Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಸ್ಥಳೀಯ ಸುದ್ದಿ

ಸ್ವದೇಶಿ-ವಿದೇಶಿ ಹಣ್ಣಿನ ಸಸಿಗಳ ಪರಿಚಯ, ಪ್ರದರ್ಶನ ಹಾಗೂ ಮಾರಾಟ ಮೇಳ -- ಆ. 15 ರಿಂದ ಕೊಪ್ಪಳದಲ್ಲಿ ಸಸ್ಯ ಸಂತೆ ಮತ್ತು ತೋಟಗಾರಿಕೆ ಅಭಿಯಾನ


ಕೊಪ್ಪಳ ಆಗಸ್ಟ್ 12: ಕೊಪ್ಪಳ ತೋಟಗಾರಿಕಾ ಇಲಾಖೆ ವತಿಯಿಂದ ತೋಟಗಾರಿಕಾ ಕ್ಷೇತ್ರದಲ್ಲಿ ಅಭಿವೃದ್ಧಿಪಡಿಸಿದ ಉತ್ಕೃಷ್ಟ ಗುಣಮಟ್ಟದ ಸಸಿಗಳ ಮತ್ತು ಆಧಾಯ ಹೆಚ್ಚಿಸುವ ತೋಟಗಾರಿಕೆ ಸಿಸಿ ತಳಿಗಳ ಪರಿಚಯ ಹಾಗೂ ಮಾರಾಟದ ``ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನ’’ ``ಸ್ವದೇಶಿ ವಿದೇಶಿ ಹಣ್ಣಿನ ಸಸಿಗಳ ಪರಿಚಯ, ಪ್ರದರ್ಶನ ಮತ್ತು ಮಾರಾಟ ಮೇಳ-2025’’ ನ್ನು ಆಗಸ್ಟ್ 15ರಿಂದ ಆ. 20ರವರೆಗೆ ನಗರದ ತೋಟಗಾರಿಕೆ ಉಪ ನಿರ್ದೇಶಕರ ಕಛೇರಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದು, ಉದ್ಘಾಟನಾ ಕಾರ್ಯಕ್ರಮವು ಆ. 15ರ ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್. ತಂಗಡಗಿ ಅವರು ಕಾರ್ಯಕ್ರಮ ಉದ್ಘಾಟಿಸುವರು. ತೋಟಗಾರಿಕೆ, ಗಣಿ ಮತ್ತು ಭೂವಿಜ್ಞಾನ ಸಚಿವರಾದ ಎಸ್.ಎಸ್ ಮಲ್ಲರ್ಕಾಜುನ್, ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ಶಾಸಕರಾದ ದೊಡ್ಡನಗೌಡ ಹನುಮಗೌಡ ಪಾಟೀಲ, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ಶಾಸಕರಾದ ಬಸವರಾಜ ರಾಯರಡ್ಡಿ ಅವರು ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸುವರು. ರಾಯಚೂರು, ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲಾ ಸಹಕಾರ ಹಾಲು ಒಕ್ಕೂಟದ ನಿಯಮಿತದ ಅಧ್ಯಕ್ಷರು ಹಾಗೂ ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಗಳಾಗಿ ಸಂಸದರಾದ ಕೆ.ರಾಜಶೇಖರ್ ಹಿಟ್ನಾಳ, ಗಂಗಾವತಿ ಶಾಸಕರಾದ ಜಿ.ಜನಾರ್ಧನರೆಡ್ಡಿ, ವಿಧಾನ ಪರಿಷತ್ ಸದಸ್ಯರುಗಳಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ್ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ, ಮುನಿರಾಬಾದ್ ತುಂಗಭದ್ರಾ ಯೋಜನೆ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ (ಕಾಡಾ) ಅಧ್ಯಕ್ಷರಾದ ಹಸೇನ್ ಸಾಬ್ ನಬಿಸಾಬ್ ದೋಟಿಹಾಳ, ಕೊಪ್ಪಳ ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಶ್ರೀನಿವಾಸ ಗುಪ್ತಾ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ್ ಅವರು ಪಾಲ್ಗೊಳ್ಳುವರು.

ವಿಶೇಷ ಆಹ್ವಾನಿತರಾಗಿ ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆ ಸರ್ಕಾರದ ಕಾರ್ಯದರ್ಶಿ ಡಾ.ಶಮ್ಲಾ ಇಕ್ಬಾಲ್, ಕೃಷ್ಣಭಾಗ್ಯ ಜಲ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕೆ.ಪಿ.ಮೋಹನರಾಜ, ಬೆಂಗಳೂರು ಲಾಲ್ ಬಾಗ್ ತೋಟಗಾರಿಕೆ ನಿರ್ದೇಶಕರಾದ ಡಿ.ಎಸ್ ರಮೇಶ, ಕೊಪ್ಪಳ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್ ಅರಸಿದ್ಧಿ, ಬೆಂಗಳೂರು ಲಾಲ್ ಬಾಗ್ ಕ್ಷೇತ್ರ ಮತ್ತು ನರ್ಸರಿ ಅಪರ ನಿರ್ದೇಶಕ ಕೆ.ಎನ್.ಪರಶಿವಮೂರ್ತಿ, ರಾಜ್ಯ ತೋಟಗಾರಿಕೆ ಮಿಷನ್ ಏಜೆನ್ಸಿಯ ಕಾರ್ಯನಿರ್ವಾಹಕ ನಿರ್ದೇಶಕರು ಹಾಗೂ ಕೊಪ್ಪಳ ಜಿಲ್ಲಾ ನೋಡಲ್ ಅಧಿಕಾರಿಗಳಾದ ಕೆ.ಬಿ ದುಂಡಿ, ಬೆಂಗಳೂರು ಲಾಲ್ ಬಾಗ್ ತಾಳೆ ಬೆಳೆ ಯೋಜನೆಯ ಅಪರ ನಿರ್ದೇಶಕರಾದ ಡಾ. ಎಸ್.ನಂದಾ, ಕಲಬುರಗಿ ವಿಭಾಗೀಯ ತೋಟಗಾರಿಕೆ ಜಂಟಿ ನಿರ್ದೇಶಕ ಮಂಜುನಾಥ ನಾರಾಯಣಪುರ, ಮುನಿರಾಬಾದ್ ತೋಟಗಾರಿಕೆ ಮಹಾವಿದ್ಯಾಲಯದ ಡೀನ್ ಡಾ. ಶಾಂತಪ್ಪ ತಿರಕಣ್ಣನವರ್, ಕೊಪ್ಪಳ ಜಿಲ್ಲಾ ಹಾಪ್‌ಕಾಮ್ಸ್ ಅಧ್ಯಕ್ಷರಾದ ಯಂಕಣ್ಣ ಯರಾಶಿ, ಕೊಪ್ಪಳ ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷರಾದ ಶೇಖರಗೌಡ ಮಾಲಿಪಾಟೀಲ್ ಹಾಗೂ ಕ.ರಾ.ರೈ.ಉ.ಸಂ.ಸ.ಸಂ.ನಿ ನಿರ್ದೇಶಕರು ಹಾಗೂ ಕೊಪ್ಪಳದ ಅಭಿನವಶ್ರೀ ತೋಟಗಾರಿಕೆ ರೈತ ಉತ್ಪಾದಕರ ಸಂಸ್ಥೆಯ ಅಧ್ಯಕ್ಷರಾದ ಕೆ.ಶಿವರಾಮಪ್ಪ ಅವರು ಉಪಸ್ಥಿತರಿರುವರು.

ಕಾರ್ಯಕ್ರಮದಲ್ಲಿ ಕೊಪ್ಪಳದ ತೋಟಗಾರಿಕೆ ಉಪ ನಿರ್ದೇಶಕ ಕೃಷ್ಣ ಸಿ. ಉಕ್ಕುಂದ, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಮಂಜುನಾಥ ದೊಡ್ಡಪತ್ತಾರ ಹಾಗೂ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿರುವರು ಎಂದು ಕೊಪ್ಪಳ ತೋಟಗಾರಿಕೆ ಇಲಾಖೆ ಪ್ರಕಟಣೆ ತಿಳಿಸಿದೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ