Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

2024ನೇ ಸಾಲಿನ ಪುಸ್ತಕ ಬಹುಮಾನಕ್ಕಾಗಿ ಜಾನಪದ ಕೃತಿಗಳ ಆಹ್ವಾನ


ಬಳ್ಳಾರಿ,ಏ.26



ಕರ್ನಾಟಕ ಜಾನಪದ ಅಕಾಡೆಮಿಯು 2024 ನೇ ಸಾಲಿನಲ್ಲಿ ದಿನಾಂಕ:01.01.2024 ರಿಂದ 31.12.2024ರವರೆಗೆ ಪ್ರಥಮ ಆವೃತ್ತಿಯಲ್ಲಿ ಮುದ್ರಣಗೊಂಡಿರುವ (ತಾಂತ್ರಿಕ ಹಾಗೂ ಪೂರ್ವಭಾವಿ ಪುಟಗಳನ್ನು ಹೊರತುಪಡಿಸಿ) ಕನಿಷ್ಟ 150 ಪುಟಗಳಿಗೂ ಮೇಲ್ಪಟ್ಟಿರುವಂತೆ, ವಿವಿಧ ನಾಲ್ಕುಪ್ರಕಾರಗಳ ಅತ್ಯುತ್ತಮ ಜಾನಪದ ಕೃತಿಗಳಿಗೆ ಬಹುಮಾನ ನೀಡುವ ಯೋಜನೆಯಡಿ ಜಾನಪದ ಕೃತಿಗಳನ್ನು ಪುಸ್ತಕ ಬಹುಮಾನಕ್ಕಾಗಿ ಆಹ್ವಾನಿಸಿದೆ.



ಲೇಖಕರು, ಪ್ರಕಾಶಕರು, ಸಂಪಾದಕರು ತಮ್ಮ 1 ಕೃತಿಯನ್ನು ರಿಜಿಸ್ಟ್ರಾರ್, ಕರ್ನಾಟಕ ಜಾನಪದ ಅಕಾಡೆಮಿ, 2ನೇ ಮಹಡಿ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು-560002 ಇವರಿಗೆ ಮೇ 20 ರೊಳಗೆ ತಲುಪುವಂತೆ ಖುದ್ದಾಗಿ, ಕೊರಿಯರ್ ಅಥವಾ ಅಂಚೆ ಮೂಲಕ ಕಳುಹಿಸಿಕೊಡಲು ಕೋರಿದೆ.



ಈ ಪುಸ್ತಕವು ತಜ್ಞರಿಂದ ಪ್ರಕಾರವಾರು ಆಯ್ಕೆಯಾದಲ್ಲಿ, ನಂತರ ಪುಸ್ತಕ ಬಹುಮಾನಕ್ಕೆ ಲೇಖಕರಿಂದ ಉಳಿದಂತೆ 03 ಪ್ರತಿಗಳನ್ನು ಮೌಲ್ಯಮಾಪಕರ ಪರಿಶೀಲನೆಗೆ ತರಿಸಿಕೊಳ್ಳಲಾಗುವುದು.



*ಪ್ರಕಾರಗಳು:*

ಜನಪದ ಗದ್ಯ, ಜನಪದ ಪದ್ಯ, ಜನಪದ ವಿಚಾರ-ವಿಮರ್ಶೆ- ಸಂಶೋಧನೆ ಮತ್ತು ಜನಪದ ಸಂಕೀರ್ಣ.



ವಿ.ಸೂ: ಈಗಾಗಲೇ ಪುಸ್ತಕ ಬಹುಮಾನ ಪಡೆದ ಸಂಪಾದಕರು / ಲೇಖಕರು ಮತ್ತೆ ಪುಸ್ತಕ ಬಹುಮಾನ ಯೋಜನೆಗೆ ಕೃತಿಗಳನ್ನು ಕಳುಹಿಸಬಾರದು.



ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಜಾನಪದ ಅಕಾಡೆಮಿ ಕನ್ನಡ ಭವನ, 2 ನೇ ಮಹಡಿ

ಜೆ.ಸಿ.ರಸ್ತೆ, ಬೆಂಗಳೂರು-560002 ಅಥವಾ ದೂ. 080 - 22215509 ಗೆ ಸಂಪರ್ಕಿಸಬಹುದು ಎಂದು ಕನ್ನಡ ಜಾನಪದ ಅಕಾಡೆಮಿಯ ರಿಜಿಸ್ಟ್ರಾರ್ ಅವರು ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ