Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಶಿಕ್ಷಣ ಸುದ್ದಿ

8ನೇ ತರಗತಿ ದಾಖಲಾತಿಗಾಗಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ


ಬಳ್ಳಾರಿ,ಆ.14
ಉತ್ತರಾಖಂಡ ರಾಜ್ಯದ ಡೆಹರಾಡೂನಲ್ಲಿರುವ ರಾಷ್ಟಿಯ ಇಂಡಿಯನ್ ಮಿಲಿಟರಿ ಕಾಲೇಜ್‌ನಲ್ಲಿ 2026ನೇ ಸಾಲಿಗೆ 8ನೇ ತರಗತಿಗಾಗಿ ಪ್ರವೇಶ ಬಯಸುವ  ಕರ್ನಾಟಕ ರಾಜ್ಯದ  ಬಾಲಕ ಮತ್ತು ಬಾಲಕಿಯರಿಗೆ ಅರ್ಹತಾ ಪ್ರವೇಶ  ಪರೀಕ್ಷೆಯನ್ನು  ಬೆಂಗಳೂರು ಕೇಂದ್ರದಲ್ಲಿ 2025 ರ ಡಿಸೆಂಬರ್ 07 ರಂದು ನಡೆಯಲಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಶಾಲೆಯಲ್ಲಿ 7ನೇ ತರಗತಿಯಲ್ಲಿ ಓದುತ್ತಿರಬೇಕು ಅಥವಾ ಉತ್ತೀರ್ಣರಾಗಿರಬೇಕು ಹಾಗೂ ದಿನಾಂಕ 01-07-2026 ರಂತೆ ಹನ್ನೊಂದುವರೆ ವರ್ಷದಿಂದ 13 ವರ್ಷದೊಳಗಿರಯವ ಅಂದರೆ (ದಿನಾಂಕ 02-07-2013 ರಿಂದ 01-01-2015 ರೊಳಗೆ ಜನಿಸಿರುವ) ಬಾಲಕರು ಮತ್ತು ಬಾಲಕಿಯರು ಮಾತ್ರ ಅರ್ಹರಿರುತ್ತಾರೆ.
ಈ ಸಂಸ್ಥೆಯ ಮುಖ್ಯ ಗುರಿ ಯುವಕರನ್ನು ದೇಶದ ಸಶಸ್ತç  ಪಡೆಗೆ ಸೇರಲು ಸಿದ್ದಗೊಳಿಸುವುದು ಹಾಗೂ ಈ ನಿಟ್ಟಿನಲ್ಲಿ ಸರ್ವ ರೀತಿಯ ವಿದ್ಯಾಭ್ಯಾಸ/ತರಬೇತಿ ನೀಡುವುದು.
ಕಾಲೇಜಿನಲ್ಲಿ ವರ್ಷವೊಂದಕ್ಕೆ ವಿದ್ಯಾಭ್ಯಾಸದ ಶುಲ್ಕ ರೂ.98,650(ಸಾಮಾನ್ಯ ವರ್ಗ) ಹಾಗೂ ರೂ. 81,850 (ಎಸ್‌ಸಿ/ಎಸ್‌ಟಿ) ಗಳಾಗಿರುತ್ತದೆ. ಇದು ಕಾಲಕಾಲಕ್ಕೆ ಹೆಚ್ಚಾಗಬಹುದು. ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯು ಪ್ರವೇಶ ಸಮಯದಲ್ಲಿ ರೂ.50,000 ಗಳನ್ನು ಭದ್ರತಾ ಠೇವಣಿ ನೀಡಬೇಕಾಗುತ್ತದೆ. ಮೊತ್ತವನ್ನು ವಿದ್ಯಾರ್ಥಿಯು ಪದವೀಧರನಾದ ಮತ್ತು ವಿದ್ಯಾರ್ಥಿನಿಯು ಪದವೀಧರರೆಯಾದ ಬಳಿಕ ಹಿಂತಿರುಗಿಸಲಾಗುವುದು.
*ಅರ್ಜಿ ನಮೂನೆ ಪಡೆಯುವ ವಿಧಾನ:*
ಪ್ರಾಸ್ಪೆಕ್ಟಸ್, ಅರ್ಜಿ ನಮೂನೆ ಮತ್ತು ಹಳೆಯ ಪ್ರಶ್ನೆ ಪತ್ರಿಕೆಗಳ ಕಿರುಪುಸ್ತಕವನ್ನು ರಾಷ್ಟಿಯ ಭಾರತೀಯ ಮಿಲಟರಿ ಕಾಲೇಜು, ಗರಹಿ ಕ್ಯಾಂಟ್, ಡೆಹ್ರಾಡೂನ್, ಉತ್ತರಾಖಂಡ್, ಪಿನ್-248003 ಮೂಲಕ ಪಡೆಯಬಹುದು.
*ಆನ್‌ಲೈನ್ ಪಾವತಿ:*
ಸಾಮಾನ್ಯ ಅಭ್ಯರ್ಥಿಗಳಿಗೆ ರೂ.600 ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ರೂ.555 ಇದ್ದು, ಆನ್‌ಲೈನ್ ಪಾವತಿ ಮಾಡುವ ಮೂಲಕ ಪ್ರಾಸ್ಪೆಕ್ಟಸ್ ಕಮ್ ಅರ್ಜಿ ನಮೂನೆ ಮತ್ತು ಹಳೆಯ ಪ್ರಶ್ನೆ ಪತ್ರಿಕೆಗಳ ಕಿರು ಪುಸ್ತಕಗಳನ್ನು ಸಹ ಪಡೆಯಬಹುದು.
ವೆಬ್‌ಸೈಟ್  www.rimc.gov.in ಪಾವತಿ ಸ್ವೀಕರಿಸಿದ ನಂತರ ಪ್ರಾಸ್ಪೆಕ್ಟಸ್ ಕಮ್ ಅರ್ಜಿ ನಮೂನೆ ಮತ್ತು ಹಳೆಯ ಪ್ರಶ್ನೆ ಪತ್ರಿಕೆಗಳ ಕಿರುಪುಸ್ತಕಗಳನ್ನು ಸ್ಪೀಡ್ ಪೋಸ್ಟ್ ಮೂಲಕ ರವಾನಿಸಲಾಗುತ್ತದೆ.
*ಬೇಡಿಕೆ ಕರಡು ಕಳುಹಿಸುವ ವಿಧಾನ:*
ಪ್ರಾಸ್ಪೆಕ್ಟಸ್ ಕಮ್ ಅರ್ಜಿ ನಮೂನೆ ಮತ್ತು ಹಳೆಯ ಪ್ರಶ್ನೆ ಪತ್ರಿಕೆಗಳ ಕಿರುಪುಸ್ತವನ್ನು ಸಾಮಾನ್ಯ ಅಭ್ಯರ್ಥಿಗಳಿಗೆ ರೂ.600 ಗಳ ಬೇಡಿಕೆಯ ಕರಡು ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ರೂ.555 ಗಳ ಬೇಡಿಕೆಯ ಕರಡು ಕಳುಹಿಸಿ ಲಿಖಿತ ವಿನಂತಿಯ ಪರವಾಗಿ ಜಾತಿ ಪ್ರಮಾಣ ಪತ್ರದೊಂದಿಗೆ  “THE COMMANDANT RIMC FUND” PAYABLE AT HDFC BANK, BALLUPUR CHOWK, DEHRADUN (BANK CODE. 1399), UTTARAKHAND ಈ ವಿಳಾಸಕ್ಕೆ ಕಳುಹಿಸಬಹುದು. ಪಿನ್ ಕೋಡ್ ಮತ್ತು ಸಂಪರ್ಕ ಸಂಖ್ಯೆಯೊAದಿಗೆ ದೊಡ್ಡ ಅಕ್ಷರಗಳಲ್ಲಿ ಟೈಪ್ ಮಾಡಿ ಬರೆಯಬೇಕು. ಕಾನೂನು ಬಾಹಿರ ಅಥವಾ ಅಪೂರ್ಣ ವಿಳಾಸದಿಂದ ಉಂಟಾಗುವ ಪ್ರಾಸ್ಪೆಕ್ಟಸ್‌ನ ಸಾಗಾಣಿಕೆಯಲ್ಲಿ ಯಾವುದೇ ಅಂಚೆ ವಿಳಂಬ ಅಥವಾ ನಷ್ಟಕ್ಕೆ ಖIಒS ಸಂಸ್ಥೆಯು ಜವಾಬ್ದಾರರಾಗಿರುವುದಿಲ್ಲ.
ಆನ್ ಲೈನ್ ಪಾವತಿ ರಾಷ್ಟಿಯ ಇಂಡಿಯನ್ ಮಿಲಿಟರಿ ಕಾಲೇಜ್‌ನ ಜಾಲತಾಣವು ತಾಂತ್ರಿಕವಾಗಿ ಅಭಿವೃದ್ಧಿಗೊಳಿಸುವ ಕಾರ್ಯ ಪ್ರಗತಿಯಲ್ಲಿ ಇರುವುದರಿಂದ ರಾಷ್ಟಿçÃಯ ಇಂಡಿಯನ್ ಮಿಲಿಟರಿ ಕಾಲೇಜಿನ ಜಾಲತಾಣ ಸದ್ಯಕ್ಕೆ ಲಭ್ಯವಿರುವುದಿಲ್ಲ.
ಹಾಗಾಗಿ ಪ್ರಾಸ್ಪೆಕ್ಟಸ್ ಕಮ್ ಅರ್ಜಿ ನಮೂನೆ ಮತ್ತು ಹಳೆಯ ಪ್ರಶ್ನೆ ಪತ್ರಿಕೆಗಳ ಕಿರುಪುಸ್ತಕಗಳಿಗೆ ಆನ್‌ಲೈನ್ ಮೂಲಕ ಹಣ ಪಾವತಿಸಲು ಸಾಧ್ಯವಿರುವುದಿಲ್ಲ. ತಾಂತ್ರಿಕವಾಗಿ ಅಭಿವೃದ್ಧಿ ಕಾರ್ಯ ಮುಗಿದನಂತರ ರಾಷ್ಟಿçÃಯ ಇಂಡಿಯನ್ ಮಿಲಿಟರಿ ಕಾಲೇಜ್‌ನ ಜಾಲತಾಣ ತೆರೆಯಲಾಗುವುದು. ಸದ್ಯಕ್ಕೆ  ಆಕಾಂಕ್ಷಿಗಳು ಬೇಡಿಕೆ ಹುಂಡಿ ಕಳುಹಿಸುವ ಮೂಲಕ ಪ್ರಾಸ್ಪೆಕ್ಟಸ್ ಕಮ್ ಅರ್ಜಿ ನಮೂನೆ ಮತ್ತು ಹಳೆಯ ಪ್ರಶ್ನೆ ಪತ್ರಿಕೆಗಳ ಕಿರುಪುಸ್ತಕಗಳನ್ನು ಪಡೆದುಕೊಳ್ಳಬಹುದು.
ಭರ್ತಿ ಮಾಡಿದ ನಿಗದಿತ ಅರ್ಜಿ ನಮೂನೆಯನ್ನು ದ್ವಿಪ್ರತಿಯಲ್ಲಿ ಅಕ್ಟೋಬರ್ 15 ರೊಳಗಾಗಿ ನಿರ್ದೇಶಕರು ಸೈನಿಕ ಕಲ್ಯಾಣ  ಮತ್ತು ಪುನರ್ವಸತಿ ಇಲಾಖೆ, ಫೀಲ್ಡ್ ಮಾರ್ಷಲ್ ಕೆ ಎಮ್ ಕಾರ್ಯಪ್ಪ ಭವನ್, ನಂ, 58 ಫೀಲ್ಡ್ ಮಾರ್ಷಲ್ ಕೆ ಎಮ್ ಕಾರ್ಯಪ್ಪ ರಸ್ತೆ, ಬೆಂಗಳೂರು-25 ಇವರಿಗೆ ಸಲ್ಲಿಸಬೇಕು.
*ಬೇಕಾದ ದಾಖಲೆಗಳು:*
ಮುನ್ಸಿಪಾಲಿಟಿ, ಗ್ರಾಮ ಪಂಚಾಯತ್  ಪ್ರಾಧಿಕಾರ ವತಿಯಿಂದ ಆಂಗ್ಲ ಭಾಷೆಯಲ್ಲಿ ಪಡೆದ  ಅಭ್ಯರ್ಥಿಯ ಜನ್ಮ ಪ್ರಮಾಣ ಪತ್ರದ ಧೃಢೀಕೃತ ಪ್ರತಿ. 5 ಪಾಸಪೋರ್ಟ್ ಅಳತೆಯ ಭಾವಚಿತ್ರಗಳು (ಅರ್ಜಿಯಲ್ಲಿ ಅಂಟಿಸಿದ ಭಾವಚಿತ್ರವನ್ನು ಸೇರಿಸಿ). ಪರಿಶಿಷ್ಟ ಜಾತಿ, ಪರಿಶಿಷ್ಟ  ಪಂಗಡದವರು, ಸಕ್ಷಮ ಪ್ರಾಧಿಕಾರದಿಂದ ನೀಡಿದ ಜಾತಿ ಪ್ರಮಾಣ ಪತ್ರದ ದೃಡೀಕೃತ (ಪ್ರತಿ ಆಂಗ್ಲ ಭಾಷೆಯಲ್ಲಿ ಇರುವಂತೆ). ಪರೀಕ್ಷಾ ಪ್ರವೇಶ ಪತ್ರವನ್ನು ತ್ವರಿತ ಅಂಚೆದ್ವಾರ ರವಾನಿಸಲು ರೂ.42 ರ ಅಂಚೆ ಚೀಟಿ ಲಗತ್ತಿದ ಸ್ವವಿಳಾಸ ಲಕೋಟೆ.
ಮುಖ್ಯೋಪಾಧ್ಯಾಯರಿಂದ ಅಭ್ಯರ್ಥಿಯ ಜನ್ಮ ದಿನಾಂಕ  ಮತ್ತು ಓದುತ್ತಿರುವ ತರಗತಿ ಬಗ್ಗೆ ಪಡೆದ ಪ್ರಮಾಣ ಪತ್ರದ ಮೂಲ ಪ್ರತಿ (ದೃಡೀಕರಿಸಿದ ಅಭ್ಯರ್ಥಿಯ ಭಾವ ಚಿತ್ರದೊಂದಿಗೆ). ಆಧಾರ್ ಕಾರ್ಡ್ ಪ್ರತಿ (ಕಡ್ಡಾಯ). ಈ ರಾಜ್ಯದ ವಾಸಸ್ಥಾನ ದೃಢೀಕರಣ ಪತ್ರ ತಹಶೀಲ್ದಾರರಿಂದ ಪಡೆದಿರಬೇಕು.
ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಅಥವಾ ದೂ. 080-25589459 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ನಿರ್ದೇಶಕ ಎಮ್.ಎಸ್.ಲೋಲಾಕ್ಷ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ