Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಐತಿಹಾಸಿಕ ಕೋಟೆ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ಹೆಚ್ಚಿದ ಸೌಲಭ್ಯ ರೂ.2 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ



ಚಿತ್ರದುರ್ಗಜುಲೈ30:

ಐತಿಹಾಸಿಕ ಕೋಟೆ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಪ್ರವಾಸೋದ್ಯಮ ಇಲಾಖೆ ವತಿಯಿಂದ ರೂ.2 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಬುಧವಾರ ಲೋಕಾರ್ಪಣೆಗೊಳಿಸಿದರು.

ಕೋಟೆ ಮುಂಭಾಗದ ಮಯೂರ ಹೋಟೆಲ್ ಪಕ್ಕದಲ್ಲಿ 2018-19ನೇ ಸಾಲಿನ ಬಂಡವಾಳ ವೆಚ್ಚ ಯೋಜನೆಯಡಿ ಪ್ರವಾಸಿ ಮಾಹಿತಿ ಕೇಂದ್ರ, ಪಾರ್ಕಿಂಗ್ ಸೌಲಭ್ಯ, ಲಗೇಜ್ ಕೊಠಡಿ, ಕುಡಿಯುವ ನೀರಿನ ಸೌಲಭ್ಯ, ಪ್ರವಾಸಿಗರಿಗೆ ವಿಶ್ರಾಂತಿ ಕೊಠಡಿ, ಮಹಿಳಾ ಮತ್ತು ಪುರುಷ ಸ್ನಾನಗೃಹ ಹಾಗೂ ಶೌಚಾಲಯಗಳನ್ನು ನಿರ್ಮಿಸಲಾಗಿದೆ.

ಈ ವೇಳೆ ಮಾತನಾಡಿದ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ಪ್ರವಾಸೋದ್ಯಮ ಇಲಾಖೆಯಿಂದ ಕಾಮಗಾರಿಗಳು ಪೂರ್ಣಗೊಂಡು ಬಹಳ ದಿನಗಳು ಆಗಿದ್ದವು. ಕೆಲ ದಿನಗಳ ಹಿಂದೆ ಇಲ್ಲಿ ವೀಕ್ಷಣೆಗೆ ಆಗಮಿಸಿದ ವೇಳೆ, ಕಟ್ಟಡಗಳು ಪೂರ್ಣಗೊಂಡಿದ್ದು ಕಂಡು ಬಂದಿತು. ಶೀಘ್ರವೇ ಉದ್ಘಾಟನೆ ನೆರವೇರಿಸಿ ಬರುವ ಪ್ರವಾಸಗರಿಗೆ ಅನುಕೂಲ ಮಾಡಿಕೊಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದೆ, ಅದರಂತೆ ಇಂದು ಪ್ರವಾಸಿ ಮಾಹಿತಿ ಕೇಂದ್ರ, ಪಾರ್ಕಿಂಗ್ ಸೌಲಭ್ಯ, ಲಗೇಜ್ ಕೊಠಡಿ, ಕುಡಿಯುವ ನೀರಿನ ಸೌಲಭ್ಯ, ಪ್ರವಾಸಿಗರಿಗೆ ವಿಶ್ರಾಂತಿ ಕೊಠಡಿ, ಶೌಚಾಲಯ ಹಾಗೂ ಸ್ನಾನ ಗೃಹಗಳನ್ನು ಲೋಕಾರ್ಪಣೆಗೊಳಿಸಿ ಪ್ರವಾಸಿಗರಿಗೆ ಅನುಕೂಲ ಮಾಡಿಕೊಡಲಾಗಿದೆ. ಈ ಎಲ್ಲಾ ಸೌಲಭ್ಯಗಳು ಒಂದೇ ಆವರಣದ ಒಳಗಡೆ ಇದ್ದು, ರಕ್ಷಣೆಗಾಗಿ ಸುತ್ತಲೂ ಕಾಂಪೌಂಡ್ ನಿರ್ಮಿಸಲಾಗಿದೆ. ಐತಿಹಾಸಿಕ ಕೋಟೆ ವೀಕ್ಷಣೆಗೆ ಸಂಜೆಯವರೆಗೆ ಮಾತ್ರ ಅವಕಾಶವಿದ್ದು ಪ್ರವಾಸಿಗರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಂ.ಕೆ.ತಾಜ್ಪೀರ್, ಜಿಲ್ಲಾ ಗ್ಯಾರಂಟಿ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಆರ್.ಶಿವಣ್ಣ, ಪೌರಾಯುಕ್ತೆ ಎಂ.ರೇಣುಕಾ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕಿ ಡಾ.ನಾಗವೇಣಿ, ಕೆಆರ್ಐಡಿಎಲ್ ಕಾರ್ಯಪಾಲಕ ಅಭಿಯಂತರ ಟಿ.ಎನ್.ವಿನಾಯಕ ಸೇರಿದಂತೆ ಮತ್ತಿರರು ಉಪಸ್ಥಿತರಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ