

ನಮ್ಮ ಸಂಘದ ಸರ್ವ ಸದಸ್ಯರ ನಿಷ್ಠೆ, ನಂಬಿಕೆ ಮತ್ತು ವಿಶ್ವಾಸ ಉಳಿಸಿಕೊಂಡು ಇಂದು ರಾಷ್ಟ್ರೀಕೃತ ಬ್ಯಾಂಕುಗಳಿಗೆ ಸರಿಸಮನಾಗಿ ಉತ್ತಮ ಸೇವೆ ಸಲ್ಲಿಸುತ್ತಿದೆ. ಸದಸ್ಯರ ನಂಬಿಕೆಗೆ ಚುತಿ ಬರದ ರೀತಿಯಲ್ಲಿ ಸ್ವಂತ ಕಟ್ಟಡ ನಿರ್ಮಾಣವಾಗಿದೆ' ಎಂದರು.

    ವ್ಯವಸ್ಥಾಪಕ ನಿರ್ದೇಶಕ ಕೆ ಕೃಷ್ಣಶೆಟ್ಟಿ ಮಾತನಾಡಿ' ಹತ್ತು ವರ್ಷದ ಹಿಂದೆ 20 ಲಕ್ಷ ಶೇರು ಬಂಡವಾಳದಲ್ಲಿ ಪ್ರಾರಂಭವಾದ ಸಹಕಾರಿಯು 125 ಕೋಟಿ ಠೇವಣಿ ಇದ್ದು, 115 ಕೋಟಿ ಯನ್ನು ಸದಸ್ಯರಿಗೆ ಸಾಲ ನೀಡಿದೆ, ಹತ್ತು ವರ್ಷಗಳಲ್ಲಿ 3.75 ಕೋಟಿ ಲಾಭ ಗಳಿಸಿದೆ. 5 ಕೋಟಿ ವೆಚ್ಚದಲ್ಲಿ ಸ್ವಂತ ಕಟ್ಟಡ ನಿರ್ಮಿಸಲಾಗಿದೆ' ಎಂದು ಮಾಹಿತಿ ನೀಡಿದರು.

     ಈ ಸಂದರ್ಭದಲ್ಲಿ ಸಹಕಾರಿ ಸಂಘದ ನಿರ್ದೇಶಕ ಎಂ ಕೀರ್ತನ್ ಕುಮಾರ್, ಉಪಾಧ್ಯಕ್ಷೆ ಎಂ. ಸುನಿತಾ, ಸದಸ್ಯೆ ಪ್ರತಿಕ್ಷಾ, ಕೋ ಆಪರೇಟಿವ್ ಸೊಸೈಟಿಗಳ ಸಂಘಟನೆಯ ರಾಜ್ಯ ಅಧ್ಯಕ್ಷ ವೈ ಕುಮಾರ್, ಕೆ.ಎಸ್.ಎಸ್.ಎಫ್.ಸಿ.ಎಲ್ ನಿರ್ದೇಶಕ ಶರಣಗೌಡ ಜಿ. ಪಾಟೀಲ, ವರುಣ್ ಕುಮಾರ್ ಸೇರಿದಂತೆ ಮುಂತಾದವರಿದ್ದರು.

 

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ