Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸ್ವಾತಂತ್ರ್ಯ ದಿನಾಚರಣೆ : ಸಾರ್ವಜನಿಕರಿಗೆ E-Pass ವ್ಯವಸ್ಥೆ*


*



*ಬೆಂಗಳೂರು ನಗರ ಜಿಲ್ಲೆ, ಆಗಸ್ಟ್ 14 ಬೆಂಗಳೂರು ನಗರದಲ್ಲಿ ಫೀಲ್ಡ್ ಮಾರ್ಷಲ್ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಆಗಸ್ಟ್ 15 ರಂದು ನಡೆಯಲಿರುವ ರಾಜ್ಯ ಮಟ್ಟದ 79ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ವೀಕ್ಷಿಸಿಸಲು ಸಾರ್ವಜನಿಕರಿಗೆ ಪ್ರಥಮ ಬಾರಿಗೆ E-Pass ವ್ಯವಸ್ಥೆ ಕಲ್ಪಿಸಿದ್ದು, ಆಸಕ್ತರು ಸೇವಾ ಸಿಂಧು ವೆಬ್ ಸೈಟ್ (www.sevasindhu.karnataka.gov.in) ನಲ್ಲಿ ಆಧಾರ್ ಹಾಗೂ ಮೊಬೈಲ್ ಸಂಖ್ಯೆಯನ್ನು ನಮೂದಿಸಿ OTP ಮೂಲಕ E-Pass ಅನ್ನು download ಮಾಡಿಕೊಳ್ಳಬಹುದು ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಿ. ಜಗದೀಶ ರವರು ತಿಳಿಸಿದ್ದಾರೆ.



ವಿಶೇಷ ಸೂಚನೆ : ಇ-ಪಾಸ್ ಕೇವಲ ಆಗಸ್ಟ್ 15 ರಂದು ಮಾತ್ರ ಮಾನ್ಯವಾಗಿರುತ್ತದೆ. ಇ-ಪಾಸ್ ನೊಂದಿಗೆ ಮೂಲ ಗುರುತಿನ ಚೀಟಿ (Original ID card) ಕಡ್ಡಾಯವಾಗಿ ಹೊಂದಿರಬೇಕು. ಇ-ಪಾಸ್ ಹೊಂದಿರುವವರು ಬೆಳಿಗ್ಗೆ 08.15 ರೊಳಗೆ ಗೇಟ್ ನಂ 5 ರಿಂದ ಮಾತ್ರ ಮೈದಾನವನ್ನು ಪ್ರವೇಶಿಸಬೇಕು. ನಿಗದಿತ ಸಮಯದ ನಂತರ ಇ-ಪಾಸ್ ಅಮಾನ್ಯವಾಗಲಿದ್ದು, ಪ್ರವೇಶಕ್ಕೆ ಅನುಮತಿ ಇರುವುದಿಲ್ಲ. ಇ-ಪಾಸ್ ಅನ್ನು ವರ್ಗಯಿಸುವಂತಿಲ್ಲ. ಒಂದು ಇ-ಪಾಸ್ ಗೆ ಒಬ್ಬರಿಗೆ ಮಾತ್ರ ಪ್ರವೇಶವಿರುತ್ತದೆ. ಕಾರ್ಯಕ್ರಮದ ಸಮಯದಲ್ಲಿ ಇ-ಪಾಸ್ ನ ಮುದ್ರಿತ ಪ್ರತಿ ಅಥವಾ ಡಿಜಿಟಲ್ (ಮೊಬೈಲ್) ಪ್ರತಿಯನ್ನು ಕಡ್ಡಾಯವಾಗಿ ಹೊಂದಿರಬೇಕು. ಆರು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಇ-ಪಾಸ್ ಅವಶ್ಯವಿರುವುದಿಲ್ಲ. ಇ-ಪಾಸ್ ಗಳು ಒಟ್ಟು 3000 ಸಂಖ್ಯೆಗೆ ಸೀಮಿತವಾಗಿರುವುದರಿಂದ "ಮೊದಲು ಬಂದವರಿಗೆ ಮೊದಲ" ಆದ್ಯತೆ ನೀಡಲಾಗುವುದು ಇ-ಪಾಸ್ ಹೊಂದಿರುವವರಿಗೆ ಪಾರ್ಕಿಂಗ್ ಸೌಲಭ್ಯ ಒದಗಿಸಲಾಗುವುದಿಲ್ಲ. ಪಾರ್ಕಿಂಗ್ ವ್ಯವಸ್ಥೆ ಗೆ ಪೊಲೀಸ್ ಇಲಾಖೆ ನಿರ್ದೇಶನದಂತೆ ಸಾರ್ವಜನಿಕರು ವಾಹನ ನಿಲುಗಡೆ ಮಾಡಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ