Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

15 ರಂದು ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲು ಸಕಲ ಸಿದ್ಧತೆಗೆ ಸೂಚನೆ* *ಡಾ. ಕುಮಾರ*

ಮಂಡ್ಯ.ಜು.23-ಆಗಸ್ಟ್‌ 15ರಂದು ನಡೆಯಲಿರುವ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣ, ಶಿಸ್ತುಬದ್ಧ ಹಾಗೂ ವಿಜೃಂಭಣೆಯಿಂದ ಆಚರಿಸಲು ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಡಳಿತದ ವತಿಯಿಂದ ನಡೆದ 79ನೇ ಸ್ವಾತಂತ್ರ್ಯ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸ್ವಾತಂತ್ರ್ಯ ದಿನಾಚರಣೆ ರಾಷ್ಟ್ರೀಯ ಹೆಮ್ಮೆಯ ಸಂಕೇತವಾಗಿದ್ದು, ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಸಾರ್ವಜನಿಕರು, ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಬೇಕು ಎಂದು ತಿಳಿಸಿದರು.
ಜಿಲ್ಲಾ ಕ್ರೀಡಾಂಗಣದಲ್ಲಿ ಆಕರ್ಷಕ ಪಥಸಂಚಲನವನ್ನು ಆಯೋಜಿಸಬೇಕು. ಪೊಲೀಸ್ ಇಲಾಖೆ, ಗೃಹರಕ್ಷಕ ದಳ, ಸ್ಕೌಟ್ಸ್ ಮತ್ತು ಗೈಡ್ಸ್, ಎನ್‌ಸಿಸಿ, ಎನ್‌ಎಸ್‌ಎಸ್ ಹಾಗೂ ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳ ತಂಡಗಳು ಶಿಸ್ತುಬದ್ಧವಾಗಿ ಪಥಸಂಚಲನದಲ್ಲಿ ಭಾಗವಹಿಸುವಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ದೇಶಭಕ್ತಿ, ರಾಷ್ಟ್ರೀಯ ಏಕತೆ ಹಾಗೂ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗವನ್ನು ಬಿಂಬಿಸುವ ನೃತ್ಯ, ಗೀತಗಾಯನ ಹಾಗೂ ಇತರೆ ಪ್ರದರ್ಶನಗಳಿಗೆ ಆದ್ಯತೆ ನೀಡಬೇಕು. ಉತ್ತಮ ಪ್ರದರ್ಶನ ನೀಡುವ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಬೇಕು ಎಂದು ಹೇಳಿದರು.
ಆಗಸ್ಟ್‌ 14ರ ರಾತ್ರಿ ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳು, ಪ್ರಮುಖ ವೃತ್ತಗಳು ಹಾಗೂ ಸಾರ್ವಜನಿಕ ಕಟ್ಟಡಗಳಲ್ಲಿ ದೀಪಾಲಂಕಾರ ಮಾಡುವ ಮೂಲಕ ಸ್ವಾತಂತ್ರ್ಯ ದಿನಾಚರಣೆಗೆ ವಿಶೇಷ ಮೆರುಗು ನೀಡಬೇಕು ಎಂದು ತಿಳಿಸಿದರು.
ಪ್ಲಾಸ್ಟಿಕ್ ರಾಷ್ಟ್ರಧ್ವಜಗಳಿಗೆ ಕಟ್ಟುನಿಟ್ಟಿನ ನಿಷೇಧ
ಪ್ಲಾಸ್ಟಿಕ್ ರಾಷ್ಟ್ರಧ್ವಜಗಳ ಮಾರಾಟ ಹಾಗೂ ಬಳಕೆಗೆ ಯಾವುದೇ ಅವಕಾಶ ನೀಡಬಾರದು. ಒಂದು ವೇಳೆ ಮಾರಾಟ ಅಥವಾ ಬಳಕೆ ಕಂಡುಬಂದಲ್ಲಿ ನಗರಸಭೆ ಹಾಗೂ ಸಂಬಂಧಿಸಿದ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರು ಕಾಗದ ಅಥವಾ ಬಟ್ಟೆಯಿಂದ ತಯಾರಿಸಿದ ರಾಷ್ಟ್ರಧ್ವಜಗಳನ್ನು ಮಾತ್ರ ಬಳಸುವಂತೆ ಜಾಗೃತಿ ಮೂಡಿಸಬೇಕು ಎಂದು ಸೂಚಿಸಿದರು.
ಕಾರ್ಯಕ್ರಮ ನಡೆಯುವ ಜಿಲ್ಲಾ ಕ್ರೀಡಾಂಗಣದಲ್ಲಿ ಕುಡಿಯುವ ನೀರು, ಸ್ವಚ್ಛ ಶೌಚಾಲಯ, ಆಸನ ವ್ಯವಸ್ಥೆ, ವಾಹನ ನಿಲುಗಡೆ, ತುರ್ತು ವೈದ್ಯಕೀಯ ಸೇವೆ, ಅಗ್ನಿಶಾಮಕ ಮತ್ತು ಭದ್ರತಾ ವ್ಯವಸ್ಥೆ ಸೇರಿದಂತೆ ಎಲ್ಲಾ ಮೂಲಸೌಕರ್ಯಗಳನ್ನು ಸಮರ್ಪಕವಾಗಿ ಕಲ್ಪಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ಹಣಾಧಿಕಾರಿ ಕೆ. ಆರ್. ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ವಿ. ಜೆ. ಶೋಭಾರಾಣಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಾಗಳು ಉಪಸ್ಥಿತರಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ